ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತೆಯೇ ಮದ್ದು


Team Udayavani, May 17, 2019, 4:10 PM IST

man-1

ಮಂಡ್ಯ: ಪ್ರತಿಯೊಬ್ಬರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛ ಮಾಡಿದರೆ, ಸ್ವಚ್ಛ ದೇಶ ನಿರ್ಮಾಣವಾಗುವ ಜೊತೆಗೆ ಸಾಂಕ್ರಾಮಿಕ ರೋಗ ಮುಕ್ತ ದೇಶ ನಿರ್ಮಾಣವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫ‌ರ್‌ ಹೇಳಿದರು.

ನಗರದ ಜಯಚಾಮರಾಜ ಒಡೆಯರ್‌ ವೃತ್ತದಿಂದ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿ ಆವರಣದವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಡೆಂಘೀ ಜಾಗೃತಿ ಜಾಥಾಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಸಾಂಕ್ರಾಮಿಕ ರೋಗಗಳ ಜಾಗೃತಿ: ಡೆಂಘೀ, ಚಿಕನ್‌ ಗುನ್ಯಾ ಸೇರಿ ಸಾಂಕ್ರಾಮಿಕ ರೋಗಗಳಿಂದ ಮುಕ್ತವಾಗುವುದು ಮನುಷ್ಯನಿಗೆ ಅವಶ್ಯಕವಾಗಿದೆ. ಇಂತಹ ಗಂಭೀರ ಸಾಂಕ್ರಾಮಿಕ ರೋಗಗಳಿಂದ ಮುಕ್ತವಾಗಲು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಪ್ರಮುಖವಾಗಿದೆ. ಈ ಉದ್ದೇಶದಿಂದ ಇಡೀ ರಾಜ್ಯಾದ್ಯಂತ ಡೆಂಘೀ ರೋಗ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮೇ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಜಾಗೃತಿ ಮೂಡಿಸುತ್ತಿವೆ. ಜನರು ರೋಗ ಮುಕ್ತರಾಗಿ ಆರೋಗ್ಯಯುತ ಜೀವನ ಮಾಡಬೇಕು ಎಂದು ಹೇಳಿದರು.

ಸ್ವಚ್ಛತೆ ಕಾಪಾಡಿ: ಮನುಷ್ಯ ಆರೋಗ್ಯ ಕಾಪಾಡಿಕೊಳ್ಳಲು ತಾನು ವಾಸ ಮಾಡುವ ಸುತ್ತಲಿನ ಪರಿಸರದ ಸ್ವಚ್ಛತೆ ಇರಬೇಕು. ಸ್ವಚ್ಛತೆಯೇ ಸಾಂಕ್ರಾಮಿಕ ರೋಗಗಳ ವಿನಾಶಕ್ಕೆ ರಾಮಬಾಣವಾಗಿದೆ. ಹೀಗಾಗಿ ತಮ್ಮ ಮನೆ, ಹಾಗೂ ಸುತ್ತಲಿನ ಪರಿಸರ ಸ್ವಚ್ಛ ಮಾಡುವಲ್ಲಿ ಪ್ರತಿಯೊಬ್ಬರೂ ಭಾಗೀದಾರರಾಗಬೇಕು. ಸೊಳ್ಳೆಗಳಿಂದ ಬರುತ್ತಿರುವ ರೋಗಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಹೀಗಾಗಿ ಆರೋಗ್ಯ ಕಾರ್ಯಕರ್ತರು ಸೇರಿ ವಿವಿಧ ಸಂಘಟನೆಗಳ ಮೂಲಕ ಪ್ರತಿಯೊಂದು ಹಳ್ಳಿಗಳಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಸೊಳ್ಳೆ ನಿವಾರಕ ಬಳಸಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಚೇಗೌಡ ಮಾತನಾಡಿ, ಸಾಂಕ್ರಾಮಿಕ ರೋಗಗಳಿಗೆ ಮನುಷ್ಯನ ಸುತ್ತಲೂ ಇರುವ ನೈರ್ಮಲ್ಯದ ಕೊರತೆಯೇ ಕಾರಣವಾಗಿದೆ. ಸೊಳ್ಳೆಗಳು ಬಹುತೇಕ ಮಾರಣಾಂತಿಕ ಸಾಂಕ್ರಾಮಿಕ ರೋಗ ಹರಡುವ ಕೀಟವಾಗಿದೆ. ಹಗಲಿನಲ್ಲಿ ಕಚ್ಚುವ ಏಡಿಸ್‌ ಈಜಿಪ್ಟಿ ಸೊಳ್ಳೆಯಿಂದ ಡೆಂಘೀ ರೋಗ ಬರುತ್ತದೆ. ಹೀಗಾಗಿ ನೀರು ನಿಲ್ಲದಂತೆ ಗುಂಡಿಗಳನ್ನು ಹಾಗೂ ಚರಂಡಿಗಳನ್ನು ಮುಚ್ಚುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಬೇಕು. ಮನೆಯಲ್ಲಿ ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿವಾರಕಗಳನ್ನು ಬಳಕೆ ಮಾಡಬೇಕು. ಡೆಂಘೀ ಬರದಂತೆ ಜಾಗೃತಿ ವಹಿಸಬೇಕು ಎಂದರು.

ಡೆಂಘೀ ಮುಕ್ತ ಜಿಲ್ಲೆ: ಮೇ ತಿಂಗಳ ಕೊನೆಯ ದಿನಗಳು, ಜೂನ್‌ ಹಾಗೂ ಜುಲೈ ತಿಂಗಳ ಮಳೆಗಾಲದಲ್ಲಿ ಡೆಂಘೀ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಸಾರ್ವಜನಿಕರು ಜ್ವರ, ತಲೆನೋವು, ವಾಂತಿ, ತೀವ್ರ ಕಣ್ಣಿನ ನೋವು ಹಾಗೂ ಅತಿಯಾದ ಸುಸ್ತು ಕಂಡು ಬಂದಲ್ಲಿ ನಿರ್ಲಕ್ಷ್ಯ ಮಾಡದೆ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು. ರಾಜ್ಯದಲ್ಲಿ 201-17ನೇ ಸಾಲಿನಲ್ಲಿ ಡೆಂಘೀ ಪ್ರಕರಣದಿಂದ ಹಲವು ಜನರು ಸಾವನ್ನಪ್ಪಿದ್ದಾರೆ. ಆದರೆ ಕಳೆದ 2018ನೇ ಸಾಲಿನಲ್ಲಿ ಡೆಂಘೀ ರೋಗ ದಿಂದ ಸಾವು ಸಂಭವಿಸಿಲ್ಲ. ಸ್ವಚ್ಛತೆ ಬಗ್ಗೆ ಕಾಳಜಿ ವಹಿಸುವ ಮೂಲಕ ಡೆಂಘೀ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದರು. ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಅಧಿಕಾರಿ ಡಾ.ಭವಾನಿ ಶಂಕರ್‌, ವೈದ್ಯಾಧಿಕಾರಿ ಡಾ.ಬಾಲಕೃಷ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

23

Actor Darshan: ಕಾನ್‌ಸ್ಟೇಬಲ್‌ ಮೇಲೆಯೂ ನಟ ದರ್ಶನ್‌ ಗ್ಯಾಂಗ್‌ ಹಲ್ಲೆ 

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

Mandya: Theft of sandal trees from school premises after threatening security guards

Mandya: ಸೆಕ್ಯೂರಿಟಿ ಗಾರ್ಡ್ ಬೆದರಿಸಿ ಶಾಲಾ ಆವರಣದ ಗಂಧದ ಮರಗಳ ಕಳವು

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.