ಪದವೀಧರ ಶಿಕ್ಷಕರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಾಥಮಿಕ ಶಾಲಾ ಶಿಕ್ಷಕರ ಆಗ್ರಹ, 1- 5ನೇ ವರ್ಗಕ್ಕೆ ಸೀಮಿತಗೊಳಿಸಬೇಡಿ

Team Udayavani, Jul 10, 2019, 1:21 PM IST

mandy-tdy-2

ಪದವೀಧರ ಶಿಕ್ಷಕರ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು ಮಂಡ್ಯ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಮಂಡ್ಯ: ವರ್ಗಾವಣೆ, ಪದವೀಧರ ಶಿಕ್ಷಕರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು.

ನಗರದ ಸಾರ್ವಜನಿಕ ಉಪನಿರ್ದೇಶಕರ ಕಚೇರಿ ಆವರಣದಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶಾಲಾ ಶಿಕ್ಷಕರು, ಕೆಲ ಕಾಲ ಧರಣಿ ನಡೆಸಿದ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವೇತನ ಶ್ರೇಣಿ ನಿಗದಿಗೊಳಿಸಿ: 2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1 ರಿಂದ 5ನೇ ವರ್ಗಕ್ಕೆ ಸೀಮಿತಗೊಳಿಸಿದ ಆದೇಶವನ್ನು ತಕ್ಷಣ ರದ್ದುಗೊಳಿಸಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಗೊಳಿಸುವಂತೆ ಆಗ್ರಹಿಸಿದರು.

ಅಕ್ಟೋಬರ್‌ನಲ್ಲಿ ಕೋರಿಕೆ ವರ್ಗಾವಣೆ ನಡೆಸಿ: ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವುದು, ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕು. ಹಾಗೆಯೇ ಕಳೆದ 3 ವರ್ಷಗಳಿಂದ ಶಿಕ್ಷಕರ ವರ್ಗಾವಣೆ ನಡೆದಿಲ್ಲ. ಈಗ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಈ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್‌ ತಿಂಗಳಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕೆಂದು ಆಗ್ರಹಿಸಿದರು.

ಆದೇಶ ನೀಡಿ: ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕೆಂದು ಆಗ್ರಹಿಸುತ್ತೇವೆ. ಪಿಪಿಸಿ ಶಾಲಾ ಮಾತೆಯರನ್ನು ಸಾಮಾನ್ಯ ಶಿಕ್ಷಕರೆಂದು ಪರಿಗಣಿಸಿ ಆದೇಶ ಮಾಡಬೇಕು ಎಂದು ಒತ್ತಾಯಿಸಿದರು.

ಹೆಚ್ಚುವರಿ ಪ್ರಕ್ರಿಯೆ ಆರಂಭಿಸಿ: ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ-ವಿದ್ಯಾರ್ಥಿ ಅನುಪಾತ ಗುರುತಿಸಿದಾಗ ಮುಖ್ಯಶಿಕ್ಷಕ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ, ಹೆಚ್ಚುವರಿ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ಬಗೆಹರಿಸಿ: 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸಿನ ಪ್ರಕಾರ ಮುಖ್ಯ ಗುರುಗಳಿಗೆ 10, 15, 20, 25, 30 ವರ್ಷದ ಬಡ್ತಿಗಳನ್ನು ನೀಡಬೇಕು. ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆಯವರೆಗೂ ಬಡ್ತಿ ನೀಡಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕ-ನೌಕರರ ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಟಿ.ರವಿಶಂಕರ್‌, ಮುಖಂಡರಾದ ಕೆ.ಯುವರಾಜ್‌, ಪ್ರಧಾನ ಕಾರ್ಯದರ್ಶಿ ಮಂಜುನಾಥ, ನಾಗೇಶ್‌, ಕೆ.ಎಂ.ಚಂದ್ರಶೇಖರ್‌, ಲಿಂಗೇಗೌಡ, ಸ್ಮಿತಾರಾಣಿ, ಸಿದ್ದಲಿಂಗ, ತಿಮ್ಮೇಶ್‌, ಕೃಷ್ಣ, ಯುವರಾಜ, ಶಿವರಾಮೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.