ಕೃಷಿ ಉತ್ಪನ್ನ ಖರೀದಿಸದೇ ಲಂಚಕ್ಕಾಗಿ ಕಿರುಕುಳ

Team Udayavani, May 28, 2023, 3:30 PM IST

ಕೃಷಿ ಉತ್ಪನ್ನ ಖರೀದಿಸದೇ ಲಂಚಕ್ಕಾಗಿ ಕಿರುಕುಳ

ಕೆ.ಆರ್‌.ಪೇಟೆ: ತಾಲೂಕಿನ ಎಪಿಎಂಸಿ ಆವರಣದಲ್ಲಿರುವ ರಾಗಿ, ಭತ್ತ ಮತ್ತು ಕೊಬ್ಬರಿ ಖರೀದಿ ಕೇಂದ್ರದಲ್ಲಿ ರೈತರ ಉತ್ಪನ್ನಗಳನ್ನು ಬೆಂಬಲ ಬೆಲೆಯಡಿ ಖರೀದಿಸಲು ಸಿಬ್ಬಂದಿ ಅನಗತ್ಯ ಕಿರುಕುಳ ನೀಡಿ, ಲಂಚಕ್ಕಾಗಿ ಪೀಡಿಸುತ್ತಿರುವ ಆರೋಪ ಕೇಳಿಬಂದಿದೆ.

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಮೂಲಕ ಸರ್ಕಾರ ರೈತರ ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ. ಪಟ್ಟಣದ ಎಪಿಎಂಸಿಯಲ್ಲಿ ಪ್ರತಿದಿನ ಲಕ್ಷಾಂತರ ರೂ. ಖರೀದಿ ಪ್ರಕ್ರಿಯೆ ನಡೆಯುತ್ತದೆ. ಇಲ್ಲಿನ ಪಾಂಡವಪುರ ಉಪವಿಭಾಗದ ವೆಂಕಟೇಶ್‌ ನಾಯಕ್‌, ಕೆ.ಆರ್‌.ಪೇಟೆ ಘಟಕದ ಹನುಮಂತು ನಫೆಡ್‌ ಅಧಿಕಾರಿಗಳಾಗಿದ್ದಾರೆ.

ಲಂಚ ನೀಡಿದ್ರೆ ಪರಿಶೀಲಿಸದೇ ಖರೀದಿ: ಮಾರುಕಟ್ಟೆಗೆ ರೈತರು ತರುವ ಉತ್ಪನ್ನಗಳನ್ನು ಖರೀದಿ ಕೇಂದ್ರದ ಅಧಿ ಕಾರಿಗಳು ಗುಣಮಟ್ಟದ ಹೆಸರಿನಲ್ಲಿ ಇಲ್ಲಸಲ್ಲದ ಸಬೂಬು ಹೇಳಿ ಖರೀದಿಸಲು ಸತಾಯಿಸುತ್ತಾರೆ. ಲಂಚ ನೀಡಿದವರ ಉತ್ಪನ್ನಗಳನ್ನು ಪರಿಶೀಲಿಸದೆ ಖರೀದಿ ಮಾಡುತ್ತಾರೆ ಎಂದು ರೈತರು ದೂರಿದ್ದಾರೆ. ಪಟ್ಟಣದ ಎಪಿಎಂಪಿಗೆ ತಾಲೂಕಿನ ರೈತರೊಬ್ಬರು ಗುಣಮಟ್ಟದ 90 ಚೀಲ ಕೊಬ್ಬರಿ ಮಾರಾಟಕ್ಕಾಗಿ ತಂದಿದ್ದಾರೆ. ಆದರೆ, ಖರೀದಿ ಕೇಂದ್ರದ ಅ ಧಿಕಾರಿಗಳು ಗುಣಮಟ್ಟದ್ದನ್ನು ಮಾತ್ರ ಆಯ್ದು ಕೊಡುವಂತೆ ಒತ್ತಾಯಿಸಿದ್ದಾರೆ. ಪ್ರತಿಯೊಬ್ಬ ರೈತರಿಂದ ಇಲ್ಲಿನ ಖರೀದಿ ಅಧಿಕಾರಿಗಳು ವಸ್ತುಗಳ ಮೌಲ್ಯ ಆಧರಿಸಿ ಲಂಚಕ್ಕಾಗಿ ಬೇಡಿಕೆ ಇಡುತ್ತಾರೆ.

ಉತ್ತಮವಾದದ್ದನ್ನು ಆಯ್ದುಕೊಡಿ ಅಂತಾರೆ: ಹಣಕೊಟ್ಟ ರೈತರಿಗೆ ಯಾವುದೇ ಗುಣಮಟ್ಟದ ಪರಿಶೀಲನೆ ನಡೆಸದೇ ಖರೀದಿ ಮಾಡುತ್ತಾರೆ. ಇಲ್ಲದಿದ್ದರೆ, ನೀವು ತಂದಿರುವ ಕೊಬ್ಬರಿ ಚೆನ್ನಾಗಿಲ್ಲ. ತೆಗೆದುಕೊಳ್ಳಲು ಸಾಧ್ಯವಿಲ್ಲ. ನೆಲಕ್ಕೆ ಸುರಿದು ಉತ್ತಮವಾದುದ್ದನ್ನು ಮಾತ್ರ ಆಯ್ದುಕೊಡಿ ಎಂದು ಒತ್ತಡದ ತಂತ್ರ ಅನುಸರಿಸುತ್ತಾರೆ.

ಖರೀದಿ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ: ತಾನು ತಂದಿರುವ ಎಲ್ಲಾ ಕೃಷಿ ಉತ್ಪನ್ನಗಳನ್ನು ನೆಲಕ್ಕೆ ಸುರಿದು ಆಯ್ಕೆ ಮಾಡಲು ಸಾಧ್ಯವಿಲ್ಲದ ಕಾರಣ, ರೈತ ಅನಿವಾರ್ಯವಾಗಿ ಲಂಚಕೊಟ್ಟು ತನ್ನ ಉತ್ಪನ್ನಗಳನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿಯಿದೆ. ಖರೀದಿ ಕೇಂದ್ರದ ಕಿರುಕುಳದ ಬಗ್ಗೆ ಎಪಿಎಂಸಿ ಗಮನಕ್ಕೆ ತಂದರೆ ಅಧಿ ಕಾರಿಗಳು ಖರೀದಿ ಕೇಂದ್ರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಕೇವಲ ಗೋಡನ್‌ ಮಾತ್ರ ನೀಡಿದ್ದೇವೆ. ಖರೀದಿ ವ್ಯವಹಾರ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಗೆ ಸೇರಿದ್ದು ಎನ್ನುತ್ತಾರೆ.

ಡೀಸಿ ಗಮನ ಹರಿಸಲಿ: ಜಿಲ್ಲಾಧಿಕಾರಿಗಳು, ರಾಜ್ಯ ಮಾರಾಟ ಮಹಾಮಂಡಳಿಯ ಅಧಿ ಕಾರಿಗಳು ಈ ಬಗ್ಗೆ ಪರಿಶೀಲನೆ ಮಾಡಿ, ರೈತರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್‌ ಒತ್ತಾಯಿಸಿದ್ದಾರೆ. ಖರೀದಿ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯ ನಿರ್ದೇಶಕ ಶೀಳನೆರೆ ಮೋಹನ್‌, ಇದು ನಮ್ಮ ಫೆಡರೇಷನ್‌ ಗಮನಕ್ಕೂ ಬಂದಿದೆ. ತಾಲೂಕಿನ ರಾಗಿ ಖರೀದಿ ಕೇಂದ್ರದಲ್ಲಿನ ಮಹಿಳಾ ಸಿಬ್ಬಂದಿ ಯೊಬ್ಬರು ತಮ್ಮ ಕುಟುಂಬದ ಸರ್ವ ಸದಸ್ಯರ ಹೆಸರಿನಲ್ಲಿಯೂ ರಾಗಿ ಮಾರಾಟ ದಾಖಲೆ ಸೃಷ್ಟಿಸಿರುವುದು ಕಂಡು ಬಂದಿದೆ. ಈ ಬಗ್ಗೆ ಮಹಾ ಮಂಡಳದ ಸಭೆಯಲ್ಲಿಯೂ ಪ್ರಸ್ತಾಪಿಸಲಾಗಿದೆ ಎಂದಿದ್ದಾರೆ.

ಸಹಕಾರ ಮಾರಾಟ ಮಹಾಮಂಡಳದ ನೌಕರರ ಭ್ರಷ್ಟಾಚಾರದ ಬಗ್ಗೆ ರೈತರು ಲಿಖಿತ ದೂರು ನೀಡದೆ ಸ್ಥಳೀಯ ಮಟ್ಟದಲ್ಲಿಯೇ ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದರಿಂದ ನಾವು ಯಾವುದೇ ನೌಕರರ ಮೇಲೂ ಕ್ರಮ ಜರುಗಿಸಲು ಸಾಧ್ಯವಾಗುತ್ತಿಲ್ಲ. ರೈತರು ಜಾಗೃತರಾಗಬೇಕು. ತಮ್ಮ ಉತ್ಪನ್ನಗಳ ಖರೀದಿಗೆ ಲಂಚಕ್ಕಾಗಿ ಪೀಡಿಸುವ ಸಿಬ್ಬಂದಿ ವಿರುದ್ಧ ಮಹಾಮಂಡಳಕ್ಕೆ ಅಥವಾ ಲೋಕಾಯುಕ್ತರಿಗೆ ದೂರು ನೀಡಿ ಅವ್ಯವಹಾರ ತಡೆಗಟ್ಟಲು ಸಹಕರಿಸಬೇಕು. ರೈತರು ಜಾಗೃತಿಗೊಳ್ಳದೆ ಭ್ರಷ್ಟಾಚಾರ ನಿಯಂತ್ರಣ ಅಸಾಧ್ಯ ಎಂದಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.