ಆಧ್ಯಾತ್ಮದಿಂದ ಬದುಕು ಸುಂದರ: ಸುತ್ತೂರು ಶ್ರೀ

ಬೆಳವಣಿಗೆಯಲ್ಲಿ ಆದಿಚುಂಚನಗಿರಿ ಮಠ ಮಾದರಿ: ಡಾ.ವೀರೇಂದ್ರ ಹೆಗ್ಗಡೆ | ಧರ್ಮಸಭೆ ಉದ್ಘಾಟನೆ

Team Udayavani, Mar 5, 2020, 4:47 PM IST

5-March-22

ಮಂಡ್ಯ: ಲೌಖೀಕವಾದ ಯಾವ ವಿಷಯಗಳೂ ಮನುಷ್ಯನಿಗೆ ಶಾಶ್ವತ ಸುಖವನ್ನು ನೀಡುವುದಿಲ್ಲ. ಆಧ್ಯಾತ್ಮದ ವಿಷಯಗಳು ಮಾತ್ರ ಮನುಷ್ಯನ ಬದುಕನ್ನು ಸುಂದರಗೊಳಿಸಲು ಸಾಧ್ಯ ಎಂದು ಎಂದು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಾಲಯದ ದ್ವಾದಶಾಬ್ದ ಮಹಾಕುಂಭಾಭಿಷೇಕ ಮಹೋತ್ಸವದ ಮೂರನೇ ದಿನದ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯ ಭಗವಂತನಿಗೆ ಅಭಿಮುಖವಾಗಿ ನಡೆದರೆ ಆತನ ಎಲ್ಲಾ ಇಷ್ಟಾರ್ಥಗಳೂ ಈಡೇರುತ್ತವೆ. ಇಂದು ಕಾಲ ಕೆಟ್ಟಿದೆ ಎನ್ನುತ್ತಾರೆ. ಆದರೆ ಕಾಲ ಕೆಟ್ಟಿಲ್ಲ, ಕಾಲ ಕೆಟ್ಟಿದೆ ಎನ್ನುವವರು ಕೆಟ್ಟಿರುತ್ತಾರೆ. ಅವರು ತಾನು ಕೆಟ್ಟಿದ್ದೇನೆ ಎಂದು ಹೇಳಿಕೊಳ್ಳಲಾಗದೆ ಕಾಲ ಕೆಟ್ಟಿದೆ ಎನ್ನುತ್ತಾರೆ. ಆದ್ದರಿಂದ ಮನುಷ್ಯ ಒಳ್ಳೆಯವನಾದರೆ ಕಾಲವೂ ಒಳ್ಳೆಯದಾಗುತ್ತದೆ. ಮಾತೃ ವಾತ್ಸಲ್ಯದ ಮುದ್ರೆಯನ್ನು ಜನಸಾಮಾನ್ಯರಲ್ಲಿ ಒತ್ತಿರುವ ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಇಡೀ ಮಾನವ ಜನಾಂಗದ ಒಳಿತಿಗಾಗಿ ಶ್ರಮಿಸಿ ಹೋಗಿದ್ದಾರೆಂದು ತಿಳಿಸಿದರು.

ಕ್ಷೇತ್ರದ ಉದ್ಧಾರಕ್ಕೆ ಅವತರಿಸಿದ ಮಹಾಪುರುಷ: ಬೀದರ್‌ನ ಚಿದಂಬರಾಶ್ರಮದ ಶಿವಕುಮಾರಸ್ವಾಮೀಜಿ ಮಾತನಾಡಿ, ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಆದಿಚುಂಚನಗಿರಿ ಕ್ಷೇತ್ರವನ್ನು ಶೂನ್ಯದಿಂದ ಆಕಾಶ ೆತ್ತರಕ್ಕೆ ಬೆಳೆಸಿದ್ದಾರೆ. ಅವರು ಕ್ಷೇತ್ರದ ಉದ್ಧಾರಕ್ಕೆ ಅವತರಿಸಿದ ಮಹಾಪುರುಷ ಎಂದು ಬಣ್ಣಿಸಿದ ಶ್ರೀಗಳು, ಗುರು ಆದವನು ಸಾಮಾನ್ಯರ ಬದುಕಿಗೆ ದಾರಿದೀಪವಾಗಿ ಬೆಳಗಬೇಕು. ಆ ಬೆಳಕಿನಲ್ಲಿ ಮನುಷ್ಯ ಮಾನವತೆಯ ಮಾರ್ಗದಲ್ಲಿ ನಡೆಯಬೇಕು. ಮನೆ ಕಟ್ಟಬಹುದು, ಕಸ ಗುಡಿಸುವವರು ಸಿಗುವುದಿಲ್ಲ, ವಾಹನ ತೆಗೆದು ಕೊಳ್ಳಬಹುದು, ಒಳ್ಳೆಯ ಚಾಲಕ ಸಿಗುವುದಿಲ್ಲ. ಮಠವನ್ನು ಕಟ್ಟಬಹುದು. ಆದರೆ, ಒಳ್ಳೆಯ ಸ್ವಾಮೀಜಿ ಸಿಗುವುದಿಲ್ಲ. ಆದರೆ, ಬಾಲಗಂಗಾಧರನಾಥರು ಬೆಳೆಸಿರುವುದು ಅತ್ಯಂತ ವಿಶೇಷವಾದದ್ದು. ಇಂದಿನ ದಿನಮಾನದಲ್ಲಿ ಮನುಷ್ಯನಿಗೆ ಜ್ಞಾನವನ್ನು ಕರುಣಿಸುವುದಕ್ಕಾಗಿ ಗುರು ಬೇಕೇಬೇಕು. ಗುರುವಿನ ಕೃಪೆ ಆದರೆ ಮಾತ್ರ ಮನುಷ್ಯನಿಗೆ ಒಳಿತುಂಟಾಗಲು ಸಾಧ್ಯ ಎಂದು ಹೇಳಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.