ಗ್ರಾಪಂ ಗದ್ದುಗೆ: ಮೀಸಲಾತಿಯತ್ತ ಕಣ್ಣು

ಮೊದಲ ಅಧಿಕಾರಾವಧಿ 30 ತಿಂಗಳಿಗೆ ಮೊಟಕು ,ಮಹಿಳೆಯರಿಗೆ 50 ರಷ್ಟು ಸ್ಥಾನ ಮೀಸಲು

Team Udayavani, Jan 4, 2021, 2:36 PM IST

ಗ್ರಾಪಂ ಗದ್ದುಗೆ: ಮೀಸಲಾತಿಯತ್ತ ಕಣ್ಣು

ಮಂಡ್ಯ: ಗ್ರಾಮ ಪಂಚಾಯಿತಿ ಚುನಾವಣೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆಚುನಾವಣಾ ಆಯೋಗ ಮೀಸಲಾತಿ ಪ್ರಕಟಿಸಿರುವುದರಿಂದ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಜಿಲ್ಲೆಯಲ್ಲಿ ಮೂರು ಪಕ್ಷಗಳು ಗ್ರಾಪಂ ಗದ್ದುಗೆ ಹಿಡಿಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.ಚುನಾವಣೆ ಆಯೋಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷಸ್ಥಾನಗಳಿಗೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ(ಅ), ಹಿಂದುಳಿದ ವರ್ಗ(ಬಿ) ಹಾಗೂಸಾಮಾನ್ಯ ವರ್ಗಗಳಿಗೆ ಹಂಚಿಕೆ ಮಾಡಿದೆ.

ಅಭ್ಯರ್ಥಿಗಳ ಆಯ್ಕೆ ಕಸರತ್ತು: ಜಿಲ್ಲೆಯಲ್ಲಿ 230 ಗ್ರಾಮ ಪಂಚಾಯಿತಿಗಳಲ್ಲಿ ಗೆಲುವು ಸಾಧಿಸಿರುವ ತಮ್ಮ ಬೆಂಬಲಿತ ಸದಸ್ಯರಲ್ಲಿ ಮೀಸಲಾತಿಯಂತೆ ಅಧ್ಯಕ್ಷ-ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮುಂದಾಗಿವೆ. ಅಧಿಕಾರ ಹಿಡಿಯಲು ಮೀಸಲಾತಿ ಯಂತೆ ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಈಗಾಗಲೇ ಪಕ್ಷದ ಬೆಂಬಲಿತರಾಗಿ ಗೆಲುವು ಸಾಧಿಸಿರುವ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ಮೂರು ಪಕ್ಷಗಳು ಅಲರ್ಟ್‌ ಆಗಿವೆ.

ಮೂರು ಪಕ್ಷಗಳಿಂದ ಸದಸ್ಯರಿಗೆ ಅಭಿನಂದನೆ: ಈಗಾಗಲೇ ಮೂರು ಪಕ್ಷಗಳು ತಮ್ಮ ಬೆಂಬಲಿತ ಸದಸ್ಯರಿಗೆ ಅಭಿನಂದನೆ, ಸನ್ಮಾನಮಾಡುವ ಮೂಲಕ ಸದಸ್ಯ ಸಂಖ್ಯೆ ಹೆಚ್ಚಿಸಿಕೊಳ್ಳಲುಮುಂದಾಗಿವೆ. ಅದರಂತೆ ಪ್ರತಿನಿತ್ಯ ಜಿಲ್ಲೆಯಲ್ಲಿಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳಮುಖಂಡರು ಸಮಾರಂಭ ಏರ್ಪಡಿಸಿ ಸದಸ್ಯರನ್ನುಕರೆಸಿ, ಅಭಿನಂದನೆ ಸಲ್ಲಿಸುವ ಮೂಲಕ ತಮ್ಮ ಪಕ್ಷದ ಬೆಂಬಲಿ ತರಾಗಿ ಉಳಿಯುವಂತೆ ನೋಡಿ ಕೊಳ್ಳುತ್ತಿದ್ದಾರೆ.

ಸದಸ್ಯರು ವಲಸೆ ಹೋಗದಂತೆ ನಿಗಾ: ಹೆಚ್ಚು ಗ್ರಾಮ ಪಂಚಾಯಿತಿಗಳಆಡಳಿತ ಮಂಡಳಿಯನ್ನು ತಮ್ಮತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳಮುಖಂಡರು ಸದಸ್ಯರನ್ನು ಹಿಡಿದಿಟ್ಟುಕೊಳ್ಳಲುಯೋಜನೆ ರೂಪಿಸುತ್ತಿದ್ದಾರೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಡೆದು ಚುನಾವಣೆ ನಿಗದಿಯಾದರೆ ಸದಸ್ಯರು ಬೇರೆ ಪಕ್ಷಗಳಿಗೆ ವಲಸೆ ಹೋಗದಂತೆ ನೋಡಿಕೊಳ್ಳಲು ಪ್ರವಾಸದಂತಮಾರ್ಗ ಅನುಸರಿಸಲು ಸಿದ್ಧತೆಗಳು ನಡೆಯುತ್ತಿವೆ.

ಈಗಾಗಲೇ ಜಿಲ್ಲೆಯ 7 ತಾಲೂಕುಗಳಹಾಲಿ ಹಾಗೂ ಮಾಜಿ ಶಾಸಕರುತಮ್ಮ ಪಕ್ಷಗಳ ಬೆಂಬಲಿತಸದಸ್ಯರು ಹೆಚ್ಚು ಗೆಲುವು ಸಾಧಿಸಿದ್ದು, ಹೆಚ್ಚುಗ್ರಾಪಂಗಳ ಅಧಿಕಾರ ಹಿಡಿಯಲಿದ್ದೇವೆ ಎಂದು ಪೈಪೋಟಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸದಸ್ಯರ ಸೆಳೆಯಲು ಕಮಲ ಕಸರತ್ತು: ಕೆ.ಆರ್‌ .ಪೇಟೆ ತಾಲೂಕಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವಕೆ.ಸಿ.ನಾರಾಯಣಗೌಡರಿಗೆ ಪ್ರತಿಷ್ಠೆಯಾಗಿದ್ದು, ಅತಿಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಮ್ಮ ಬೆಂಬಲಿತಸದಸ್ಯರ ಮೂಲಕ ಅಧಿಕಾರ ಹಿಡಿಯುವುದು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ಸದಸ್ಯರಸೆಳೆಯುವ ಕಸರತ್ತು ಜೋರಾಗಿದೆ. ಈಗಾಗಲೇ ಹಲವು ಸದಸ್ಯರು ಬೆಂಬಲ ಸೂಚಿಸಿದ್ದಾರೆನ್ನಲಾಗಿದೆ. ಅದರಂತೆಮದ್ದೂರಿನಲ್ಲೂ ಕೆಲವು ಗ್ರಾಮಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದರಿಂದ ಸದಸ್ಯರ ಆಪರೇಷನ್‌ನಡೆಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಾಗಮಂಗಲ, ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮಬಲ ಸಾಧಿಸಿದ್ದು,ಆಡಳಿತ ಮಂಡಳಿ ರಚನೆಗೆ ಕಸರತ್ತು ನಡೆಸಿವೆ. ಇನ್ನುಳಿದಂತೆ ಪಾಂಡವಪುರದಲ್ಲಿ ಜೆಡಿಎಸ್‌ ಹಾಗೂ ಮಳವಳ್ಳಿಯಲ್ಲಿ ಕಾಂಗ್ರೆಸ್‌ ಮುನ್ನಡೆ ಸಾ ಸಿದ್ದು, ಗದ್ದುಗೆ ಹಿಡಿಯುವ ನಿರೀಕ್ಷೆಯಲ್ಲಿವೆ.

ಮಹಿಳೆಯರಿಗೆ ಸೀಮಿತ :  ಜಿಲ್ಲೆಯ 7 ತಾಲೂಕುಗಳ 230 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಲ್ಲಿ ಅರ್ಧದಷ್ಟು ಮಹಿಳೆಯರಿಗೆಮೀಸಲಿಡಲಾಗಿದೆ. ಅದರಲ್ಲಿ ಈ ಹಿಂದೆಮಹಿಳೆಯರಿಗೆ ಮೀಸಲಾಗಿದ್ದರೆ, ಅಂಥ ಗ್ರಾಮಪಂಚಾಯಿತಿಗಳನ್ನು ಗುರುತಿಸಿ ಆದ್ಯತೆ ಮೇರೆಗೆ ಮೀಸಲಾತಿ ಅನುಗುಣವಾಗಿ ಆಯ್ಕೆ ಮಾಡಬೇಕುಎಂದು ಸೂಚಿಸಿದೆ. ಈ ಬಾರಿಗೆ ಐದು ವರ್ಷಗಳಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅವಧಿಯನ್ನ ಮೊಟಕುಗೊಳಿಸಿ, ಮೊದಲ ಅವಧಿ 30 ತಿಂಗಳಿಗೆ ಸೀಮಿತಗೊಳಿಸಲಾಗಿದೆ. ಜಿಲ್ಲೆಯಲ್ಲಿಯೂ ಅತಿಹೆಚ್ಚುಮಹಿಳಾ ಸದಸ್ಯರು ಆಯ್ಕೆಯಾಗಿದ್ದಾರೆ. ಈಹಿನ್ನೆಲೆಯಲ್ಲಿ ಮೂರು ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರಸ್ತು ಆರಂಭಿಸಿವೆ.

ಜಿಲ್ಲಾಧಿಕಾರಿಯತ್ತ ಪಕ್ಷಗಳ ಚಿತ್ತ : ಚುನಾವಣೆ ಆಯೋಗದಂತೆಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ಜಿಲ್ಲಾ ಚುನಾವಣಾ ಧಿಕಾರಿಯಾಗಿರುವ ಜಿಲ್ಲಾಧಿಕಾರಿಗೆ ನೀಡಿರುವುದರಿಂದ ರಾಜಕೀಯ ಪಕ್ಷಗಳ ನಾಯಕರು,ಮುಖಂಡರು ಜಿಲ್ಲಾಧಿಕಾರಿ ನಿಗದಿಪಡಿಸುವ ಮೀಸಲಾತಿಯತ್ತಚಿತ್ತ ಹರಿಸಿದ್ದಾರೆ. ಚುನಾವಣೆಆಯೋಗದಂತೆ ಮೀಸಲಾತಿನಡೆಯಬೇಕು ಎಂಬ ನಿಟ್ಟಿನಲ್ಲಿ ನಿಗಾವಹಿಸುತ್ತಿದ್ದಾರೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.