ಹೇಮೆ ನಾಲೆಗೆ ನೀರು ಹರಿಸಲು ರೈತರ ಆಗ್ರಹ

ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ ರೈತರ ಸಂಘದ ಧರಣಿ • ಮೇಲಧಿಕಾರಿಗಳು ಅನುಮತಿಸಿದರೆ ನೀರು ಬಿಡುಗಡೆ

Team Udayavani, Jul 27, 2019, 11:47 AM IST

mandya-tdy-1

ಪಟ್ಟಣದಲ್ಲಿ ಧರಣಿ ನಿರತ ರೈತರೊಂದಿಗೆ ಇ.ಇ ಬಾಲಕೃಷ್ಣ ಚರ್ಚೆ ನಡೆಸುತ್ತಿರುವುದು.

ಕೆ.ಆರ್‌.ಪೇಟೆ: ತಾಲೂಕಿನಲ್ಲಿ ಒಣಗುತ್ತಿರುವ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಕೂಡಲೇ ಹೇಮಾವತಿ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ ಧರಣಿ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ರೈತಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ ಮಾತನಾಡಿ, ತಾಲೂಕಿನಲ್ಲಿರುವ ಹೇಮಾವತಿ ನದಿ ಅಣೆಕಟ್ಟೆ ನಾಲೆಗಳಾದ ಹೇಮಗಿರಿ, ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳು ಹಾಗೂ ಅಕ್ಕಿಹೆಬ್ಟಾಳು ನಾಲಾ ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಕಬ್ಬು, ತೆಂಗು, ಬಾಳೆ, ಅಡಿಕೆ ಮುಂತಾದ ಬೆಳೆ ಬೆಳೆಯಲಾಗಿದೆ.

ಕೈಕೊಟ್ಟ ಮುಂಗಾರು ಮಳೆ: ಪ್ರಸಕ್ತ ವರ್ಷ ಮುಂಗಾರು ಮಳೆ ಕೈಕೊಟ್ಟಿದೆ. ಜೊತೆಗೆ ಜೂನ್‌ ತಿಂಗಳಾಂತ್ಯಕ್ಕೆ ಬಂದರೂ ನೀರಾವರಿ ಇಲಾಖೆ ಈ ನಾಲೆಗಳ ಮುಖಾಂತರ ನೀರು ಹರಿಸಿ ಬೆಳೆದಿರುವ ಬೆಳೆಗಳ ಸಂರಕ್ಷಣೆಗೆ ಕ್ರಮ ವಹಿಸಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್‌ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡರು.

ಕೆಆರ್‌ಎಸ್‌ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳ ಸಂರಕ್ಷಣೆಗೆ ನೀರು ಹರಿಸುವ ನೀರಾವರಿ ಇಲಾಖೆ ಹೇಮಾವತಿ ಅಚ್ಚುಕಟ್ಟು ಪ್ರದೇಶದ ಬೆಳೆಗಳ ರಕ್ಷಣೆಗೆ ಮುಂದಾಗದೆ ಮಲತಾಯಿ ಧೋರಣೆ ಪ್ರದರ್ಶಿಸಿದೆ. ಹೇಮಾವತಿ ಬಯಲಿನ ರೈತರು ರೈತರಲ್ಲವೆ? ಇವರಿಂದ ನೀರಿನ ತೆರಿಗೆ ಮತ್ತು ಕಂದಾಯ ವಸೂಲಾತಿ ಮಾಡುತ್ತಿಲ್ಲವೆ? ಎಂದು ಪ್ರಶ್ನಿಸಿದ ರಾಜೇಗೌಡ ನದಿ, ಅಣೆಕಟ್ಟೆ, ನಾಲೆಗಳು ಮಳೆಗಾಲದಲ್ಲಿ ಹರಿಯುವ ನದಿ ನೀರನ್ನೇ ಅವಲಂಬಿಸಿವೆ. ನದಿ ನೀರನ್ನು ಅಣೆಕಟ್ಟೆಯಲ್ಲಿ ತಡೆದಿಡುತ್ತಿರುವುದರಿಂದ ನೀರಾವರಿ ಇಲಾಖೆ ನದಿ ಅಣೆಕಟ್ಟೆ ವ್ಯಾಪ್ತಿಯ ರೈತರ ನೀರಿನ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.

ಕುಡಿಯಲಾದರೂ ನೀರು ಹರಿಸಿ: ನದಿ ನೀರನ್ನು ಅಣೆಕಟ್ಟೆಯಲ್ಲಿ ತಡೆ ಹಿಡಿರುವುದರಿಂದ ಅಣೆಕಟ್ಟೆಯ ಕೆಳಭಾಗದಲ್ಲಿ ನದಿ ಬತ್ತಿ ಹೋಗಿದೆ. ಈ ಭಾಗದಲ್ಲಿ ಕುಡಿಯುವ ನೀರಿಗೂ ಜನ- ಜಾನುವಾರು ಪರದಾಡುತ್ತಿದ್ದಾರೆ. ನದಿಯಲ್ಲಿನ ಜಲಚರಗಳು ನೀರಿಲ್ಲದೆ ಸಾಯುತ್ತಿವೆ. ಕೂಡಲೇ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾದರೂ ಹೇಮಾವತಿ ನದಿಗೆ ನೀರು ಹರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆ ಎಚ್ಚರಿಕೆ: ತಾಲೂಕಿನಲ್ಲಿ ಬೆಳೆದಿರುವ ಬೆಳೆಗಳಿಗೆ ಮತ್ತು ಜನ ಜಾನುವಾರುಗಳಿಗೆ ಕೂಡಲೇ ನಾಲೆಗಳ ಮೂಲಕ ನೀರು ಹರಿಸದಿದ್ದರೆ, ತಾಲೂಕಿನ ಸಾವಿರಾರು ರೈತರು ಆ.2ರಂದು ತಾಲೂಕು ಕೇಂದ್ರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಿದ್ದೇವೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಮರುವನಹಳ್ಳಿ ಶಂಕರ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಮಾಜಿ ಅಧ್ಯಕ್ಷ ನಾಗೇಗೌಡ, ಮುದ್ದುಕುಮಾರ್‌, ಪ್ರಕಾಶ್‌, ರವಿ, ಕೃಷ್ಣೇಗೌಡ, ಪುಟ್ಟೇಗೌಡ ಮತ್ತಿರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.