ಭ್ರಷ್ಟಾಚಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ


Team Udayavani, May 9, 2019, 3:47 PM IST

man-1

ಮದ್ದೂರು: ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳಿಗೆ ಅನಗತ್ಯ ವಿಳಂಬ, ನಿರ್ಲಕ್ಷ್ಯ ತೋರಿದಲ್ಲಿ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳಿಗೆ ದೂರು ನೀಡಬಹುದೆಂದು ದಕ್ಷಿಣ ವಲಯ ಎಸಿಬಿ ಪೊಲೀಸ್‌ ವರಿಷ್ಠಾಧಿಕಾರಿ ರಶ್ಮಿ ತಿಳಿಸಿದರು.

ಪಟ್ಟಣದಲ್ಲಿ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಗಳ ದೂರು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ರೈತರು ಹಾಗೂ ಸಾರ್ವಜ ನಿಕರಿಂದ ಲಂಚ ಕೇಳಿದಲ್ಲಿ ಎಸಿಬಿಗೆ ದೂರು ನೀಡಬಹುದು. ಅಧಿಕಾರಿಗಳು ಸಮರ್ಪಕ ವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಇಲಾಖೆಗಳಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಂತೆ ಅಗತ್ಯ ಕ್ರಮ ವಹಿಸಬೇಕೆಂದರು.

ಲಂಚ ಆರೋಪ: ಕೆಲ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ ಕ್ರಮ ಕೈಗೊಳ್ಳುವ ಜತೆಗೆ ಅಧಿಕಾರಿಗಳು ಸರ್ಕಾರಿ ಸೌಲಭ್ಯಗಳನ್ನು ಅರ್ಹ ಫ‌ಲಾನುಭವಿಗಳಿಗೆ ಸಮರ್ಪಕವಾಗಿ ವಿತರಿಸುವ ಜತೆಗೆ ಯಾವುದೇ ಅಕ್ರಮ ವೆಸಗದಂತೆ ಸೂಚಿಸಿದರು.

ಕಳೆದ ಸಾಲಿನಲ್ಲಿ 153 ಹಾಗೂ ಪ್ರಸಕ್ತ ಸಾಲಿನಲ್ಲಿ 50 ದೂರು ಸಾರ್ವಜನಿಕರಿಂದ ಬಂದಿದ್ದು, ಈ ಪೈಕಿ 195 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದೇವೆ. ಬಾಕಿ ಉಳಿದಿರುವ 8 ಪ್ರಕರಣಗಳ ಸಂಬಂದ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

ಗೋಮಾಳ ಒತ್ತುವರಿ: ತಾಲೂಕಿನ ಮೆಣ ಸಗೆರೆ ಜಯರಾಮು ಸರ್ಕಾರಿ ಗೋಮಾಳ ವನ್ನು ಅಕ್ರಮವಾಗಿ ಒತ್ತುವರಿ ಮಾಡಿ ಕೊಂಡಿದ್ದು ತಹಶೀಲ್ದಾರ್‌ರಿಗೆ ಹಲ ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ದೂರು ನೀಡಿದರು.

ಅರ್ಜಿ ಸ್ವೀಕರಿಸಿದ ಎಸಿಬಿ ಅಧಿಕಾರಿ ರಶ್ಮಿ, ಅರ್ಜಿ ಪರಿಶೀಲಿಸಿ ಕೂಡಲೇ ಒತ್ತುವರಿ ಜಾಗ ತೆರವುಗೊಳಿಸಿ ಜನ ಜಾನುವಾರುಗಳು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸುವಂತೆ ಕಂದಾಯ ಅಧಿಕಾರಿಗೆ ಸೂಚಿಸಿದರು.

ತ್ಯಾಜ್ಯ ನೀರು ರಸ್ತೆಗೆ: ಮದ್ದೂರು ಪುರಸಭೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಯುಜಿಡಿ ಸಂಪರ್ಕದ ತ್ಯಾಜ್ಯ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನಾನುಕೂಲವಾಗಿದೆ. ಪುರಸಭೆ ಅಧಿಕಾರಿಗಳಿಗೆ 9 ತಿಂಗಳಿಂದಲೂ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿ ನಾರಾಯಣ್‌ ದೂರು ನೀಡಿದರು. ಆರೋಗ್ಯಾಧಿಕಾರಿ ಶಿವಕುಮಾರ್‌ರನ್ನು ತರಾಟೆಗೆ ತೆಗೆದುಕೊಂಡ ಎಸಿಬಿ ಡಿವೈಎಸ್‌ಪಿ ಮಂಜುನಾಥ್‌, 9 ತಿಂಗಳಿಂದಲೂ ಯುಜಿಡಿ ಸಂಪರ್ಕ ದುರಸ್ತಿ ಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದೇಕೆ? ಒಂದು ವಾರದೊಳಗಾಗಿ ಅಗತ್ಯ ಕ್ರಮ ವಹಿಸದಿದ್ದಲ್ಲಿ ಮೇಲಧಿಕಾರಿಗಳಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪುರಸಭಾ ಅಧಿಕಾರಿಗಳಿಗೆ ಎಚ್ಚರಿಸಿದರು.

ಅಕ್ರಮ ಖಾತೆ: ಮದ್ದೂರು ನಿವಾಸಿ ಯೊಬ್ಬರಿಗೆ ಪುರಸಭೆ ಮುಖ್ಯಾಧಿಕಾರಿ ಮಹೇಶ್‌ ನಿವೇಶನಕ್ಕೆ ಅಕ್ರಮ ಖಾತೆ ಮಾಡಿ ಕೊಟ್ಟಿದ್ದು ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಪುರಸಭೆ ಸದಸ್ಯೆ ಪ್ರಿಯಾಂಕ ಅಪ್ಪುಗೌಡ ದೂರು ನೀಡಿದರು.

ಅಕ್ರಮ ಖಾತೆ ಮಾಡಿಕೊಟ್ಟಿರುವ ಬಗ್ಗೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆ ದಿದ್ದು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಮಹೇಶ್‌ ಬೇರೆಡೆಗೆ ವರ್ಗಾ ವಣೆಗೊಂಡಿದ್ದಾರೆ. ಈಗಾಗಲೇ ಈ ಸಂಬಂಧ ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದರು.

ಎಸಿಬಿ ಡಿವೈಎಸ್‌ಪಿ ಮಂಜುನಾಥ, ವೃತ್ತ ನಿರೀಕ್ಷಕ ಪ್ರದೀಪ್‌ ಇತರರಿದ್ದರು.

ಟಾಪ್ ನ್ಯೂಸ್

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

Mandya: Theft of sandal trees from school premises after threatening security guards

Mandya: ಸೆಕ್ಯೂರಿಟಿ ಗಾರ್ಡ್ ಬೆದರಿಸಿ ಶಾಲಾ ಆವರಣದ ಗಂಧದ ಮರಗಳ ಕಳವು

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

police crime

Srirangapatna; ಕಾರಿನಲ್ಲಿ ಜಾನುವಾರು ಸಾಗಾಟ:ಉಸಿರುಗಟ್ಟಿ 6 ಕರುಗಳು ಸಾವು

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.