ಬೆಲೆ ಏರಿಕೆ ಖಂಡಿಸಿ ರೈತಸಂಘದಿಂದ ಹೆದ್ದಾರಿ ತಡೆ

Team Udayavani, Apr 10, 2022, 3:27 PM IST

Untitled-1

ಮದ್ದೂರು: ದಿನ ಬಳಕೆ ವಸ್ತು ಹಾಗೂ ರಸಗೊಬ್ಬರದ ಬೆಲೆ ಏರಿಕೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಶಿವಪುರದ ಕೊಪ್ಪ ವೃತ್ತದ ಬಳಿ ಜಮಾವಣೆಗೊಂಡ ನೂರಾರು ಸಂಖ್ಯೆಯ ಸಂಘಟನೆ ಕಾರ್ಯಕರ್ತರು, ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ, ಕೂಡಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸಿ ಸಾಮಾನ್ಯ ವರ್ಗದವರ ಹಿತ ಕಾಪಾಡಬೇಕೆಂದು ಆಗ್ರಹಿಸಿದರು. ಸಾಲುಗಟ್ಟಿ ನಿಂತ ವಾಹನಗಳು: ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮೈಸೂರು, ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಹಿನ್ನೆಲೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತಲ್ಲದೇ ರಸ್ತೆಯುದ್ದಕ್ಕೂ ವಾಹನ ಸಾಲುಗಟ್ಟಿ ನಿಂತ ದೃಶ್ಯ ಕಂಡು ಬಂದಿತು.

ಕಷ್ಟ ಸಾಧ್ಯ: ಕೇಂದ್ರ-ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಡೀಸೆಲ್‌, ಪೆಟ್ರೋಲ್‌, ಅಡುಗೆ ಅನಿಲ ಹಾಗೂ ರಸಗೊಬ್ಬರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕೂಲಿ ಕಾರ್ಮಿಕರು, ಕೆಳ ವರ್ಗದ ಜನ ಜೀವನ ನಡೆಸುವುದೇ ಕಷ್ಟ ಸಾಧ್ಯವಾಗಿದೆ ಎಂದು ಆರೋಪಿಸಿದರು.

ಜನ ವಿರೋಧಿ ನೀತಿ: ಕಳೆದ ಐದು ವರ್ಷಗಳಿಂದಲೂ ಕಬ್ಬಿಗೆ ದರ ನಿಗದಿ ಮಾಡದೆ ರೈತರನ್ನು ಸಂಕಷ್ಟಕ್ಕೆ ದೂಡಿದ್ದು ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೂ ಕಬ್ಬಿನ ಬಾಕಿ ಹಣ ಪಾವತಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗಿದೆ. ಜತೆಗೆ ಆಡಳಿತ ನಡೆಸುವ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತದೆ ಎಂದು ದೂರಿದರು.

ಪೊಲೀಸರ ಮಧ್ಯ ಪ್ರವೇಶದಿಂದ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು, ವಾರದೊಳಗಾಗಿ ಸರ್ಕಾರ ಅಗತ್ಯ ಕ್ರಮವಹಿಸದಿದ್ದಲ್ಲಿ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಸಂಘಟನೆ ಪದಾಧಿಕಾರಿಗಳಾದ ಲಿಂಗಪ್ಪಾಜಿ, ಜಿ.ಎ.ಶಂಕರ್‌, ವರದರಾಜು, ಗೊಲ್ಲರ ದೊಡ್ಡಿ ಅಶೋಕ್‌, ರವಿಕುಮಾರ್‌, ಪುಟ್ಟಸ್ವಾಮಿ, ಕುಮಾರ್‌, ದಯಾನಂದ್‌, ವೆಂಕಟೇಶ್‌, ರವಿ, ಈರಪ್ಪ, ಸೋಮು, ನಾತಪ್ಪ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.