ಕನ್ನಡ ಚಿತ್ರರಂಗದ ನಟ ಸಾರ್ವಭೌಮನ ಸ್ಮರಣೆ

ಅನ್ಯಭಾಷೆಗಳ ಅವಕಾಶವಿದ್ದರೂ ಕನ್ನಡದಲ್ಲೇ ಉಳಿದ ರಾಜ್‌ • ಜಿಲ್ಲಾಡಳಿತದಿಂದ ಡಾ.ರಾಜಕುಮಾರ್‌ ಜಯಂತಿ

Team Udayavani, Apr 25, 2019, 1:32 PM IST

mandya-tdy-1

ಮಂಡ್ಯ: ವರನಟ ಡಾ.ರಾಜಕುಮಾರ್‌ ಗೋಕಾಕ್‌ ಚಳವಳಿಯ ಮೂಲಕ ಕನ್ನಡದ ಉಳಿವಿಗೆ ಬಹುದೊಡ್ಡ ಕೊಡುಗೆ ನೀಡಿದ್ದರು. ಅವರ ಕನ್ನಡದ ಬದ್ಧತೆಯ ಪರಂಪರೆ ಇಂದಿನ ಕನ್ನಡ ಚಿತ್ರರಂಗದ ನಟ-ನಟಿಯರು ಮುಂದುವರಿಸಬೇಕು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್‌ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಾ.ರಾಜಕುಮಾರ್‌ ಅವರ 91ನೇ ಜನ್ಮ ದಿನೋತ್ಸವದಲ್ಲಿ ಮಾತನಾಡಿದ ಅವರು, ಕನ್ನಡಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಡಾ.ರಾಜಕುಮಾರ್‌ ದಿಟ್ಟತನದಿಂದ ಮುನ್ನುಗ್ಗುವ ಪ್ರವೃತ್ತಿಯನ್ನು ಹೊಂದಿದ್ದರು. ಅದೇ ಕಾರಣಕ್ಕೆ ಅವರು ತೆರೆಯ ಮೇಲೆ ನಾಯಕನಾಗಿ ಉಳಿಯದೆ ಜನಸಾಮಾನ್ಯರ ಬದುಕಿನಲ್ಲೂ ಹೀರೋ ಆಗಿ ವಿಜೃಂಭಿಸಿದರು ಎಂದು ಬಣ್ಣಿಸಿದರು.

ಸಜ್ಜನ ಸರಳ ವ್ಯಕ್ತಿತ್ವ: ಕನ್ನಡ ಚಿತ್ರರಂಗಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡ ಡಾ.ರಾಜಕುಮಾರ್‌ ದಕ್ಷಿಣ ಭಾರತದಲ್ಲಿ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸುವಲ್ಲಿ ಅವರ ಪಾತ್ರ ಮಹತ್ವವಾದುದು. ರಾಜಕುಮಾರ್‌ ಕನ್ನಡ ಚಿತ್ರರಂಗದ ಧ್ರುವತಾರೆಯಾಗಿ ಮೆರೆದರು. ಅನ್ಯಭಾಷೆಗಳಿಂದ ಅವಕಾಶಗಳು ಬಂದರೂ, ಅವೆಲ್ಲವನ್ನೂ ವಿನಯದಿಂದಲೇ ತಿರಸ್ಕರಿಸಿ ಕನ್ನಡದಲ್ಲೇ ಉಳಿದುಕೊಂಡರು. ಕಲೆಯ ಮೂಲಕ ಮೇರು ಸಾಧನೆ ಮಾಡಿದ್ದರೂ ಸರಳತೆ, ಸಜ್ಜನಿಕೆ ಹಾಗೂ ಸಹಜವಾದ ಬದುಕಿನ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಅವರ ಬದುಕು ಆದರ್ಶನೀಯ ಎಂದು ಹೇಳಿದರು.

ಭಾರತ ರತ್ನ ನೀಡಿ: ಡಾ.ರಾಜಕುಮಾರ್‌ ಜೀವನದುದ್ದಕ್ಕೂ ಸಾರ್ಥಕತೆ ಮೆರೆದಿದ್ದರು. ಸಾವಿನ ಸಂದರ್ಭದಲ್ಲೂ ಕೂಡ ನೇತ್ರದಾನ ಮಾಡುವ ಮೂಲಕ ಸಮಾಜಕ್ಕೆ ಬೆಳಕಾಗುವ ಸಂದೇಶವನ್ನು ಕೊಟ್ಟ ಅವರ ಸಮಗ್ರ ಬದುಕು, ಸಾಧನೆ ಮತ್ತು ಪ್ರತಿಭೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರದಿಂದ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಸದಭಿರುಚಿಯ ಚಿತ್ರಗಳ ಮೂಲಕ ಸಾಮಾಜಿಕ ಪರಿವರ್ತನೆಗೆ ಮುಂದಾದ ಡಾ.ರಾಜಕುಮಾರ್‌ ಅವರು ಐತಿಹಾಸಿಕ ಪಾತ್ರಗಳಿಗೆ ಜೀವ ತುಂಬುವ ಕಾರ್ಯವನ್ನು ಅತ್ಯಂತ ನಿಷ್ಠೆಯಿಂದ ಮಾಡಿದರು. ನಮ್ಮೆದುರು ಕನಕದಾಸ, ಪುರಂದರದಾಸರು, ಶ್ರೀ ಕೃಷ್ಣದೇವರಾಯರಂತಹ ಮಹನೀಯರನ್ನು ನೇರವಾಗಿ ನೋಡಿಲ್ಲದಿದ್ದರೂ ರಾಜಕುಮಾರ್‌ ಅಭಿನಯದ ಮೂಲಕ ಅವರೆಲ್ಲರನ್ನೂ ಜನರಿಗೆ ಸಾಕ್ಷಾತ್‌ ದರ್ಶನ ಮಾಡಿಸಿದರು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫ‌ರ್‌ ಉದ್ಘಾಟಿಸಿ, ಡಾ.ರಾಜಕುಮಾರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪ ವಿಭಾಗಾಧಿಕಾರಿ ರಾಜೇಶ್‌, ವಾರ್ತಾ ಮತ್ತು ಪ್ರಚಾರ ಇಲಾಖೆ ಸಹಾಯಕ ನಿರ್ದೇಶಕ ಹರೀಶ್‌, ಮುಖಂಡರಾದ ಮಹಮದ್‌ ಜಬೀವುಲ್ಲಾ, ಸಿದ್ದಶೆಟ್ಟಿ, ಎಸ್‌.ರಾಜೇಂದ್ರ ಇತರರಿದ್ದರು. ಕಲಾವಿದರಾದ ಸ್ವಾಮಿ, ಬಸವರಾಜು, ಶೇಖರ್‌ ಅವರಿಂದ ಡಾ.ರಾಜಕುಮಾರ್‌ ಗೀತ ಗಾಯನ ನಡೆಯಿತು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.