ಅಗ್ನಿ ಸುರಕ್ಷಾ ಕ್ರಮ ಅನುಸರಿಸಿ: ಶಿವಕುಮಾರ್‌


Team Udayavani, Apr 18, 2021, 4:27 PM IST

Follow fire safety measures

ಮದ್ದೂರು: ಅಮೂಲ್ಯ ಜೀವಕ್ಕಾಗಿ ಅಗ್ನಿ ಸುರಕ್ಷಾ ಕ್ರಮಗಳನ್ನು ಅನುಸರಿಸಿ ನಡೆಯುತ್ತಿರುವ ಅಗ್ನಿ ಅವ ಘಡಗಳನ್ನು ತಪ್ಪಿಸಬೇಕೆಂದು ಮದ್ದೂರು ಅಗ್ನಿಶಾಮಕ ಠಾಣಾಧಿಕಾರಿ ಶಿವಕುಮಾರ್‌ ತಿಳಿಸಿದರು. ಪಟ್ಟಣದ ವಿವಿಧ ಸ್ಥಳಗಳಲ್ಲಿ ಅಗ್ನಿಶಾಮಕ ಠಾಣೆ ವತಿಯಿಂದ ಆಯೋಜಿಸಿದ್ದ ಅಗ್ನಿಶಾಮಕ ಸೇವಾ ಸಪ್ತಾಹ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, 14-4-1944 ರಂದು ಮುಂಬೈನ ವಿಕ್ಟೋರಿಯಾ ಡಾಕ್‌ ಬಂದರಿನಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸು  ತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ತಗುಲಿದ ಹಿನ್ನೆಲೆಯಲ್ಲಿ ಬೆಂಕಿ ನಂದಿಸಲು ಮುಂಬೈನ ಅಗ್ನಿಶಾಮಕ ಅಧಿಕಾರಿಗಳು, ಸಿಬ್ಬಂದಿಗಳು ತೆರಳಿದ್ದ ವೇಳೆ ಹಡಗು ಸ್ಫೋಟಗೊಂಡು 66 ಮಂದಿ ವೀರ ಮರಣ ಹೊಂದಿದ ಹಿನ್ನೆಲೆಯಲ್ಲಿ ಹುತಾತ್ಮರ ನೆನಪಿಗಾಗಿ ಪ್ರತಿ ವರ್ಷ ಆ ದಿನವನ್ನು ಅಗ್ನಿ ಶಾಮಕ ಸೇವಾ ಸಪ್ತಾಹವನ್ನಾಗಿ ಆಚರಿಸುತ್ತಿರುವುದಾಗಿ ತಿಳಿಸಿದರು.

ಕೈಜೋಡಿಸಿ: ಇತ್ತೀಚಿನ ದಿನಗಳಲ್ಲಿ ಬೆಂಕಿ ಅವಘಡಗಳಿಂದ ಅಪಾರ ಪ್ರಮಾಣದ ಸಾವು, ನೋವುಗಳು ಸಂಭವಿಸುತ್ತಿರುವುದು ವಿಷಾದ  ನೀಯ ಸಂಗತಿಯಾಗಿದ್ದು, ಇದನ್ನರಿತು ಪ್ರತಿಯೊಬ್ಬರು ಅಗ್ನಿ ಅನಾಹುತ ಮುಕ್ತ ಭಾರತಕ್ಕಾಗಿ ಶ್ರಮಿಸುವ ಮೂಲಕ ಇಲಾಖೆಯೊಟ್ಟಿಗೆ ಕೈಜೋಡಿಸಿ ಇತರರಿಗೂ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕೆಂದರು.

ಮರಳು ಬಳಸಿ: ಹುಲ್ಲಿನ ಮೆದೆ, ಮರದ ರಾಶಿ, ಮನೆಗಳು ಬೆಂಕಿಗಾಹುತಿಯಾದಾಗ ಅಧಿಕ ಪ್ರಮಾಣದ ಮರಳು ಮತ್ತು ನೀರನ್ನು ಸುರಿಯುವ ಜತೆಗೆ ಪೆಟ್ರೋಲ್‌, ಸಿಮೆಎಣ್ಣೆ ಹಾಗೂ ಇತರೆ ಎಣ್ಣೆ ಪದಾರ್ಥಗಳಿಗೆ ಬೆಂಕಿ ತಗುಲಿದಾಗ ನೀರನ್ನು ಬಳಸದೆ ಹೆಚ್ಚು ಮರಳನ್ನು ಬಳಸುವ ಮೂಲಕ ಬೆಂಕಿ ನಂದಿಸಲು ಮುಂದಾಗಬೇಕೆಂದರು. ಅಪಾಯಕಾರಿ ವಸ್ತುಗಳನ್ನು ಮನೆಯಲ್ಲಿ ಶೇಖರಿಸುವುದರಿಂದ ಬೆಂಕಿ ಅನಾಹುತಗಳು ಸಂಭವಿಸಿ ಅಪಾರ ಪ್ರಮಾಣದ ಸಾವು, ನೋವು, ಮನೆ ಜಖಂ ಪ್ರಕರಣ ಕಂಡುಬರುತ್ತಿದ್ದು ಇದನ್ನರಿತು ವಿದ್ಯಾರ್ಥಿಗಳು ಸಂಘ, ಸಂಸ್ಥೆಗಳ ಪದಾಧಿಕಾರಿಗಳು ತಮ್ಮ ಗ್ರಾಮದಲ್ಲಿ ಅಗ್ನಿ ಸುರಕ್ಷತೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗುವಂತೆ ಮನವಿ ಮಾಡಿದರು.

ಏ.14ರ ಬುಧವಾರದಿಂದ ಏ.20ರ ವರೆಗೆ ತಾಲೂಕಿನಾದ್ಯಂತ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರಲ್ಲದೇ ಪಟ್ಟಣದ ತಾಲೂಕು ಕಚೇರಿ, ಬಸ್‌ ನಿಲ್ದಾಣ, ಸಂಜಯ ವೃತ್ತ, ನಗರಕೆರೆ ವೃತ್ತ ಇನ್ನಿತರೆಡೆ ಸೇವಾ ಸಪ್ತಾಹ ಕಾರ್ಯಕ್ರಮ ಕೈಗೊಳ್ಳುವ ಮೂಲಕ ಸ್ಥಳೀಯ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳಾದ ಅಂಜನಿ, ಶ್ರೀನಿವಾಸ್‌, ಬಾಬು, ಪ್ರೀತಮ್‌, ಅಕ್ಷರದಾಸೋಹ ನಿರ್ದೇಶಕಿ ಡಾ.ಮಂಗಳಮ್ಮ ಇತರರಿದ್ದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.