ಕೋವಿಡ್ ವರದಿ ಬರುವ ಮುನ್ನವೇ ಮಹಿಳೆ ಸಾವು

Team Udayavani, Apr 25, 2021, 3:04 PM IST

Untitled-1

ಮಳವಳ್ಳಿ: ಅನಾರೋಗ್ಯದಿಂದ ಕೋವಿಡ್‌ ಪರೀಕ್ಷೆಗೆ ಐದು ದಿನಗಳ ಹಿಂದೆ ಒಳಗಾಗಿದ್ದ ಮಹಿಳೆ ವರದಿ ಬರುವ ಮುನ್ನವೇ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಘಟನೆ ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಲಸಿಕೆ ಪಡೆದಿದ್ದ ಮಹಿಳೆಗೆ ಜ್ವರ: ಎಂ.ಶೆಟ್ಟಹಳ್ಳಿ ಗ್ರಾಮದ 55 ವರ್ಷದ ಮಹಿಳೆ ಬೆಂಗಳೂರಿನ ಮಗಳ ಮನೆಯಲ್ಲಿದ್ದರು. ಏ.16ರಂದು ಎಂ.ಶೆಟ್ಟಹಳ್ಳಿ ಗ್ರಾಮದ ತಮ್ಮ ಮನೆಗೆ ಬಂದಿದ್ದರು. 17ರಂದು ಗ್ರಾಮದಲ್ಲಿ ಕೋವಿಡ್‌ ಲಸಿಕೆ ಪಡೆದಿದ್ದರು. 18ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿ, 19ರಂದು ಕೋವಿಡ್‌ ಪರೀಕ್ಷೆಗೆಒಳಪಟ್ಟಿದ್ದರು. ಆದರೆ ವರದಿ ಇನ್ನೂಬಂದಿರಲಿಲ್ಲ. ಶನಿವಾರ ಬೆಳಗ್ಗೆ ಉಸಿರಾಟದಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ಚಿಕಿತ್ಸೆಕೊಡಿಸಲು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಮನೆಯ ಜಗಲಿ ಮೇಲೆ ಅನಾಥವಾದ ಶವ: ಆಂಬ್ಯುಲೆನ್ಸ್‌ ಹಾಗೂ ಆರೋಗ್ಯ ಇಲಾಖೆಯಸಿಬ್ಬಂದಿಗಳು ಅವರ ಮನೆಯ ಜಗಲಿ ಮೇಲೆ ಶವವಿಟ್ಟು ತೆರಳಿದ್ದರು. ಕೊರೊನಾದಿಂದ ಮಹಿಳೆ ಮೃತಪಟ್ಟಿರಬಹುದು ಎಂದು ಭಾವಿಸಿದ ಗ್ರಾಮಸ್ಥರು ಭಯದಿಂದ ಶವದಬಳಿ ತೆರಳಲಿಲ್ಲ. ಇದರಿಂದ ಐದಾರು ಗಂಟೆಗಳಕಾಲ ಶವ ಅನಾಥವಾಗಿ ಜಗಲಿಯ ಮೇಲೆ ಬಿದ್ದಿತ್ತು.

ಆರೋಗ್ಯಾ ಧಿಕಾರಿಗೆ ಮಾಹಿತಿ: ಗ್ರಾಮ ಪಂಚಾಯಿತಿ ಸದಸ್ಯ ಮನೋಹರ್‌ ಅವರು ತಾಲೂಕು ಆಡಳಿತದ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಗ್ಯ ವೈದ್ಯಾಧಿಕಾರಿ ಡಾ. ಶಿವಸ್ವಾಮಿ ಅವರನ್ನು ಸ್ಥಳಕ್ಕೆ ಕರೆಸಿಕೊಂಡರು. ಮಂಡ್ಯದಿಂದ ಬಂದ ತಂಡ ಮೃತಪಟ್ಟ ಮಹಿಳೆಯ ಶವವನ್ನು ಅಂತ್ಯಕ್ರಿಯೆ ಮಾಡಿದರು.

ಆರೋಗ್ಯ ವೈದ್ಯಾ ಧಿಕಾರಿ ಡಾ.ಶಿವಸ್ವಾಮಿ ಮಾತನಾಡಿ, ಬೆಂಗಳೂರಿನಿಂದ ಕಳೆದ ವಾರ ಬಂದಿದ್ದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದರು. ಕೋವಿಡ್‌ ಲಸಿಕೆ ಪಡೆದಿದ್ದ ಅವರನ್ನು ಏ.19ರಂದು ಕೋವಿಡ್‌ ಪರೀಕ್ಷಗೆ ಒಳಪಡಿಸಲಾಗಿತ್ತು. ವರದಿ ಕೈಸೇರಬೇಕಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಗ್ರಾಪಂ ಸಿಬ್ಬಂದಿಗಳಿಂದ ಸ್ಯಾನಿಟೈಸ್‌ ಮಾಡಿಸಲಾಗಿದೆ ಎಂದು ಮಾಹಿತಿ ನೀಡಿದರು.

5ದಿನ ಕಳೆದರೂ ವರದಿ ಬಂದಿಲ್ಲ: ಗ್ರಾಪಂ ಸದಸ್ಯ ಮನೋಹರ್‌ ಮಾತನಾಡಿ, ಬೆಂಗಳೂರಿನಿಂದ ಬಂದಿದ್ದ ಮಹಿಳೆ ಒಂದು ವಾರದಿಂದ ಜ್ವರದಿಂದ ನರಳುತ್ತಿದ್ದರು. ಈ ವಿಚಾರವನ್ನು ಯಾರೊಂದಿಗೂ ಹೇಳಿಕೊಂಡಿಲ್ಲ. ಕೋವಿಡ್‌ ಪರೀಕ್ಷೆ ಮಾಡಿಸಿ 5 ದಿನ ಕಳೆದರೂಇನ್ನೂ ವರದಿ ಬಂದಿಲ್ಲ, ಗ್ರಾಮದಲ್ಲಿ ಭಯದವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.