ಮಾನವನ ದುರಾಸೆಗೆ ಕಾಡು, ಪರಿಸರ ನಾಶ

Team Udayavani, Jan 17, 2018, 4:04 PM IST

Hosmatha-Bridge-2.jpg

ಮದ್ದೂರು: ಪ್ರಸಕ್ತ ದಿನಗಳಲ್ಲಿ ಮಾನವನ ದುರಾಸೆಯಿಂದಾಗಿ ಪರಿಸರ ಕಣ್ಮರೆಯಾಗಿ ಬೃಹತ್‌ ಕೈಗಾರಿಕಾ ಕಟ್ಟಡಗಳು ನಿರ್ಮಾಣಗೊಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಆರ್‌.ಕೆ.ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್‌ ರಾಮಕೃಷ್ಣ ತಿಳಿಸಿದರು.

ತಾಲೂಕಿನ ಸೋಮನಹಳ್ಳಿ ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆ, ವಿವೇಕಾನಂದ ಸಾಂಸ್ಕೃತಿಕ ಯುವ ಕ್ರೀಡಾ ಸಂಘ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಹಯೋಗದಲ್ಲಿ ವಿವೇಕಾನಂದ ಸಪ್ತಾಹ ಹಾಗೂ ದೈಹಿಕ ಸಾಮರ್ಥಯ ದಿನದ ಪ್ರಯುಕ್ತ ಯುವಕ ಯುವತಿಯರಿಗೆ ಹಮ್ಮಿಕೊಂಡಿದ್ದ ಸೈಕಲ್‌ ರೇಸ್‌ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರ ರಕ್ಷಣೆ ಎಲ್ಲರ ಕರ್ತವ್ಯ: ವಿನಾಶದ ಹಂಚಿನಲ್ಲಿರುವ ಪರಿಸರವನ್ನು ಸಂರಕ್ಷಣೆ ಮಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ಶಿಕ್ಷಕರು ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸಬೇಕು. ತಲೆಗೊಂದು ಸಸಿ ನೆಟ್ಟು ಪರಿಸರ ರಕ್ಷಣೆ ಮಾಡಬೇಕು. ಕೇವಲ ಸಸಿ ನೆಟ್ಟರೆ ಅಲ್ಲಿಗೆ ನಮ್ಮ ಕೆಲಸ ಮುಗಿಯುವುದಿಲ್ಲ. ಆ ಸಸಿಯನ್ನು ಪೋಷಿಸುವುದು ತುಂಬಾ ಮುಖ್ಯ. ಹೆಸರಿಗೆ ಸಸಿ ನೆಡುವ ಕಾರ್ಯಕ್ರಮವಾಗದೆ, ಆ ಸಸಿ ಗಿಡವಾಗಿ, ಮರವಾಗಿ ಬೆಳೆದಾಗಲೇ ಪರಿಸರ ಸಂರಕ್ಷಣೆ ಕಾರ್ಯಕ್ರಮಗಳು ಸಾರ್ಥಕ ಎಂದು ಹೇಳಿದರು.

ಸೈಕಲ್‌ ಸ್ಪರ್ಧೆ ಪ್ರೋತ್ಸಾಹಿಸಿ: ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಇಂತಹ ಸ್ಪರ್ಧೆ ಉತ್ತಮ ಮತ್ತು ಆರೋಗ್ಯಕರ ಬೆಳವಣಿಗೆಗೆ ಪೂರಕ. ಯುವಜನರು ಇಂತಹ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜತೆಗೆ ಪ್ರೋತ್ಸಾಹಿಸಬೇಕು. ಅಲ್ಲದೆ ಹೊಗೆರಹಿತ ಸೈಕಲ್‌ಗ‌ಳನ್ನು ಬಳಸಿದರೆ ಪರಿಸರ ಮತ್ತು ಮನುಷ್ಯನ ಆರೋಗ್ಯವೂ ಸಂರಕ್ಷಣೆ ಮಾಡಬಹುದು. ಜಾಗತಿಕ ತಾಪಮಾನ ಇಳಿಕೆ ಮಾಡುವಲ್ಲಿ ಸೈಕಲ್‌ ಅಭ್ಯಾಸ ಉಪಯುಕ್ತಕರ. ಇದರಿಂದಾಗಿ ದೈಹಿಕ ಸಾಮರ್ಥ್ಯ ಹೆಚ್ಚುವ ಜತೆಗೆ ಪರಿಸರ ಸಂರಕ್ಷಣೆಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಪಂ ಸದಸ್ಯ ಎಸ್‌.ಆರ್‌.ಸತೀಶ್‌ ವಿಜೇತ ವಿದ್ಯಾರ್ಥಿಗಳಿಗೆ ನಗದು ಹಾಗೂ ಪಾರಿತೋಷಕ ವಿತರಿಸಿದರು. ಈ ವೇಳೆ ಜಿಪಂ ಸದಸ್ಯ ಬೋರಯ್ಯ, ಸೋಮನಹಳ್ಳಿ ಗ್ರಾಪಂ ಅಧ್ಯಕ್ಷೆ ವೀಣಾ, ಪ್ರಾಂಶುಪಾಲ ಪ್ರಕಾಶಬಾಬು, ಎನ್ನೆಸ್ಸೆಸ್‌ ಅಧಿಕಾರಿ ಚನ್ನಂಕೇಗೌಡ, ಸಂಘದ ಅಧ್ಯಕ್ಷೆ ಶೃತಿ, ಕಾರ್ಯದರ್ಶಿ ಎನ್‌.ಪ್ರಸನ್ನ, ದೈಹಿಕ ಶಿಕ್ಷಣ ಶಿಕ್ಷಕ ಸೋಮಣ್ಣ ಭಾಗವಹಿಸಿದ್ದರು.

ಯುವಕರ ವಿಭಾಗದಲ್ಲಿ: ಮಹಾಂತೇಶಗೌಡ(ಪ್ರ), ಜಸ್ವಂತ್‌(ದ್ವಿ), ಪ್ರಶಾಂತ್‌(ತೃ), ಸಿದ್ದರಾಜು, ಸುಹಾಸ್‌ ಸಮಾಧಾನಕರ ಬಹುಮಾನ ಪಡೆದರು. ಯುವತಿಯರ ವಿಭಾಗದಲ್ಲಿ ಎ.ಪಿ.ರಶ್ಮಿ(ಪ್ರ), ಸೋನಾ(ದ್ವಿ), ಭಾವನಾ(ತೃ), ಕೆ.ಟಿ.ಪೂಜಾಶ್ರೀ, ಸಿ.ಆರ್‌.ಪ್ರೀತಿ ಸಮಾಧಾನಕರ ಬಹುಮಾನ ಪಡೆದರು. ಪ್ರೌಢಶಾಲಾ ವಿಭಾಗದಲ್ಲಿ ರಾಜೇಶ್‌(ಪ್ರ), ಕೌಶಿಕ್‌ಗೌಡ(ದ್ವಿ), ಸಿ.ದರ್ಶನ್‌(ತೃ), ಕೆರಣ್‌, ಕೆ.ಎ.ನೋದಕುಮಾರ್‌ ಸಮಾಧಾನಕರ ಬಹುಮಾನ ಪಡೆದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.