
ಮಂಡ್ಯ: ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ಸಾವು
Team Udayavani, Jun 4, 2023, 12:10 PM IST

ಮಂಡ್ಯ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ತಿರುಮಲಾಪುರ ಭಾನುವಾರ ಮುಂಜಾನೆ ನಡೆದಿದೆ.
ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತನ ವಿವರ ದೊರೆತಿಲ್ಲ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುಮಲಾಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದರು. ಇವರ ಕಾರು ತಿರುಮಲಾಪುರ ಗೇಟ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ತ್ಯಾಜ್ಯ ಸಾಗಾಟದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಅಪಘಾತದ ಭೀಕರತೆಯನ್ನು ಬಿಂಬಿಸಿದೆ.
ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್ಪಿ ಲಕ್ಷ್ಮಿ ಪ್ರಸಾದ್, ಸಿಪಿಐ ನಿರಂಜನ್ ಹಾಗೂ ಬೆಳ್ಳೂರು ಪೊಲೀಸ್ ಠಾಣೆ ಪಿಎಸ್ ಐ ಲೋಕೇಶ್ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ್ಯು

Cauvery issue; ನಟ ದರ್ಶನ್ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

Cauvery Issue: ಸೆ.23ರಂದು ಬಂದ್ ಗೆ ಕರೆ ನೀಡಿದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ

Darshan Puttannaiah: ಮೇಲುಕೋಟೆ ದೇಗುಲದ ಸುತ್ತ ಕಾಂಕ್ರಿಟ್ ರಸ್ತೆ