ಕರ್ಫ್ಯೂಗೆ ಜನರಿಂದ ಸಂಪೂರ್ಣ ಬೆಂಬಲ

Team Udayavani, May 25, 2020, 7:03 AM IST

saha curfe

ಮಂಡ್ಯ: ರಾಜ್ಯದಲ್ಲಿ ಕೊರೊನಾ ರಣಕೇಕೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೊಳಿ ಸಿದ್ದ 36 ಗಂಟೆಗಳ ಕರ್ಫ್ಯೂಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸ್‌ ಬಿಗಿ ಬಂದೋಬಸ್ತ್ ಇಲ್ಲದಿದ್ದರೂ ಜನರು ರಸ್ತೆ ಗಿಳಿಯದೇ ಮನೆಯಲ್ಲೇ ಉಳಿದು ಕರ್ಫ್ಯೂಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಭಾನುವಾರ ಸರ್ಕಾರ ಸಂಪೂರ್ಣ ಲಾಕ್‌ ಡೌನ್‌ ಜಾರಿಗೊಳಿಸಿತ್ತು. ಸಾರಿಗೆ, ಆಟೋ, ಟ್ಯಾಕ್ಸಿ, ರೈಲ್ವೆ ಸೇವೆ ಸೇರಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳು  ಸಂಪೂರ್ಣ ಬಂದ್‌ ಆಗಿತ್ತು.

ಷರತ್ತು ಬದ್ಧ ಅನುಮತಿ: ಭಾನುವಾರ ದಂದು ಮೊದಲೇ ನಿಗದಿಯಾಗಿದ್ದ ವಿವಾಹ ಸಮಾರಂಭಗಳಿಗೆ ಷರತ್ತಿನ ಮೇಲೆ ಅನುಮತಿ ನೀಡಲಾಗಿತ್ತು. ಮಾಂಸದ ಅಂಗಡಿಗಳ ನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದರೂ ಹೆಚ್ಚಿನ ಅಂಗಡಿಗಳು ಬಾಗಿಲು ತೆರೆದಿರಲಿಲ್ಲ. ಮಾಂಸದಂಗಡಿಗಳಲ್ಲಿಯೂ ನಿರೀಕ್ಷಿತ ಪ್ರಮಾ ಣದ ಮಾರಾಟವಾಗಲಿಲ್ಲ.

ಅಗತ್ಯ ವಸ್ತುಗಳಿಗೆ ಪರದಾಟ: ಹೊಟೇಲ್‌ಗ‌ಳು ಪಾರ್ಸೆಲ್‌ ಸೇವೆಗೆ ಮಾತ್ರ ಸೀಮಿತಗೊಂಡಿ ದ್ದವು. ಆಸ್ಪತ್ರೆಗಳು, ಪೆಟ್ರೋಲ್‌ ಬಂಕ್‌ಗಳು, ಔಷಧ ಅಂಗಡಿಗಳು, ಹೂವು, ಹಾಲು, ತರ  ಕಾರಿ, ದಿನಸಿ, ಆರೋಗ್ಯ ತುರ್ತು ಸೇವೆ, ಆ್ಯಂಬುಲೆನ್ಸ್‌ಗಳನ್ನು ಜನರ ಸೇವೆಗೆ ಮುಕ್ತ ಗೊಳಿಸಲಾಗಿತ್ತು. ಆದರೂ ಪೊಲೀಸರು ನಗರ ದಲ್ಲಿ ದಿನಸಿ, ತರಕಾರಿ ಸೇರಿದಂತೆ ಕೆಲ ಅಗತ್ಯ ಸೇವೆಗಳ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿಸಿದ್ದರಿಂದ ಸಾರ್ವಜನಿಕರು ಅಗತ್ಯ ವಸ್ತುಗಳಿಗೆ ಪರದಾಡುವಂತಾಯಿತು.

ರಸ್ತೆಗಳಲ್ಲಿ ವಾಹನ ಸಂಚಾರವಿಲ್ಲ: ಕರ್ಫ್ಯೂ ಹಿನ್ನೆಲೆಯಲ್ಲಿ ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದ ಬೆಂಗಳೂರು-ಮೈಸೂರು ಹೆದ್ದಾರಿ, ಜಯಚಾಮರಾಜೇಂದ್ರ ಒಡೆಯರ್‌ ವೃತ್ತ, ಮಹಾವೀರ  ವೃತ್ತ, ಹೊಸಹಳ್ಳಿ ವೃತ್ತ, ಜಯರಾಂ ವೃತ್ತ, ಸಕ್ಕರೆ ಕಂಪನಿ ವೃತ್ತ, ಹೊಳಲು ವೃತ್ತಗಳೆಲ್ಲವೂ ಜನರು ಹಾಗೂ ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು. ನಗರದ ಎಲ್ಲಾ ರಸ್ತೆಗಳಲ್ಲಿನ ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್‌  ಆಗಿದ್ದವು.

ಹೋಟೆಲ್‌ಗ‌ಳು ಖಾಲಿ: ನಗರದಲ್ಲಿ ಕೆಲವೇ ಹೊಟೇಲ್‌ಗ‌ಳು ಬಾಗಿಲು ತೆರೆದಿದ್ದವು. ಅವೂ ಜನರಿಲ್ಲದೆ ಖಾಲಿ ಹೊಡೆಯುತ್ತಿದ್ದವು. ಅಲ್ಲಿಯೂ ಪಾರ್ಸಲ್‌ಗೆ ಅವಕಾಶ ಕಲ್ಪಿಸಲಾ ಗಿತ್ತು. ವೈನ್‌ಶಾಪ್‌, ಬಾರ್‌-ಆ್ಯಂಡ್‌ ರೆಸ್ಟೋರೆಂಟ್‌ಗಳು  ಸ್ಥಗಿತಗೊಳಿಸಿದ್ದವು.

2ನೇ ಬಾರಿ ಬಂದ್‌: ಕೊರೊನಾ ಭೀತಿ ಎದುರಾ ದ ನಂತರದಲ್ಲಿ ಮಾ.22ರಂದು ಮೊದಲ ಬಾರಿಗೆ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಆ ನಂತರದಲ್ಲಿ ಲಾಕ್‌ಡೌನ್‌ ಹೇರಲಾಗಿತ್ತು. ಲಾಕ್‌ಡೌನ್‌ ಸಡಿಲಿಕೆ ಬಳಿಕ ಮತ್ತೆ ಎರಡನೇ  ಬಾರಿ ಭಾನುವಾರ ಕರ್ಫ್ಯೂ ಜಾರಿಗೊಳಿಸಿದ್ದು, ಇದಕ್ಕೂ ಜನತಾ ಕರ್ಫ್ಯೂ ಮಾದರಿಯಲ್ಲೇ ಜನಬೆಂಬಲ ದೊರೆತಿರುವುದು ವಿಶೇಷವಾಗಿದೆ.

ಹೆಚ್ಚಿನ ಭದ್ರತೆ ಇಲ್ಲ: ಗುತ್ತಲು, ವಿವೇಕಾನಂದ ರಸ್ತೆ, ನೂರಡಿ ರಸ್ತೆ, ವಿ.ವಿ.ರಸ್ತೆ, ಬನ್ನೂರು ರಸ್ತೆ, ಕೆ.ಆರ್‌.ರಸ್ತೆ, ಹೊಸಹಳ್ಳಿ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ಪೊಲೀಸ ರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಬೆಳಗ್ಗೆ 6ರಿಂದ 8 ಗಂಟೆಯವರೆಗೆ ಅಗತ್ಯ ವಸ್ತುಗಳಿ ಗಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸಿದರಾದರೂ, ಆನಂತರದಲ್ಲಿ ಮನೆಯಿಂದ ಹೊರಬರಲಿಲ್ಲ. ಸಂಜೆ ನಂತರವೂ ಜನರು ರಸ್ತೆ ಗಿಳಿಯುವ ಪ್ರಯತ್ನ ಮಾಡಲೇ ಇಲ್ಲ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.