ನಿಯಮ ಉಲ್ಲಂಘನೆ: ಶಾಸಕ ಅನ್ನದಾನಿಗೆ ದಂಡ
Team Udayavani, Sep 29, 2018, 6:25 AM IST
ಮಳವಳ್ಳಿ: ಕಾರ್ಮಿಕ ಕಾಯ್ದೆ ನಿಯಮ ಉಲ್ಲಂಘಿಸಿ ಬಾರ್ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದ ಆರೋಪದ ಮೇಲೆ ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಚಾರಣಾ ವಿಶೇಷ ನ್ಯಾಯಾಲಯ 2900ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ 15 ದಿನ ಜೈಲು ಶಿಕ್ಷೆ ಅನುಭವಿಸುವಂತೆ ಅದೇಶಿಸಿದೆ.
ತಾಲೂಕಿನ ಶಿವನ ಸಮುದ್ರದಲ್ಲಿ ಗಗನಚುಕ್ಕಿ ಬಾರ್ ಮತ್ತು ರೆಸ್ಟೋರೆಂಟ್ ಮೇಲೆ 25ನೇ ಮಾರ್ಚ್ 2014ರಂದು ಸಂಜೆ 5 ಗಂಟೆಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯ ವೇಳೆ ನಿಯಮ ಉಲ್ಲಂಘನೆ ಕಂಡು ಬಂದಿತ್ತು. ಬಾರ್ ನೋಂದಣಿ ಮತ್ತು ಪ್ರಮಾಣ ಪತ್ರವನ್ನು ಫಲಕದಲ್ಲಿ ಪ್ರದರ್ಶನ ಮಾಡಿರಲಿಲ್ಲ.ನೋಂದಣಿ ದಾಖಲಾತಿ ನಿರ್ವಹಣೆ ಮಾಡಿಲ್ಲ, ಬಾರ್ ಕಾರ್ಮಿಕರಿಗೆ ವಾರದ ರಜೆ ನೀಡಿಲ್ಲ, ಕಾರ್ಮಿಕರ ಹಾಜರಾತಿ ನಿರ್ವಹಣೆ ಮಾಡಿಲ್ಲ ಎಂದು ಆರೋಪಿಸಿ ಡಾ.ಅನ್ನದಾನಿ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ನಂತರ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗವಣೆ ಮಾಡಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣಕಾಸಿನ ವಿಚಾರ : ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ
ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ
ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ
ಶಿವಮೊಗ್ಗ: ಸಿಎಂ ಗೆ ಘೇರಾವ್ ಹಾಕಲು ಕಾಂಗ್ರೆಸ್ ಪ್ಲಾನ್ : 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಯೋಗೀಶ್ವರ್ ಮರ್ಕಟ ಮನಸ್ಥಿತಿಯ ‘ರಾಜಕೀಯ ಜೋಕರ್’: ಎಸ್.ಎಲ್. ಭೋಜೇಗೌಡ ಟೀಕೆ