ಕೆಸಿಎನ್‌-ಕೆಬಿಸಿ ಮತ್ತೆ ಮುಖಾಮುಖಿ

Team Udayavani, Nov 15, 2019, 4:22 PM IST

Udayavani Kannada Newspaper

ಮಂಡ್ಯ: ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್‌ ಚುನಾವಣಾ ಅರ್ಹತೆ ಘೋಷಿಸುತ್ತಿದ್ದಂತೆ ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮೂರೂ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿವೆ.

ಚುನಾವಣೆಗೆ ಸ್ಪರ್ಧಿಸಲು ಸುಪ್ರೀಂ ಗ್ರೀನ್‌ ಸಿಗ್ನಲ್‌ ಕೊಟ್ಟ ಬೆನ್ನಲ್ಲೇ ಕೇಸರಿ ಪಾಳಯಕ್ಕೆ ಜಾರಿದ ಕೆ.ಸಿ.ನಾರಾಯಣಗೌಡರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆಯಾದರು. ನಂತರದಲ್ಲಿ ದೇವೇಗೌಡರ ಮಾನಸಪುತ್ರರೆಂದೇ ಗುರುತಿಸಲ್ಪಟ್ಟಿರುವ ಜಿಪಂ ಸದಸ್ಯ ಬಿ.ಎಲ್‌.ದೇವರಾಜು ಅವರನ್ನು ಜೆಡಿಎಸ್‌ ತನ್ನ ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದರೆ, ಸಂಜೆಯ ವೇಳೆಗೆ ಕಾಂಗ್ರೆಸ್‌ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಅವರಿಗೆ ಮತ್ತೆ ಟಿಕೆಟ್‌ ನೀಡಿ ಕಣಕ್ಕಿಳಿಸಿದೆ.

ಎರಡು ಚುನಾವಣೆಯಲ್ಲಿ ಸೋಲು: 2012 ಹಾಗೂ 2018ರ ವಿಧಾನಸಭಾ ಚುನಾವಣೆಗಳಲ್ಲಿ ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಆ ವೇಳೆ ಕಾಂಗ್ರೆಸ್‌ನಿಂದ ಕೆ.ಬಿ.ಚಂದ್ರಶೇಖರ್‌ ಹಾಗೂ ಜೆಡಿಎಸ್‌ನಿಂದ ಕೆ.ಸಿ.ನಾರಾಯಣಗೌಡರು ಮುಖಾಮುಖೀಯಾಗಿ ಸೆಣಸಾಟ ನಡೆಸಿದ್ದರು. ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಇಬ್ಬರೂ ನಾಯಕರ ನಡುವೆ ಮತ್ತೆ ನೇರ ಕದನ ಏರ್ಪಟ್ಟಿದೆ. ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಕೆ.ಸಿ.ನಾರಾಯಣ ಗೌಡರು ಬಿಜೆಪಿ ಅಭ್ಯರ್ಥಿಯಾಗಿ ಅಖಾಡ ದಲ್ಲಿರುವುದು ಈ ಬಾರಿಯ ವಿಶೇಷವಾಗಿದೆ.

ಎರಡು ಚುನಾವಣೆಯ ಸೋಲಿನಿಂದ ದೃತಿಗೆಟ್ಟಿರುವ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಉಪ ಚುನಾವಣೆಗೆ ಒಲ್ಲದ ಮನಸ್ಸಿನಿಂದಲೇ ಅಖಾಡ ಪ್ರವೇಶಿಸಿದ್ದಾರೆ. ಕಳೆದೆರಡು ವಿಧಾನಸಭಾ ಚುನಾವಣೆಗಳಲ್ಲಿ ನಾರಾಯಣಗೌಡರ ವಿರುದ್ಧ ಹೀನಾಯವಾಗಿ ಪರಾಭವಗೊಂಡಿರುವ ಕೆ.ಬಿ.ಚಂದ್ರಶೇಖರ್‌ ಈ ಬಾರಿ ಹ್ಯಾಟ್ರಿಕ್‌ ಸೋಲಿನಿಂದ ಹೊರಬರಲು ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

ಚುನಾವಣಾ ರಣತಂತ್ರ: ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯಿಂದ ಕ್ಷೇತ್ರದಲ್ಲಿ ತಮ್ಮ ವರ್ಚಸ್ಸಿಗೆ ಧಕ್ಕೆಯಾಗದಂತೆ ಎಚ್ಚರ ವಹಿಸಿರುವ ಕೆ.ಸಿ.ನಾರಾಯಣಗೌಡರು ಬಹಳ ಸೂಕ್ಷ್ಮವಾಗಿ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಚುನಾವಣಾ ಪೂರ್ವಭಾವಿಯಾಗಿ ಕ್ಷೇತ್ರದಾದ್ಯಂತ ಸಭೆ-ಸಮಾರಂಭಗಳನ್ನು ನಡೆಸಿ ಕ್ಷೇತ್ರದ ಅಭಿವೃದ್ಧಿಗಾಗಿ ರಾಜೀನಾಮೆ ನೀಡುವ ಸನ್ನಿವೇಶ ಸೃಷ್ಟಿಯಾಯಿತು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ನೇತೃತ್ವದಲ್ಲಿ ತಾಲೂಕನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಭರವಸೆಯೊಂದಿಗೆ ಜನರನ್ನು ಮನವೊಲಿಸಿಕೊಳ್ಳುತ್ತಾ ಮತಬೇಟೆಯಲ್ಲಿ ತೊಡಗಿದ್ದಾರೆ.

ತವರಿನ ಉಡುಗೊರೆ: ಜಿಲ್ಲೆಯಲ್ಲಿ ಕಮಲವನ್ನು ಅರಳಿಸಿ ಯಡಿಯೂರಪ್ಪಅವರಿಗೆ ತವರಿನ ಉಡುಗೊರೆ ನೀಡುವ ಜೊತೆಯಲ್ಲೇ ಕೆ.ಆರ್‌.ಪೇಟೆಗೆ ಮಂತ್ರಿಸ್ಥಾನ ಪಡೆದುಕೊಂಡು ಅಧಿಕಾರ ನಡೆಸುವ ಮಹತ್ವಾಕಾಂಕ್ಷೆಯನ್ನೂ ನಾರಾಯಣಗೌಡರು ಹೊಂದಿದ್ದಾರೆ. ಅದಕ್ಕಾಗಿ ಚುನಾವಣಾ ರಣತಂತ್ರ ರೂಪಿಸುವ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆ: ಒಂದೆಡೆ ಹ್ಯಾಟ್ರಿಕ್‌ ಸೋಲಿನಿಂದ ಹೊರಬರಲು ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್‌ ಹೋರಾಟ ನಡೆಸುತ್ತಿದ್ದರೆ, ಮತ್ತೂಂದೆಡೆ ಬಿಜೆಪಿ ಅಭ್ಯರ್ಥಿಯಾಗಿ ಅಖಾಡದಲ್ಲಿರುವ ಕೆ.ಸಿ.ನಾರಾಯಣಗೌಡ ಸತತ ಮೂರನೇ ಬಾರಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ತಾಲೂಕಿನಲ್ಲಿ ಗೂಂಡಾಗಿರಿ ರಾಜಕಾರಣವನ್ನು ಅಂತ್ಯಗೊಳಿಸಿ ಕ್ಷೇತ್ರದಲ್ಲಿ ಶಾಂತಿ-ನೆಮ್ಮದಿ ನೆಲೆಸಲು ಮತ್ತೂಮ್ಮೆ ತಮ್ಮನ್ನು ಬೆಂಬಲಿಸುವಂತೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಒತ್ತಾಸೆಯಾಗಿ ನಿಲ್ಲುವಂತೆ ಮತದಾರ ಪ್ರಭುಗಳಲ್ಲಿ ಕೋರುತ್ತಿದ್ದಾರೆ.

ವಿಜಯೇಂದ್ರಗೆ ಸಚಿವ-ಶಾಸಕ ಸಾಥ್‌: ಜೆಡಿಎಸ್‌ ಅಭ್ಯರ್ಥಿ ಬಿ.ಎಲ್‌. ದೇವರಾಜು ಅವರಿಗೆ ದೇವೇಗೌಡರ ಪುತ್ರಿ ಡಾ.ಅನಸೂಯ ಮಂಜುನಾಥ್‌ ಪ್ರಚಾರಕ್ಕೆ ಬರುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಯಡಿಯೂರಪ್ಪತಮ್ಮ ಪುತ್ರ ವಿಜಯೇಂದ್ರ ಅವರನ್ನು ಪ್ರಚಾರಕ್ಕೆ ಕಳುಹಿಸಿ ಹಾಸನ ಶಾಸಕ ಪ್ರೀತಂಗೌಡ ಮತ್ತು ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಜೊತೆಗೆ ಬಿಟ್ಟು ಶತಾಯಗತಾಯ ಕ್ಷೇತ್ರವನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್‌ ಸೋಲಿನಿಂದ ಹೊರಬರಲು ಅಳೆದು ಸುರಿದು ಲೆಕ್ಕಾಚಾರ ನಡೆಸಿ ಭಾರೀ ತಾಳ್ಮೆಯಿಂದಲೇ ಸಂಘಟಿತ ಹೋರಾಟಕ್ಕೆ ಇಳಿದಿದ್ದಾರೆ. ಅಸಮಾಧಾನಿತರನ್ನು ಸಮಾಧಾನಪಡಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಸಜ್ಜಾಗುತ್ತಿದ್ದಾರೆ.

-ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.