ಮದ್ದೂರು-ಕೊಪ್ಪ ರಸ್ತೆ ಅಭಿವೃದ್ಧಿಗೆ ಆಗ್ರಹ

Team Udayavani, Dec 6, 2019, 4:12 PM IST

ಮದ್ದೂರು: ಮದ್ದೂರುಕೊಪ್ಪ ಮಾರ್ಗದ ರಸ್ತೆ ಅಭಿವೃದ್ಧಿಗೊಳಿಸುವಂತೆ ಒತ್ತಾಯಿಸಿ ಕರುನಾಡ ಸೇನಾನಿಗಳ ವೇದಿಕೆ ಕಾರ್ಯಕರ್ತರು ಅರಣ್ಯಾಧಿಕಾರಿ ನಂದಿನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಲೂಕಿನ ಕೊಪ್ಪ ಗ್ರಾಮದಲ್ಲಿರುವ ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಕಚೇರಿಗೆ ತೆರಳಿದ ಸಂಘಟನೆ ಪದಾಧಿಕಾರಿಗಳು ಸಂಬಂಧಿಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮದ್ದೂರುಕೊಪ್ಪ ಮುಖ್ಯರಸ್ತೆಯಲ್ಲಿ ಒಣಗಿರುವ ಮರ ತೆರವುಗೊಳಿಸುವ ಜತೆಗೆ ವಾಹನ ಸಂಚಾರಕ್ಕೆ ತೊಡಕುಂಟುಮಾಡುತ್ತಿರುವ ಮರದ ರೆಂಬೆಗಳನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಆಗ್ರಹಿಸಿದರು. ಕಳೆದ ಹಲವು ದಿನಗಳಿಂದಲೂ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಸವಾರರು ಸಂಚರಿಸಲು ಹರಸಾಹಸ

ಪಡಬೇಕಾದ ಸ್ಥಿತಿ ಬಂದೊದಗಿದೆ. ಕೊಪ್ಪದಿಂದ ಚಾಪುರದೊಡ್ಡಿ ಗ್ರಾಮದವರೆಗೂ ಗುಂಡಿಗಳು ಹಾಗೂ ರಸ್ತೆ ಕಿತ್ತು ನಿಂತಿದ್ದರೂಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸದೆ ಮೌನಕ್ಕೆ ಶರಣಾಗಿರುವುದಾಗಿ ಆರೋಪಿಸಿದರು.

ಕೊಪ್ಪ ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುವ ಹಾಗೂ ಇನ್ನಿತರೆ ವಾಹನಗಳು ಪ್ರತಿನಿತ್ಯ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಯದ ವಾತಾವರಣದಲ್ಲೇ ಶಾಲೆಗೆ ತೆರಳ ಬೇಕಾದ ಅನಿವಾರ್ಯತೆ ಎದುರಾಗಿದ್ದು ರಾತ್ರಿ ವೇಳೆ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಹಲವಾರು ಅಪಘಾತಗಳಿಂದ ಮೃತಪಟ್ಟಿರುವ ಉದಾಹರಣೆಗಳು ಸಾಕಷ್ಟಿವೆ.

ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಅಗಲೀಕರಣ ಕೈಗೊಂಡಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ತಾತ್ಕಾಲಿಕವಾಗಿ ಕಾಮಗಾರಿ ಕೈಗೊಂಡು ವಾಹನ ಸವಾರರಿಗೆ ಹಾಗೂ ಸ್ಥಳೀಯ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಬೇಕಾಗಿದೆ. 15 ದಿನದೊಳಗಾಗಿ ರಸ್ತೆ ಕಾಮಗಾರಿಗೆ ಮುಂದಾಗದಿದ್ದಲ್ಲಿ ಇಲಾಖೆ ಎದುರು ನಿರಂತರ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದಿದ್ದಾರೆ.

ಈ ವೇಳೆ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಬಿವುಲ್ಲಾ, ತಾಲೂಕು ಅಧ್ಯಕ್ಷ ಆದರ್ಶಗೌಡ, ಉಪಾಧ್ಯಕ್ಷ ಮೆಹಬೂಬು, ಎನ್‌.ಟಿ. ಪುಟ್ಟಸ್ವಾಮಿ ಇತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ