ಕಬ್ಬು ಸಾಗಿಸಲು ಲಾರಿಗಳಿಲ್ಲದೆ ರೈತರ ಪರದಾಟ

Team Udayavani, Oct 29, 2019, 5:19 PM IST

mandya-tdy-1

ಶ್ರೀರಂಗಪಟ್ಟಣ: ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಕಬ್ಬನ್ನು ಕಾರ್ಖಾನೆಗೆ ಸಾಗಿಸಲು ಲಾರಿಗಳಿಲ್ಲದೆ ತಾಲೂಕಿನ ಬಾಬುರಾಯನ ಕೊಪ್ಪಲು ಬಳಿ ಇರುವ ಬನ್ನಾರಿ ಅಮ್ಮನ ಸಕ್ಕರೆ ಕಾರ್ಖಾನೆ ಸೂಪರ್‌ವೈಸರ್‌ ಕಚೇರಿ ಮುಂದೆ ಜಮಾಯಿಸಿ ಲಾರಿ ಕಳುಹಿಸಿಕೊಡಲು ಪಟ್ಟುಹಿಡಿಯುತ್ತಿದ್ದಾರೆ. ಮಂಡ್ಯ ಮೈಷುಗರ್‌ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆಗಳು ಆರಂಭವಾಗದ ಹಿನ್ನೆಲೆ ಮಂಡ್ಯದಲ್ಲಿ ಬೆಳೆದು ನಿಂತ ಕಬ್ಬನ್ನು ಬೇರೆ ಬೇರೆ ಕಾರ್ಖಾನೆಗಳಿಗೆ ಸಾಗಿಸಲು ಜಿಲ್ಲೆಯ ರೈತರು ಪರದಾಡುತ್ತಿದ್ದಾರೆ. ಸರ್ಕಾರ ವಿವಿಧ ಕಾರ್ಖಾನೆಗಳಿಗೆ ಕಟಾವಿಗೆ ಬಂದ ಕಬ್ಬು ಸಾಗಣೆಗೆ ಖಾಸಗಿ ಸಕ್ಕರೆ ಕಾರ್ಖಾನೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು ಈಗಾಗಲೇ ಜಿಲ್ಲೆಯ ಹಲವು ತಾಲೂಕುಗಳಿಂದ ಕಬ್ಬು ಸಾಗಣೆ ನಡೆಯುತ್ತಿದ್ದರೂ ಕಬ್ಬು ಸಾಗಿಸಲು ಲಾರಿಗಳ ಕೊರತೆ ಎದ್ದುಕಾಣುತ್ತಿದೆ.

ಆತಂಕದ ಸ್ಥಿತಿ: ನಾಟಿ ಮಾಡಿದ ಕಬ್ಬನ್ನು 18ರಿಂದ 20 ತಿಂಗಳು ಕಳೆದು ಕಟಾವು ಮಾಡಿ ಕಾರ್ಖಾನೆಗಳಿಗೆ ಸಾಗಿಸಲು ರೈತರು ಪರದಾಡುತ್ತಿದ್ದು ಸರ್ಕಾರ ಕಬ್ಬು ಸಾಗಾಟ ಮಾಡಲು ಇನ್ನು ಹೆಚ್ಚಿನ ಜವಬ್ದಾರಿ ತೆಗೆದುಕೊಳ್ಳಬೇಕಿದೆ. ಈ ಬಾರಿ ಸರ್ಕಾರಗಳನ್ನು ನೆಚ್ಚಿಕೊಂಡ ರೈತರು ಜಿಲ್ಲಾದ್ಯಂತ ತಮ್ಮ ತಮ್ಮ ಜಮೀನುಗಳಲ್ಲಿ ಹೆಚ್ಚಿನ ಕಬ್ಬನ್ನೇ ಅವಲಂಬಿತ ಬೆಳೆಯನ್ನಾಗಿಸಿಕೊಂಡಿದ್ದು ಕಬ್ಬಿಗೆ ವಯಸ್ಸಾಗಿದ್ದರೂ ಕಡಿಯಲು ಕಿರಿಕಿರಿಗಳೇ ಹೆಚ್ಚಾಗಿದೆ. ಅಲ್ಲದೇ, ಒಂದಿಲ್ಲದೊಂದು ಸಮಸ್ಯೆ ಎದುರಾಗುತ್ತಿದ್ದರಿಂದ ರೈತರು ಕಬ್ಬು ಬೆಳೆದು ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ. ಲಾರಿಗಳ ಸಂಖ್ಯೆ ಕಡಿಮೆಯಾಗಿದ್ದರಿಂದ ರೈತರು ನಾ ಮುಂದೆ ತಾಮುಂದೆ ಮೊದಲು ನಮಗೆ ಲಾರಿ ಕಳುಹಿಸಿಕೊಂಡಿ ಎಂದು ಕಚೇರಿ ಸಿಬ್ಬಂದಿಗಳಿಗೆ ಒತ್ತಾಯ ಮಾಡುತ್ತಿರುವುದು ಕಂಡು ಬರುತ್ತಿದೆ. ಯಾವುದೇ ಸರ್ಕಾರಗಳು ಬಂದರೂ ರೈತರ ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫ‌ಲವಾಗಿದೆ. ಜಿಲ್ಲೆಯ ಎರಡು ಕಣ್ಣುಗಳಂತಿದ್ದ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರಗಳು ಮುಂದೆ ನಿಂತು ಆರಂಭಿಸದಿರುವುದು, ಜತೆಗೆ ಅದಕ್ಕೆ ಪರ್ಯಾಯ ಮಾರ್ಗ ಕಂಡು ಹಿಡಿಯದಿರುವುದು ಕಬ್ಬು ಬೆಳೆಗಾರರು ಸಂಕಷ್ಟಕ್ಕೀಡಾಗುವಂತೆ ಮಾಡಿದೆ.

ಲಾರಿಗಳ ವ್ಯವಸ್ಥೆಗೆ ಸೂಚನೆ : ಕಬ್ಬಿಗೆ ಅವಧಿ ಮೀರಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಕಬ್ಬು ಕಟಾವು ಮಾಡುತ್ತಿದ್ದಾರೆ. ಬನ್ನಾರಿಯಮ್ಮ ಹಾಗೂ ಇತರೆ ಕಾರ್ಖಾನೆಗಳಿಗೆ ತ್ವರಿತಗತಿಯಲ್ಲಿ ಕಬ್ಬು ಸರಬರಾಜು ಮಾಡಲಾಗುತ್ತಿದೆ. ಬೇರೇ ಊರುಗಳಿಂದ ಕಬ್ಬು ಕಡಿಯುವ ನುರಿತ ತಜ್ಞರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಬ್ಬು ಕಟಾವು ಮಾಡಲಾಗುತ್ತಿದೆ. ಕಬ್ಬು ಸಾಗಿಸುವ ಲಾರಿಗಳ ಕೊರತೆ ಈಗ ಕಂಡು ಬಂದಿದೆ. ಸಂಬಂಧಿಸಿದ ಕಾರ್ಖಾನೆಗಳ ಆಡಳಿತ ಮಂಡಳಿ ಚರ್ಚೆ ಮಾಡಿ ಇನ್ನಷ್ಟು ಲಾರಿಗಳ ವ್ಯವಸ್ಥೆ ಮಾಡಲು ಸೂಚಿಸಲಾಗುತ್ತದೆ. ಈ ಮೂಲಕ ರೈತರಿಗೆ ಅನುಕೂಲ ವಾಗುವ ರೀತಿಯಲ್ಲಿ ನೋಡಿಕೊಳ್ಳ ಲಾಗುತ್ತದೆ ಎಂದು ಶ್ರೀರಂಗಪಟ್ಟಣ ತಹಶೀಲ್ದಾರ್‌ ರೂಪಾ ತಿಳಿಸಿದ್ದಾರೆ.

ದೀಪಾವಳಿ ರಜೆಯಲ್ಲಿ ಲಾರಿ ಚಾಲಕರು :  ಮುಖ್ಯವಾಗಿ ಶ್ರೀರಂಗಪಟ್ಟಣ ಕ್ಷೇತ್ರಾದ್ಯಂತ ಬೆಳೆದಿರುವ ಕಬ್ಬನ್ನು ಸಾಗಿಸಲು ತಮಿಳುನಾಡಿನ ಬನ್ನಾರಿಯಮ್ಮನ ಸಕ್ಕರೆ ಕಾರ್ಖಾನೆಗೆ ಸಾಗಿಸಲು ಸೂಚಿಸಿದ್ದರಿಂದ ತಾಲೂಕಿನಾದ್ಯಂತ ಇರುವ ಕಬ್ಬು ಬೆಳೆದ ರೈತರು ಕಾರ್ಖಾನೆಯವರಿಂದ ಕಬ್ಬು ಕಟಾವಿಗೆ ಪರವಾನಿಗೆ ಪಡೆದು ಲಾರಿಗಳ ಮೂಲಕ ಕಬ್ಬು ಸಾಗಣೆ ನಡೆಸಲು ಮುಂದಾಗಿದ್ದಾರೆ. ಆದರೆ ದೀಪಾವಳಿ ಹಬ್ಬದ ಪ್ರಯುಕ್ತ ಲಾರಿ ಚಾಲಕರು ಕೆಲವು ಭಾಗಗಳಲ್ಲಿ ರಜೆ ಹಾಕಿದ್ದು, ಕಬ್ಬು ಸಾಗಿಸುವ ಲಾರಿಗಳ ಸಂಚಾರ ಕಡಿಮೆಯಾಗಿದೆ. ಇದರಿಂದ ರೈತರು ತಮ್ಮ ಜಮೀನುಗಳಲ್ಲಿ ಕಟಾವು ಮಾಡಿರುವ ಕಬ್ಬನ್ನು ಸಾಗಿಸಲು ಬನ್ನಾರಿಯಮ್ಮನ ಸಕ್ಕರೆ ಕಾರ್ಖಾನೆ ಸೂಪರ್‌ವೈಸರ್‌ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಆದರೆ ಲಾರಿಗಳು ಕಡಿಮೆ ಇರುವುದರಿಂದ ಕಚೇರಿ ಸಿಬ್ಬಂದಿ ಲಾರಿ ಬರುವುದು ತಡವಾಗುತ್ತಿದೆ. ಲಾರಿಗಳು ಬರುವವರೆಗೆ ಕಾಯಬೇಕು ಎಂದು ಮೊದಲು ನೋಂದಣಿಯಾಗಿರುವ ರೈತರಿಗೆ ಕಬ್ಬು ಸಾಗಿಸಲು ಲಾರಿ ಕಳುಹಿಸಿ ಕೊಡುತ್ತಿದ್ದಾರೆ. ಹೀಗಾಗಿ ಜಮೀನುಗಳಲ್ಲಿ ಕಟಾವು ಮಾಡಿರುವ ಕಬ್ಬು ಒಣಗುತ್ತಿವೆ.

-ಗಂಜಾಂ ಮಂಜು

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.