ಮನ್‌ಮುಲ್‌ ಹಗರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ

Team Udayavani, Jun 8, 2021, 12:27 PM IST

Untitled-1

ಮಂಡ್ಯ: ಮನ್‌ಮುಲ್‌ ಹಾಲು-ನೀರು ಹಗರಣವನ್ನು ನಿಷ್ಪಕ್ಷಪಾತವಾಗಿ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರೆ ಮಾನನಷ್ಟ ಮೊಕದ್ದಮೆ ಹಾಕುವ ಬೆದರಿಕೆಗೆ ಹಾಕುತ್ತಿರುವುದು ಸರಿಯಲ್ಲ.ಇದಕ್ಕೆ ಎಂದಿಗೂ ಹೆದರುವುದಿಲ್ಲ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್‌ ಹೇಳಿದರು.

ಪ್ರಕರಣದ ಆರೋಪಿಗಳ ವಿರುದ್ಧ ನೀಡಿರುವಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದಿದ್ದಾರೆ. ಆದರೆ ನಡೆದಿರುವ ಅನ್ಯಾಯ, ಅಕ್ರಮಕ್ಕೆ ಎಂದಿಗೂ ಸಹಕಾರ ನೀಡುವುದಿಲ್ಲ. ತಪ್ಪು ಯಾರೇ ಮಾಡಿದ್ದರೂ ತನಿಖೆಯಿಂದ ಬಹಿರಂಗವಾಗಿ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಹಾಲು ಉತ್ಪಾದಕರ ಹಿತ ಕಾಯಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಅಮಾನತು, ವರ್ಗಾವಣೆ ಮಾಡಿದರೆ ಏನು ಪ್ರಯ ಜನವಿಲ್ಲ. ಅವರನ್ನು ಬಂಧಿಸಿ ತನಿಖೆ ನಡೆಸಬೇಕು. ಟ್ಯಾಂಕರ್‌ಗಳ ಟೆಂಡರ್‌ ಪ್ರಕ್ರಿಯೆ ಯಾವಾಗ ಆಗಿದೆ, ವಾಹನ ಸಂಖ್ಯೆ ಬಗ್ಗೆ ತನಿಖೆ ನಡೆಸಬೇಕು. ಈ ಬಗ್ಗೆ ಆಯಾಯ ತಹಶೀಲ್ದಾರ್‌ ಅವರಿಗೆ ದೂರು ನೀಡಲಾಗುವುದು ಎಂದು ಹೇಳಿದರು.

ಟೆಂಡರ್‌ ಆಗಿರುವ ಟ್ಯಾಂಕರ್‌ ವಾಹನ ಸಂಖ್ಯೆಯೇ ಬೇರೆ. ಮಾರ್ಗಗಳಲ್ಲಿ ಓಡಾಡುತ್ತಿರುವ ವಾಹನಗಳೇ ಬೇರೆಯಾಗಿದೆ. ಬಮುಲ್‌ನಲ್ಲಿ ಬ್ಲಾಕ್‌ಲಿಸ್ಟ್‌ಗೆ ಹಾಕಿರುವ ಗುತ್ತಿಗೆದಾರರಿಗೆ ಟೆಂಡರ್‌ ನೀಡಿದ್ದಾರೆ. ಇದಕ್ಕೆ ಆಡಳಿತ ಮಂಡಳಿ ಸದಸ್ಯರು ಉತ್ತರಿಸಬೇಕು. ಟೆಂಡರ್‌ ನೀಡಿರುವ ಟ್ಯಾಂಕರ್‌ಗಳಲ್ಲಿ 40ಕ್ಕೂ ಹೆಚ್ಚು ಟ್ಯಾಂಕರ್‌ ಬದಲಾಗಿದೆ. ಮನ್‌ಮುಲ್‌ನಲ್ಲಿನ ಸಿಸಿಟಿವಿಯನ್ನು ಪೊಲೀಸರು ವಶಕ್ಕೆ ಪಡೆದು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರತಿಕ್ರಿಯಿಸಿಲ್ಲ: ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಎಸ್‌ಪಿ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆಯಲಾಗುವುದು. ನಂತರ ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್‌, ಶಾಸಕಾಂಗ ಪಕ್ಷದ ನಾಯಕಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಉನ್ನತ ತನಿಖೆ ನಡೆಸುವಂತೆ ಒತ್ತಾಯಿಸಲಾಗುವುದು. ಕೋಟ್ಯಂತರ ರೂಪಾಯಿ ಹಗರಣ ಆಗಿದ್ದರೂ ಕೆಎಂಎಫ್‌ ಅಧ್ಯಕ್ಷ ಸೇರಿದಂತೆ ಯಾರೂಪ್ರತಿಕ್ರಿಯಿಸಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್‌ ಕಿಸಾನ್‌ ಘಟಕದ ಅಧ್ಯಕ್ಷ ಮೋಹನ್‌ ಕುಮಾರ್‌, ಯುವ ಘಟಕದ ಅಧ್ಯಕ್ಷ ವಿಜಯಕುಮಾರ್‌, ಮುಖಂಡರಾದ ಸಿದ್ದರಾಮೇಗೌಡ, ಸಿ.ಆರ್‌.ರಮೇಶ್‌, ಸುರೇಶ್‌ ಕಂಠಿ, ಸಿ.ಎಂ.ದ್ಯಾವಪ್ಪ, ರುದ್ರಪ್ಪ ಇದ್ದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.