ಲಸಿಕೆ ಉತ್ಸವಕ್ಕೆ ಸಕಲ ಸಿದ್ಧತೆ
Team Udayavani, Apr 11, 2021, 3:46 PM IST
ಮಂಡ್ಯ: ಕೋವಿಡ್ ಸೋಂಕಿನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಏ.11ರಿಂದ14ರವರೆಗೆ ನಾಲ್ಕು ದಿನಗಳ ಲಸಿಕೆ ಉತ್ಸವ ಹಮ್ಮಿಕೊಂಡಿದೆ. ಅದರಂತೆ ಮಂಡ್ಯ ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಸಿದ್ಧತೆ ಕೈಗೊಂಡಿದೆ.
ಪ್ರತಿದಿನ 18 ಸಾವಿರ ಮಂದಿಗೆ ಲಸಿಕೆ: ಲಸಿಕೆ ಉತ್ಸವ ನಡೆಯುವ ನಾಲ್ಕು ದಿನಗಳ ಕಾಲ 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ದಿನ 18 ಸಾವಿರ ಮಂದಿಗೆ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ.
ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಲಸಿಕೆ ಉತ್ಸವ: ಸೋಂಕು ನಿಯಂತ್ರಣದ ಲಸಿಕೆ ನೀಡಲು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಲಸಿಕೆ ಉತ್ಸವ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ಮಿಮ್ಸ್‌ಸೇರಿದಂತೆ ಎಲ್ಲ ತಾಲೂಕು ಆಸ್ಪತ್ರೆಗಳು,ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕಆರೋಗ್ಯ ಕೇಂದ್ರ ಸೇರಿದಂತೆ ಕೆಲವು ಆಯ್ದ ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ನೀಡಲಾಗುತ್ತಿದೆ.
ಕೆಲಸದ ಸ್ಥಳಕ್ಕೆ ಹೋಗಿ ಲಸಿಕೆ: 45 ವರ್ಷಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲುನೀಡಲಾಗುವುದು. ಆಸ್ಪತ್ರೆಗಳಿಗೆ ಬಂದು ಲಸಿಕೆ ಪಡೆದುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ.ಅಲ್ಲದೆ, 45 ವರ್ಷ ಮೇಲ್ಪಟ್ಟ ವಯೋಮಾನದವರು ಎಲ್ಲೆಲ್ಲಿ ಕೆಲಸ ನಿರ್ವಹಿಸುತ್ತಾರೋ, ಆ ಸ್ಥಳಗಳಿಗೆ ತೆರಳಿ ಅಲ್ಲಿಯೇ ಲಸಿಕೆನೀಡಲಾಗುತ್ತದೆ. ಸರ್ಕಾರಿ ಕಚೇರಿ, ಖಾಸಗಿಕಂಪನಿಗಳು, ಸಕ್ಕರೆ ಕಾರ್ಖಾನೆಗಳು ಸೇರಿದಂತೆವಿವಿಧೆಡೆ ಕಾರ್ಯನಿರ್ವಹಿಸುವ 45 ವರ್ಷಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು.
ಜಾಗೃತಿ ಕಾರ್ಯಕ್ರಮ: ನಾಲ್ಕು ದಿನಗಳ ಕಾಲ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿಮೂಡಿಸಲಾಗುತ್ತದೆ. ಗ್ರಾಮ ಮಟ್ಟದಲ್ಲಿ ಗ್ರಾಮಪಂಚಾಯಿತಿಯಲ್ಲಿ ಟಾಸ್ಕ್ಪೋರ್ಸ್, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಕಿರಿಯ ಸಹಾಯಕರು, ವೈದ್ಯರನ್ನೊಳಗೊಂಡ ತಂಡಗಳು ಜಾಗೃತಿ ಮೂಡಿಸಿ ಲಸಿಕೆ ಕೇಂದ್ರಗಳಿಗೆ ಆಗಮಿಸುವಂತೆ ಮಾಡಲಾಗುತ್ತದೆ.
ಜಿಲ್ಲೆಯಲ್ಲಿ ಲಸಿಕೆ ಉತ್ಸವ ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆಮಾಡಿಕೊಳ್ಳಲಾಗಿದೆ. ನಾಲ್ಕು ದಿನಗಳ ಕಾಲ ಪ್ರತಿದಿನ 18 ಸಾವಿರ ಮಂದಿಗೆ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.●ಡಾ.ಸಂಜಯ್, ಜಿಲ್ಲಾ ಸರ್ವೇಕ್ಷಣಾಕಾರಿ, ಮಂಡ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…
ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ
ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
ಹೊಸ ಸೇರ್ಪಡೆ
ವೈದ್ಯರ ದಿನಾಚರಣೆ: ವಿಶಿಷ್ಟವಾಗಿ ಆಚರಿಸಿದ ಶಾಸ್ತ್ರೀ ಪಬ್ಲಿಕ್ ಶಾಲೆ
ಚಾರ್ಮಾಡಿ ಘಾಟ್ನಲ್ಲಿ ಮುಂದುವರೆದ ಪ್ರವಾಸಿಗರ ಪುಂಡಾಟ: ರಸ್ತೆ ಮಧ್ಯೆಯೇ ಮೋಜು ಮಸ್ತಿ
ಭಾರತದಲ್ಲಿ 24 ಗಂಟೆಯಲ್ಲಿ 16, 135 ಕೋವಿಡ್ ಸೋಂಕು ಪ್ರಕರಣ ದೃಢ; ಸಕ್ರಿಯ ಪ್ರಕರಣ ಏರಿಕೆ
ಉದಯಪುರದ ಕನ್ನಯ್ಯಲಾಲ್ ಕೊಲೆ ಖಂಡಿಸಿ ಬಳ್ಳಾರಿ ಬಂದ್
ಪತ್ರಕರ್ತರಿಗೆ ಕ್ರೀಡೆ, ಮನರಂಜನೆ ಅವಶ್ಯಕ: ಡಿ.ವೈ.ಎಸ್.ಪಿ. ರವಿಪ್ರಸಾದ್