ಬಡ ಕುಟುಂಬಕ್ಕೆ ಮನೆ ಕಟ್ಟಿಸಿ ಕೊಟ್ಟ ಶಾಸಕ..!

Team Udayavani, Feb 3, 2020, 4:56 PM IST

mandya-tdy-2

ಮಂಡ್ಯದ ಹೊಸಹಳ್ಳಿ ಗುರುಮಠದ ಬಳಿ ಬಡ ಕುಟುಂಬಕ್ಕೆ ಉಚಿತವಾಗಿ ಕಟ್ಟಿಸಿಕೊಟ್ಟಿರುವ ಮನೆಯ ಗೃಹಪ್ರವೇಶವನ್ನು ಶಾಸಕ ಎಂ. ಶ್ರೀನಿವಾಸ್ ನೆರವೇರಿಸಿದರು.

ಮಂಡ್ಯ: ಬಡ ಕುಟುಂಬವೊಂದಕ್ಕೆ ಉಚಿತವಾಗಿ ಮನೆ ಕಟ್ಟಿಸಿಕೊಟ್ಟಿರುವ ಶಾಸಕ ಎಂ.ಶ್ರೀನಿವಾಸ್‌ ಅವರ ಮಾದರಿ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ನಗರದ ಹೊಸಹಳ್ಳಿ ಗುರುಮಠದ ಬಳಿ ಮನೆ ಕಳೆದುಕೊಂಡು ನಿರ್ಗತಿಕರಾಗಿದ್ದ ತುಳಸಿ-ರೇಣುಕಾ ಕುಟುಂಬಕ್ಕೆ ಸುಮಾರು 6 ಚದರದ ಮನೆ ನಿರ್ಮಿಸಿಕೊಟ್ಟಿದ್ದು, ಭಾನುವಾರ ಮನೆಯ ಗೃಹ ಪ್ರವೇಶ ನೆರವೇರಿಸಿದರು. ಮನೆಯ ಕುಟುಂಬ ಸದಸ್ಯರೆಲ್ಲರೂ ಶ್ರೀನಿವಾಸ್‌ರನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

ಮಳೆಯಿಂದ ಕುಸಿದಿದ್ದ ಗುಡಿಸಲು: ಕಳೆ ದೊಂದು ವರ್ಷದ ಹಿಂದೆ ಹೊಸಹಳ್ಳಿಯ ಗುರುಮಠದ ಬಳಿ ಇದ್ದ ತುಳಸಿ-ರೇಣುಕಾ ಅವರಿಗೆ ಸೇರಿದ ಹಳೆಯ ಗುಡಿಸಲೊಂದು ಮಳೆಯಿಂದ ಕುಸಿತಗೊಂಡಿತ್ತು. ಆ ಮನೆಯಲ್ಲಿ ಒಟ್ಟು 9 ಜನರಿದ್ದು ಅವರೆಲ್ಲರೂ ನಿರ್ಗತಿಕರಾಗಿದ್ದರು. ಕುಟುಂಬದವರು ಎಂ.ಶ್ರೀನಿವಾಸ್‌ರನ್ನು ಭೇಟಿ ಯಾಗಿ ವೇದನೆಯನ್ನು ನಿವೇದಿಸಿಕೊಂಡರು.

ಮನೆ ಕಟ್ಟಿಸಿ ಕೊಡುವ ಭರವಸೆ ನೀಡಿದ್ದ ಶಾಸಕ: ಸಂತ್ರಸ್ತರ ಮನವಿಗೆ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿದ ಎಂ.ಶ್ರೀನಿವಾಸ್‌ ಅವರು ಕುಟುಂಬ ಸದಸ್ಯರ ಸ್ಥಿತಿಯನ್ನು ಕಂಡು ಮರುಕ ವ್ಯಕ್ತಪಡಿಸಿದರು. ಈ ಗುಡಿಸಲಿರುವ ಆಸುಪಾಸಿನಲ್ಲಿ ಸುಂದರವಾದ ಮನೆಗಳು ತಲೆಎತ್ತಿದ್ದು, ಇದೊಂದು ಮಾತ್ರ ಗುಡಿಸಲಿತ್ತು. ಅದಕ್ಕಾಗಿ ಇಲ್ಲೊಂದು ಮನೆಯನ್ನು ಕಟ್ಟಿಸಿಕೊಡುವ ಸಂಕಲ್ಪ ಮಾಡಿ ಕುಟುಂಬದವರಿಗೆ ವಾಗ್ಧಾನ ನೀಡಿದರು.

6 ಚದರದ ಮನೆ: ಒಂದು ವರ್ಷದೊಳಗೆ 30/25 ಅಳತೆಯ ನಿವೇಶನದಲ್ಲಿ ಎರಡು ಬೆಡ್‌ ರೂಂ, ಒಂದು ಅಡುಗೆ ಮನೆ, ಒಂದು ಹಾಲ್, ಸ್ನಾನದ ಮನೆಯನ್ನೊಳಗೊಂಡ 6 ಚದರದ ಮನೆಯನ್ನು ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ಕಟ್ಟಿಸಿಕೊಟ್ಟಿದ್ದಾರೆ. ಇದರಿಂದ ಗುಡಿಸಲು ಕಳೆದುಕೊಂಡು ನಿರ್ಗತಿಕರಾಗಿದ್ದ ಕುಟುಂಬದ 9 ಮಂದಿಗೆ ಸೂರು ದೊರಕಿದಂತಾಗಿದೆ.

ಮನೆಗೆ ಶ್ರೀನಿವಾಸ ಕೃಪೆ ಎಂದು ನಾಮಕರಣ: ಶಾಸಕ ಎಂ.ಶ್ರೀನಿವಾಸ್‌ರವರ ಕೊಡುಗೆಗೆ ಪ್ರತಿಯಾಗಿ ತುಳಸಿ-ರೇಣುಕಾ ಕುಟುಂಬದವರು ಮನೆಗೆ ಶ್ರೀನಿವಾಸ ಕೃಪೆ ಎಂದು ನಾಮಕರಣ ಮಾಡಿದ್ದಾರೆ. ಶಾಸಕರ ಮಾನವೀಯ ಹೃದಯವನ್ನು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.