ಚುಂಚನಗಿರಿ ಏತ ನೀರಾವರಿ ಯೋಜನೆಗೆ ಚಾಲನೆ
Team Udayavani, Nov 27, 2020, 4:28 PM IST
ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ತಪ್ಪಲಲ್ಲಿರುವ ಹಲವುಕೆರೆಗಳಿಗೆ ಚುಂಚನಗಿರಿ ಶಾಖಾ ಕಾಲುವೆ ಮೂಲಕ ಹೇಮಾವತಿ ನೀರುಣಿಸುವ ಏತ ನೀರಾವರಿ ಯೋಜನೆಗೆ ಆದಿ ಚುಂಚನಗಿರಿಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
ಉಸ್ತುವಾರಿ ಸಚಿವಕೆ.ಸಿ.ನಾರಾಯಣಗೌಡ, ಶಾಸಕ ಸುರೇಶ್‌ಗೌಡ ಸಾಥ್ ನೀಡಿದರು. ಬುಧವಾರ ರಾತ್ರಿಯೇ ಮಠಕ್ಕೆ ಆಗಮಿಸಿದ್ದ ಸಚಿವರು ಬಿ.ಜಿ.ನಗರದ ವಿಜ್ಞಾತಂ ಭವನದಲ್ಲಿವಾಸ್ತವ್ಯ ಹೂಡಿದ್ದರು. ಬೆಳಗ್ಗೆ ಮಠಕ್ಕೆ ಭೇಟಿ ನೀಡಿ ಕಾಲಭೈರವನಿಗೆ ಪೂಜೆ ಸಲ್ಲಿಸಿದ ಸಚಿವರು ನಂತರ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನ ಭೇಟಿಯಾಗಿ ಆಶೀರ್ವಾದ ಪಡೆದರು.
ತದನಂತರ ಭಕ್ತಾದಿಗಳ ಅನುಕೂಲಕ್ಕಾಗಿ ಬೆಟ್ಟದ ಸುತ್ತಲೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಚಿವರು ಭೂಮಿ ಪೂಜೆ ನೆರವೇರಿಸಿದರು. ಬೀದರ್- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹರಿಯುವ ಹೇಮಾವತಿಯ ಚುಂಚನಗಿರಿ ಶಾಖಾ ಕಾಲುವೆ ಬಳಿ ನಿರ್ಮಿಸಲಾಗಿರುವ ಏತ ನೀರಾವರಿ ಯಂತ್ರಾಗಾರದ ಕೊಠಡಿಯಲ್ಲಿ ನೀರೆತ್ತುವಯಂತ್ರದ ಸ್ವೀಚ್ ಒತ್ತುವ ಮೂಲಕ 2.65ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಲಾಯಿತು.ಬೆಟ್ಟದ ತಪ್ಪಲಲ್ಲಿರುವ ತಪೋವನ ಸೇರಿದಂತೆಹಲವು ಕೆರೆ- ಕಟ್ಟೆಗಳಿಗೆ ನೀರುಣಿಸುವ ಯೋಜನೆಇದಾಗಿದ್ದು. ಇದರಿಂದ ಕ್ಷೇತ್ರಕ್ಕೆ ಪ್ರಯೋಜನವಾಗಲಿದೆ. ಶ್ರೀಕ್ಷೇತ್ರದ ಮತ್ತೂಂದು ಭಾಗದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಪ್ರಗತಿಯಲ್ಲಿರುವಅಯ್ಯನಕೆರೆ ಕಾಮಗಾರಿ ಯನ್ನು ಸಚಿವರು ಮತ್ತು ಶಾಸಕರೊಂದಿಗೆ ಸ್ವಾಮೀಜಿ ವೀಕ್ಷಿಸಿದರು. ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಕಾವೇರಿ ನೀರಾವರಿ ನಿಗಮದ ತುರುವೇಕೆರೆ ವಲಯದಅಧೀಕ್ಷಕಎಂಜಿನಿಯರ್‌ವರದಯ್ಯ,ಎಡೆಯೂರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜೇಶ್ ಗೌಡ, ಬೆಳ್ಳೂರು ಉಪ ವಿಭಾಗದ ಎಇಇ ರುದ್ದೇಶ್, ಗುತ್ತಿಗೆದಾರ ಗೌರೀಶ್, ಜೆಡಿಎಸ್ ಎಸ್ಸಿ,ಎಸ್ಟಿ ಯುವ ಘಟಕದ ತಾಲೂಕು ಅಧ್ಯಕ್ಷ ಲೋಹಿತ್ ಇತರರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್ಗಳ ದೇಣಿಗೆ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!
ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ