ಎಲ್ಲಾ ಶಾಲೆಯಂತಲ್ಲ ಮತ್ತಿಘಟ್ಟದ ಸರ್ಕಾರಿ ಶಾಲೆ

ಮಕ್ಕಳಿಗೆ ಪರಿಸರ ಸಂರಕ್ಷಣೆ, ನೀರಿನ ಅರಿವು • ಶಾಲಾ ಆವರಣದಲ್ಲಿವೆ ಹಲವು ರೀತಿ ಮರಗಿಡಗಳು

Team Udayavani, Aug 19, 2019, 4:18 PM IST

mandya-tdy-1

ಕೆ.ಆರ್‌.ಪೇಟೆ ತಾಲೂಕಿನ ಮತ್ತಿಘಟ್ಟ ಸರ್ಕಾರಿ ಶಾಲಾ ಆವರಣದಲ್ಲಿ ಮಕ್ಕಳು ಸ್ವಚ್ಛತೆ ಕಾರ್ಯಮಾಡುತ್ತಿರುವುದು.

ಕೆ.ಆರ್‌.ಪೇಟೆ: ಮನೆ ಚಿಕ್ಕದಾಗಿದ್ದರೂ ಮನಸ್ಸು ದೊಡ್ಡದಾಗಿರಬೇಕು ಎಂಬ ಮಾತಿನಂತೆ ಶಾಲೆ, ಶಾಲೆಯ ಆವರಣ ಚಿಕ್ಕದಾಗಿದ್ದರೂ ಸಹ ಮಕ್ಕಳಿಗೆ ಮಾತ್ರ ಆಧುನಿಕ ಶಿಕ್ಷಣ ನೀಡುವ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಅರಿವಿನ ಮೂಲಕ ಮತ್ತಿಘಟ್ಟದ ಸರ್ಕಾರಿ ಶಾಲೆ ಎಲ್ಲರಿಗೂ ಮಾದರಿಯಾಗಿದೆ.

ಮತ್ತಿಘಟ್ಟ ಶಾಲೆಗೆ ಎ.ಬಿ.ಮಹೇಶ್‌ ಮುಖ್ಯ ಶಿಕ್ಷಕರಾಗಿ ನೇಮಕವಾದ ದಿನವೇ ಇಲ್ಲಿನ ಮುಖ್ಯ ಶಿಕ್ಷಕರು ಎರಡು ಟೀಕ್‌ ಮರ ಸಸಿ ನೆಡುವ ಮೂಲಕ ಶಾಲೆಯನ್ನು ಹಸಿರೀಕರಣ ಮಾಡುವುದಕ್ಕೆ ಚಾಲನೆ ನೀಡಿದರು. ನಂತರ ಹತ್ತಾರು ವಿವಿಧ ಬಗೆಯ ಸಸಿ ನೆಡುವುದರ ಜೊತೆಗೆ ಮಕ್ಕಳಿಗೂ ಪರಿಸರ ಸಂರಕ್ಷಣೆ ಹೇಳಿಕೊಡುತ್ತಿದ್ದಾರೆ.

ವಾರಕ್ಕೆ ಒಂದುದಿನ ಹೆಚ್ಚುವರಿಯಾಗಿ ಬೆಳೆಯುವ ಸಸಿಗಳನ್ನು ಸಮವಾಗಿ ಕತ್ತರಿಸಿ ಸಸಿಗಳ ಬುಡ ಸ್ವಚ್ಛಮಾಡಿ ನೆಲಕ್ಕೆ ಉದುರುವ ಎಲೆಗಳನ್ನು ಬುಡಕ್ಕೆ ಹಾಕುವ ಮೂಲಕ ಅವುಗಳಿಂದಲೇ ಸಾವಯವ ಗೊಬ್ಬರ ತಯಾರು ಮಾಡುತ್ತಿದ್ದಾರೆ. ಅಲ್ಲದೇ, ಮಕ್ಕಳಿಗೂ ಸಸಿ ಬೆಳೆಸುವುದು ಮತ್ತು ಸಾವಯವ ಗೊಬ್ಬರ ತಯಾರು ಮಾಡುವ ಬಗ್ಗೆ ಶಾಲೆಯಲ್ಲಿ ಕಲಿಸಲಾಗುತ್ತಿದೆ.

ನಲಿಕಲಿ ಜೊತೆಗೆ ಆಧುನಿಕ ಶಿಕ್ಷಣ: ಸರ್ಕಾರಿ ಶಾಲೆ ಎಂದರೆ ಗುಣಮಟ್ಟದ ಶಿಕ್ಷಣ ಸಿಗುವುದಿಲ್ಲ ಎಂದು ಕೆಲವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲು ಮಾಡಿಸುವುದನ್ನು ಕಾಣುತ್ತಿದ್ದೇವೆ. ಆದರೆ, ಈ ಶಾಲೆಯಲ್ಲಿ ಮಕ್ಕಳಿಗೆ ಸರಳವಾಗಿ ನಲಿಕಲಿ ಪದ್ಧತಿಯಲ್ಲಿ ಪಾಠ ಕಲಿಸುವ ಜೊತೆಗೆ ಮುಖ್ಯ ಶಿಕ್ಷಕರ ಮನವಿ ಮೇರೆಗೆ ಇನ್ಫೋಸಿಸ್‌ ಅವರು ಕೊಡುಗೆಯಾಗಿ ನೀಡಿರುವ ಕಂಪ್ಯೂಟರ್‌ಗಳನ್ನು ಬಳಸಿಕೊಂಡು ಮಕ್ಕಳಿಗೆ ಆಧುನಿಕವಾಗಿ ಪಾಠವನ್ನು ಹೇಳಿಕೊಡುತ್ತಿದ್ದಾರೆ.

ನೀರು ಮರುಬಳಕೆ ಮತ್ತು ಸ್ವಚ್ಛತೆಗೆ ಆದ್ಯತೆ: ಶಾಲೆ ಹೊರಭಾಗದ ಆವರಣದ ತುಂಬೆಲ್ಲಾ ಮರಗಿಡಗಳು ಬೆಳೆದಿವೆ. ಎಲೆಗಳು ಉದುರು ವುದು ಸಾಮಾನ್ಯವಾಗಿದ್ದರೂ ಪ್ರತಿದಿನ ಶಾಲೆ ಆವರಣವನ್ನು ಸ್ವಚ್ಛಗೊಳಿಸುವುದರಿಂದ ಸುಂದರ ಮತ್ತು ಸ್ವಚ್ಛ ಪರಿಸರ ನಿರ್ಮಾಣ ವಾಗಿದೆ. ಇದರ ಜೊತೆಗೆ ಶಾಲಾ ಕೊಠಡಿ ಒಳಭಾಗದಲ್ಲಿಯೂ ಸ್ವಚ್ಛತೆ ಕಾಪಾಡಿಕೊಂಡಿ ದ್ದು ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಿದ್ದಾರೆ. ಜೊತೆಗೆ ಮಕ್ಕಳು ಮಧ್ಯಾಹ್ನ ಬಿಸಿಯೂಟ ಮಾಡಿದ ನಂತರ ಕೈ ಮತ್ತು ತಟ್ಟೆಗಳನ್ನು ತೊಳೆದ ನೀರು ನೇರವಾಗಿ ಮರಗಳು ಮತ್ತು ಹೂವಿನ ಸಸಿಗಳ ಬೇರು ಸೇರುವಂತೆ ಮಾಡಲಾಗಿದೆ.

ಅವಧಿಗೂ ಮುನ್ನ ಶಾಲೆಗೆ ಹಾಜರು: ಮತ್ತಿಘಟ್ಟ ಗ್ರಾಮಸ್ಥರು ಹೇಳುವ ಪ್ರಕಾರ ಈ ಶಾಲೆಯ ಮುಖ್ಯ ಶಿಕ್ಷಕರು ಶಾಲಾ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಶಾಲೆಗೆ ಪ್ರತಿದಿನ ಬಂದು ಸಸಿಗಳಿಗೆ ನೀರು ಹಾಕುವ ಕೆಲಸ ಮಾಡುತ್ತಾರೆ. ಮತ್ತೂರ್ವ ಶಿಕ್ಷಕಿ ಎಚ್.ಎನ್‌.ಸುರೇಖಾ ಕೂಡಾ ಸಮಯಕ್ಕೆ ಸರಿಯಾಗಿ ಶಾಲೆಗೆ ಆಗಮಿಸಿ ಕೆಲಸಗಳಲ್ಲಿ ತೊಡಗಿಕೊಳ್ಳುವುದು ಶಾಲೆಗೆ ಮತ್ತೂಂದು ವಿಶೇಷವಾಗಿದೆ.

•ಎಚ್.ಬಿ.ಮಂಜುನಾಥ

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.