ಗವಿರಂಗನಾಥನ ಅದ್ಧೂರಿ ರಥೋತ್ಸವ

Team Udayavani, Jan 17, 2020, 1:58 PM IST

ಕೆ.ಆರ್‌.ಪೇಟೆ: ಪುರಾಣ ಪ್ರಸಿದ್ಧ ಗೋವುಗಳ ರಕ್ಷಕ ಬಿಲ್ಲೇನಹಳ್ಳಿ ಶ್ರೀ ಗವಿರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.

ರಥೋತ್ಸವ ಕಣ್ತುಂಬಿಕೊಳ್ಳಲು ಮುಂಬೈ, ದೆಹಲಿ, ಕೋಲ್ಕತ್ತಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಇನ್ನು ಸ್ಥಳೀಯ ಗ್ರಾಮಗಳ ಸಾವಿರಾರು ಭಕ್ತಾದಿಗಳು, ನವ ದಂಪತಿ ಉತ್ಸಾಹದಿಂದ ಜಾತ್ರೆಗೆ ಆಗಮಿಸಿದ್ದರು. ಜೊತೆಗೆ ರೈತರು ತಮ್ಮ ಜಾನುವಾರುಗಳಿಗೆ ಅಲಂಕಾರ ಮಾಡಿಕೊಂಡು ಮೆರವಣಿಗೆ ಮೂಲಕ ಕರೆತಂದರು. ಗವಿರಂಗನಾಥನಿಗೆ ಪೂಜೆ ಸಲ್ಲಿಸಿ ನಂತರ ರಥೋತ್ಸವದಲ್ಲಿ ಭಾಗವಹಿಸಿ ಕೃತಾರ್ಥರಾದರು.

ರಥೋತ್ಸವ, ಜಾತ್ರೆ ಸಂಸ್ಕೃತಿ ಪ್ರತಿಬಿಂಬ: ರಥೋತ್ಸವದ ನಂತರ ನಡೆದ ಜಾನಪದ ಕಲಾ ತಂಡಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ನಾರಾಯಣಗೌಡ, ಜಾತ್ರೆ ರಥೋತ್ಸವಗಳು ನಮ್ಮ ಸಂಸ್ಕೃತಿ ಪ್ರತಿಬಿಂಬ. ಜಾತ್ರೆ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಭಾಗವಹಿಸಿ ದೇವರ ದರ್ಶನ ಮಾಡಿ ಶ್ರೀರಥದ ಕಳಸಕ್ಕೆ ಹಣ್ಣು ದವನ ಸಮರ್ಪಿಸಿದಾಗ ದೇವರ ಕೃಪೆಗೆ ಪಾತ್ರರಾಗಬೇಕು. ರಥೋತ್ಸವದ ಸಂಭ್ರಮದಲ್ಲಿ ಜಾತಿ, ಮತ, ಪಂಥ ಮರೆತು ಒಂದಾಗಿ ಭಾಗವಹಿಸುವುದರಿಂದ ಪರಸ್ಪರ ಪ್ರೀತಿ-ವಿಶ್ವಾಸ ಹಾಗೂ ಬಾಂಧವ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಉತ್ಸವ ಮೂರ್ತಿಯನ್ನು ಹೆಗಲ ಮೇಲೆ ಹೊತ್ತು ಗವಿರಂಗನಾಥಸ್ವಾಮಿ ಕ್ಷೇತ್ರದ ಸುತ್ತಲೂ ಪ್ರದಕ್ಷಿಣೆ ಹಾಕಿದ ಶಾಸಕ ನಾರಾಯಣಗೌಡ, ಮುಡಾ ಅಧ್ಯಕ್ಷ ಕೆ.ಶ್ರೀನಿವಾಶ್‌, ಕುಮಾರ್‌, ತಹಶೀಲ್ದಾರ್‌ ಶಿವಮೂರ್ತಿ ಜಾತ್ರೆಗೆ ಚಾಲನೆ ನೀಡಿದರು. ಗವಿರಂಗನಾಥಸ್ವಾಮಿ ಕ್ಷೇತ್ರದ ಪ್ರದಾನ ಅರ್ಚಕರಾದ ಸಂಪತ್ತಾಚಾರ್‌ರ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆ, ಹೋಮ ಹವನ ನಡೆಯಿತು. ಉಘೇ ಗವಿರಂಗನಾಥಸ್ವಾಮಿ ಉಘೇ..ಗೋವಿಂದ.. ಉಘೇ ರಂಗನಾಥ ಎಂಬ ಜಯಘೋಷ ಮೊಳಗಿದವು. ಉಪತಹಶೀಲ್ದಾರ್‌ ಜಯಲಕ್ಷ್ಮೀ, ರಾಮಚಂದ್ರಪ್ಪ, ತಾಪಂ ಸದಸ್ಯ ದಿನೇಶ್‌, ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ,

ಸಮಾಜ ಸೇವಕ ಕೊಡಗಳ್ಳಿ ವೆಂಕಟೇಶ್‌, ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಶ್ರೀರಂಗಪಟ್ಟಣ: ಪಟ್ಟಣದ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿರುವ ಅವ್ಯವಸ್ಥೆಗಳ ಬಗ್ಗೆ ವಿದ್ಯಾರ್ಥಿಗಳ ಪೋಷಕರು ವಾಟ್ಸ್‌ ಆಪ್‌ನಲ್ಲಿ ಸಮಸ್ಯೆಗಳ...

  • ಮಂಡ್ಯ: ಸಾರ್ವಜನಿಕ ರಸ್ತೆ ಅತಿಕ್ರಮಿಸಿದ್ದಲ್ಲದೆ, ಪ್ರಶ್ನಿಸಿದ್ದಕ್ಕೆ ಜಾತಿನಿಂದನೆ ಪ್ರಕರಣ ದಾಖಲು ಮಾಡುವುದಾಗಿ ಬೆದರಿಕೆ ಹಾಕಿರುವವರ ವಿರುದ್ಧ ಕ್ರಮಕ್ಕೆ...

  • ಮದ್ದೂರು: ಕೇಂದ್ರ -ರಾಜ್ಯ ಸರ್ಕಾರಗಳು ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಕ್ರಮ ವಹಿಸಿ ನೌಕರರ ಹಿತ ಕಾಯಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ...

  • ಮಳವಳ್ಳಿ: ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವ ಸಂದರ್ಭದಲ್ಲಿ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಸಂಸದರು, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ...

  • ಮಳವಳ್ಳಿ: ತಾಲೂಕು ಮಡಿವಾಳ ಮಾಚಿದೇವರ ಸಂಘದ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮವು ಫೆ.25ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ...

ಹೊಸ ಸೇರ್ಪಡೆ