ಸಹಾಯ ಧನವೂ ಸಾಲಕ್ಕೆ ಜಮಾ: ರೈತರ ವಿರೋಧ

Team Udayavani, Jan 15, 2020, 6:12 PM IST

ಶ್ರೀರಂಗಪಟ್ಟಣ: ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ರೈತರ ಸಹಾಯಧನ, ವ್ಯದ್ಧಾಪ್ಯ, ವಿಧವಾ ವೇತನಗಳನ್ನೂ ಬ್ಯಾಂಕುಗಳಲ್ಲಿ ರೈತರು ಪಡೆದ ಸಾಲಕ್ಕೆ ಜಮೆ ಮಾಡಿಕೊಳ್ಳುವ ಕ್ರಮ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಲೂಕಿನ ಮಹದೇವಪುರದ ಬ್ಯಾಂಕ್‌ ಆಫ್ ಇಂಡಿಯಾ ಶಾಖೆಗೆ ಮಂಗಳವಾರ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ ಮಾತನಾಡಿ, ವೃದ್ಧಾಪ್ಯ, ವಿಧವಾ ವೇತನ ಮತ್ತು ಹಾಲು ಉತ್ಪಾದಕರಿಗೆ ನೀಡುವ ಸಹಾಯ ಧನವನ್ನೂ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ ಅಧಿಕಾರಿಗಳ ಜತೆ ಸಂಬಂಧಪಟ್ಟವರು ಮಾತನಾಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಮೇಳಾಪುರ ಸ್ವಾಮಿಗೌಡ ಮಾತನಾಡಿ, ಜಿಲ್ಲೆಯಲ್ಲಿ ಯಾವ ಬ್ಯಾಂಕುಗಳುಸರ್ಕಾರಿ ನಿಯಮ ಅನುಸರಿಸುತ್ತಿಲ್ಲ, ಅಲ್ಲದೆ ಜಿಲ್ಲಾಧಿಕಾರಿ ಮತ್ತು ಲೀಡ್‌ ಬ್ಯಾಂಕ್‌ ಕರೆದಿದ್ದ ಸಭೆಯಲ್ಲಿ ಭಾಗಿಯಾಗದ ಬ್ಯಾಂಕ್‌ ಆಫ್ ಇಂಡಿಯಾ ನಿಯಮಾವಳಿಗೆ ವಿರುದ್ಧವಾಗಿ ನಡೆಯುತ್ತಿದ್ದು ಕ್ರಮ ಕೈಗೊಳ್ಲಬೇಕು ಎಂದು ಆರೋಪಿಸಿದರು.

ಬಳಿಕ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಶಾಖೆಯ ವ್ಯವಸ್ಥಾಪಕ ಹರೀಶ್‌ರನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಖಾತೆಗಳಿಗೆ ಜಮೆಯಾದ ಹಣ ರೈತರಿಗೆ ಹಿಂದಿರುಗಿಸಲು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹರೀಶ್‌, ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಸಾ ರೈತರ ಪಡೆದ ಹಣ ಹಿಂತಿರುಗಿಸಲಾಗುವುದು ಹಾಗೂ ಮುಂದೆ ಸಹಾಯಧನ, ವೇತನ ಖಾತೆಗೆ ಜಮೆಯಾಗದಂತೆ ನೋಡಿಕೊಳ್ಳುವ ಎಂದು ಭರವಸೆ ನೀಡಿದರು.

ಮಹದೇವಪುರ ಜಯರಾಮೇಗೌಡ, ಬಾಲಕೃಷ್ಣ, ದೇವೇಗೌಡ, ಕೃಷ್ಣ, ದೊಡ್ಡಪಾಳ್ಯ ಜಯರಾಮೇಗೌಡ, ನಾಗೇಂದ್ರ, ಮಹದೇವು ಇತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಕೆ.ಆರ್‌.ಪೇಟೆ: ತಾಲೂಕಿನ ಹೊಸಹೊಳಲು ಮೇಲ್ಗಾಲುವೆ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಹೇಮಾವತಿ ನೀರಾವರಿ ಅಧಿಕಾರಿಗಳು ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ...

  • ಮಂಡ್ಯ: ಇನ್ನು ಮುಂದೆ ಸರ್ವರ್‌ ಸಮಸ್ಯೆಯಾದರೆ ಪಡಿತರ ಚೀಟಿದಾರರು ಪಡಿತರ ಪದಾರ್ಥಗಳು ಸಿಗುವುದಿಲ್ಲವೆಂಬ ಆತಂಕಪಡಬೇಕಿಲ್ಲ. ಜಿಲ್ಲಾಧಿಕಾರಿಗಳ ಮೌಖೀಕ ಸೂಚನೆಯಂತೆ...

  • ಶ್ರೀರಂಗಪಟ್ಟಣ: ಪಟ್ಟಣದ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿರುವ ಅವ್ಯವಸ್ಥೆಗಳ ಬಗ್ಗೆ ವಿದ್ಯಾರ್ಥಿಗಳ ಪೋಷಕರು ವಾಟ್ಸ್‌ ಆಪ್‌ನಲ್ಲಿ ಸಮಸ್ಯೆಗಳ...

  • ಮಂಡ್ಯ: ಸಾರ್ವಜನಿಕ ರಸ್ತೆ ಅತಿಕ್ರಮಿಸಿದ್ದಲ್ಲದೆ, ಪ್ರಶ್ನಿಸಿದ್ದಕ್ಕೆ ಜಾತಿನಿಂದನೆ ಪ್ರಕರಣ ದಾಖಲು ಮಾಡುವುದಾಗಿ ಬೆದರಿಕೆ ಹಾಕಿರುವವರ ವಿರುದ್ಧ ಕ್ರಮಕ್ಕೆ...

  • ಮದ್ದೂರು: ಕೇಂದ್ರ -ರಾಜ್ಯ ಸರ್ಕಾರಗಳು ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಕ್ರಮ ವಹಿಸಿ ನೌಕರರ ಹಿತ ಕಾಯಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ...

ಹೊಸ ಸೇರ್ಪಡೆ