ಸಾಲ ವಸೂಲಿಗೆ ಒತ್ತಡ ಹಾಕಿದರೆ ಕ್ರಮ

Team Udayavani, Sep 2, 2020, 3:09 PM IST

ಸಾಲ ವಸೂಲಿಗೆ ಒತ್ತಡ ಹಾಕಿದರೆ ಕ್ರಮ

ಮಂಡ್ಯ: ಮೈಕ್ರೋ ಫೈನಾನ್ಸ್‌ಗಳು ಹಾಗೂ ವಾಹನ ಸಾಲ ನೀಡುವ ಸಂಸ್ಥೆಗಳು ಸಾಲ ವಸೂಲಾತಿಗೆ ಯಾವುದೇ ಒತ್ತಡ ಹಾಕಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್‌ ಹಾಗೂ ಕರುನಾಡ ಸೇವಕರ ಸಂಘಟನೆ ಪದಾಧಿಕಾರಿಗಳೊಂದಿಗೆ ನಡೆದ ಜಂಟಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕೋವಿಡ್‌ ಕಾರಣಕ್ಕೆ ಇಡೀ ದೇಶದಲ್ಲಿ ಉದ್ಯೋಗ, ಉದ್ದಿಮೆ ಸ್ಥಗಿತಗೊಂಡಿದೆ. ಜನರ ದುಡಿಯುವ ಅವಕಾಶಗಳು ಕಡಿಮೆಯಾಗಿವೆ. ಈ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲ ವಸೂಲಾತಿಗೆ ಸಾರ್ವಜನಿಕರ ಮೇಲೆ ಒತ್ತಡ ಹಾಕದೆ, ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು. ಅತ್ಯಂತ ಸಂದಿಗ್ಧ ಸನ್ನಿವೇಶ ದೇಶಾದ್ಯಂತ ನಿರ್ಮಾಣವಾಗಿದೆ. ಸಾಲ ವಸೂಲು ಮಾಡುವ ಕೆಳಹಂತದ ನೌಕರರು ಅನುಚಿತವಾಗಿ ವರ್ತಿಸಿ ಸಂಘರ್ಷ ಸೃಷ್ಟಿ ಮಾಡಬಾರದು. ಈ ಸಂಬಂಧ ಈಗಾಗಲೇ ಜನಪರ ಸಂಘಟನೆಗಳು ಜಿಲ್ಲಾಡಳಿತಕ್ಕೆ ದೂರು ನೀಡಿವೆ. ಸಾಲ ಕಟ್ಟುವ ಸಾಮರ್ಥ್ಯವನ್ನು ಗಮನದಲ್ಲಿಟ್ಟುಕೊಂಡು ಕಂತುಗಳನ್ನು ಸಂಗ್ರಹಿಸುವಂತೆ ಸೂಚನೆ ನೀಡಿದರು.

ಗೂಂಡಾಗಿರಿ: ಸಭೆ ಆರಂಭಕ್ಕೂ ಮುನ್ನ ಮಾತನಾಡಿದ ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ, ರಿಸರ್ವ್‌ ಬ್ಯಾಂಕ್‌ ರಿಯಾಯಿತಿ ಘೋಷಿಸಿದ ಸಂದರ್ಭದಲ್ಲೂ ಸಹ ಸಾಲ ವಸೂಲಾತಿಗೆ ಮೈಕ್ರೋ ಫೈನಾನ್ಸ್‌ಗಳು ಪಟ್ಟು ಹಿಡಿದಿವೆ. ವಾಹನ ಸಾಲ ನೀಡುವ ಬಜಾಜ್‌ ಮಹೇಂದ್ರ, ಚೋಳಮಂಡಲ, ಶ್ರೀರಾಮ್‌ ಸಂಸ್ಥೆಗಳು ಅಕ್ಷರಶಃ ಸಂಘಟಿತ ಗೂಂಡಾಗಿರಿ ನಡೆಸುತ್ತಿವೆ. ಇವರುಗಳ ಕಿರುಕುಳದಿಂದಾಗಿ ಜಿಲ್ಲೆಯ ಹಲವರು ಊರು ತೊರೆದಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಹನಗಳ ಜಪ್ತಿ ಹೆಸರಲ್ಲಿ ರೌಡಿಗಳನ್ನು ಮುಂದಿಟ್ಟುಕೊಂಡು ಹೆದರಿಸಲಾಗುತ್ತಿದೆ. ನಿಯಮಾನುಸಾರ ಸಾಲ ಕಟ್ಟಲು ಸ್ಥಳೀಯವಾಗಿ ಕಚೇರಿ ತೆರೆಯದೆ ಬೆಂಗಳೂರು ಮೈಸೂರಿಗೆ ಅಲೆಸುವುದು ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭರವಸೆ: ಮೈಕ್ರೋ ಫೈನಾನ್ಸ್‌ ಒಕ್ಕೂಟದ ಮುಖ್ಯಸ್ಥ ರವಿಚಂದ್ರ ಮಾತನಾಡಿ, ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೂಲಕ ಒಂದೂವರೆ ಸಾವಿರ ಕೋಟಿ ಸಾಲ ನೀಡಲಾಗಿದೆ. ಸಾಲ ವಸೂಲಾತಿಯಲ್ಲಿ ಮಂಡ್ಯ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಸಾರ್ವಜನಿಕರ ದೂರುಗಳ  ಸಂಬಂಧ ಕ್ರಮ ವಹಿಸಿ ವಸೂಲಾತಿಯಲ್ಲಿ ಯಾವುದೇ ಒತ್ತಡ ಹೇರುವ ಬದಲು ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸುವುದಾಗಿ ಸಭೆಗೆ ಭರವಸೆ ನೀಡಿದರು. ಸಭೆಯಲ್ಲಿ ಲೀಡ್‌ ಬ್ಯಾಂಕ್‌ ಪ್ರತಿನಿಧಿಗಳು, ವಿವಿಧ ಮೈಕ್ರೋ ಫೈನಾನ್ಸ್‌ ಮುಖ್ಯಸ್ಥರು, ಕರುನಾಡ ಸೇವಕರು ಸಂಘಟನೆ ನಗರಾಧ್ಯಕ್ಷ ಚಂದ್ರಶೇಖರ, ಸಂದೀಪ್‌, ಶಂಕರ್‌, ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ, ರೈತಸಂಘದ ಕೆಂಪೂಗೌಡ, ಜಬೀವುಲ್ಲಾ, ಪ್ರಸನ್ನ ಬಾಣಸವಾಡಿ, ನಗರಸಭಾ ಸದಸ್ಯರಾದ ನಯೀಮ್‌, ಝಾಕೀರ್‌ ಇತರರಿದ್ದರು.

ಟಾಪ್ ನ್ಯೂಸ್

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

10.25 ಲಕ್ಷ ರೂ.ದಾಖಲೆ ಬೆಲೆಗೆ ಎತ್ತು ಮಾರಾಟ

ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ 

ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ 

ಶ್ರೀರಂಗಪಟ್ಟಣದಲ್ಲಿ ಪ್ರವಾಸಿಗರಿಗೆ ಸೌಲಭ್ಯ ಕೊರತೆ

ಶ್ರೀರಂಗಪಟ್ಟಣದಲ್ಲಿ ಪ್ರವಾಸಿಗರಿಗೆ ಸೌಲಭ್ಯ ಕೊರತೆ

ಕೃಷಿ ಉತ್ಪನ್ನ ಖರೀದಿಸದೇ ಲಂಚಕ್ಕಾಗಿ ಕಿರುಕುಳ

ಕೃಷಿ ಉತ್ಪನ್ನ ಖರೀದಿಸದೇ ಲಂಚಕ್ಕಾಗಿ ಕಿರುಕುಳ

ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ಗೆ ಯುವಕ ಬಲಿ

ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ಗೆ ಯುವಕ ಬಲಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ