ನಾಗಮಂಗಲ ಉಳಿದೆಲ್ಲಾ ತಾಲೂಕುಗಳಿಗಿಂತ ಮುಂದಿದೆ

Team Udayavani, Sep 5, 2020, 2:55 PM IST

ನಾಗಮಂಗಲ ಉಳಿದೆಲ್ಲಾ ತಾಲೂಕುಗಳಿಗಿಂತ ಮುಂದಿದೆ

ನಾಗಮಂಗಲ: ಕೋವಿಡ್‌ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಜಿಲ್ಲೆಯ ಉಳಿದೆಲ್ಲಾ ತಾಲೂಕುಗಳಿಗಿಂತ ನಾಗಮಂಗಲದಲ್ಲಿ ಫಿಜಿಷಿಯನ್‌ ಸೇರಿ ಎಲ್ಲ ಬಗೆಯ ತಜ್ಞ ವೈದ್ಯರಿದ್ದಾರೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸುವ ಸಲುವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದರು.  ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 50 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ತೀವ್ರ ನಿಗಾ ಘಟಕ ಸೇರಿ ಡಯಾಲಿಸಿಸ್‌, ಶಸ್ತ್ರ ಚಿಕಿತ್ಸಾ ಕೇಂದ್ರ ಸಕ್ರಿಯವಾಗಿದೆ. ಎಲ್ಲ ರೀತಿಯ ತಜ್ಞ ವೈದ್ಯರು ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದಾರೆಂದರು.

ಸೋಂಕಿತ ರೋಗಿಗಳನ್ನು ಸಂಪರ್ಕಿಸಿದ ವೇಳೆ ಉತ್ತಮ ಗುಣಮಟ್ಟದ ಔಷಧ ಮತ್ತು ಒಳ್ಳೆಯ ಊಟದ ವ್ಯವಸ್ಥೆ ಸಿಗುತ್ತಿದೆ ಎಂದು ತಿಳಿದುಬಂದಿದೆ. ಜಿಲ್ಲಾಸ್ಪತ್ರೆಯಲ್ಲಿ ಸಿಗುವ ವ್ಯವಸ್ಥೆಯೂ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಗುತ್ತಿದೆ ಎಂದು ತಿಳಿಸಿದರು.  ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿರುವ ವಿಷಯ ಕೇಳಿ ನನಗೆ ಖುಷಿಯಾಗುತ್ತಿದೆ. ಇದೇ ರೀತಿ ಚಿಕಿತ್ಸೆ ಮುಂದುವರಿಸಿದರೆ ಕೋವಿಡ್ ವನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರು ವಿಭಾಗದ 7 ಜಿಲ್ಲೆಗಳಲ್ಲಿಯೇ ಮಂಡ್ಯದಲ್ಲಿ ಮರಣ ಪ್ರಮಾಣದ ಸಂಖ್ಯೆ ಶೇ.0.9ರಷ್ಟಿದ್ದು, ಪ್ರಕರಣ ಹೆಚ್ಚಾದ ಮಾತ್ರಕ್ಕೆ ಕೋವಿಡ್ ಹೆಚ್ಚಾಯಿತು ಎಂದು ಭಾವಿಸ  ಬಾರದು. ಲಾಕ್‌ಡೌನ್‌ ಇಲ್ಲದಿರುವುದರಿಂದ ಜನ ಸಂಪೂರ್ಣವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಕೋವಿಡ್ ಬರುವ ಸಾಧ್ಯತೆಯಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸ್ಯಾನಿಟೈಸರ್‌ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.

ಬೆಳೆ ಸಮೀಕ್ಷೆಯಿಂದ ಅನುಕೂಲ: ಬೆಳೆ ಸಮೀಕ್ಷೆ ಮಾಡುವುದರಿಂದ ವಿವಿಧ ರೀತಿಯ ಅನುಕೂಲವಾಗಲಿದೆ. ಕನಿಷ್ಠ  ಬೆಂಬಲ ಬೆಲೆಯಲ್ಲಿ ಭತ್ತ ಹಾಗೂ ರಾಗ ಖರೀದಿಗೆ ರೈತ ಇಂತಿಷ್ಟು ಬೆಳೆ ಬೆಳೆದಿದ್ದಾರೆಂದು ಅವರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲು, ಅಲ್ಲದೆ ಆಕಸ್ಮಿಕವಾಗಿ ನೆರೆ ಅಥವಾ ಬರದಿಂದ ನಷ್ಟವಾದಲ್ಲಿ ಅಂತಹ ಬೆಳೆಗಳಿಗೆ ಪರಿಹಾರ ನೀಡಲು ಅನುಕೂಲವಾಗುತ್ತದೆ. ಒಟ್ಟಾರೆ ಜಿಲ್ಲೆಯಲ್ಲಿ ರಾಗಿ, ಭತ್ತ, ಕಬ್ಬು ಸೇರಿದಂತೆ ಇಂತಿಷ್ಟು ಪ್ರಮಾಣದಲ್ಲಿ ರೈತರು ಬೆಳೆಗಳನ್ನು ಬೆಳೆಯುತ್ತಿದ್ದಾರೆಂದು ವೈಜ್ಞಾನಿಕವಾದ ಮಾಹಿತಿ ಲಭ್ಯವಾಗುತ್ತದೆ ಎಂದರು.

ತಹಶೀಲ್ದಾರ್‌ ಕುಂಞ ಅಹಮ್ಮದ್‌, ತಾಪಂ ಇಒ ಡಾ.ಎಂ.ಆರ್‌.ಅನಂತರಾಜ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಶರತ್‌, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ವೆಂಕಟೇಶ್‌, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್‌ ಮತ್ತಿತರರಿದ್ದರು

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.