ಮoಡ್ಯ: ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ
Team Udayavani, Nov 29, 2020, 7:35 PM IST
ಮoಡ್ಯ: ಮಳವಳ್ಳಿ ಪಟ್ಟಣದ ರಾವಣಿ ರಸ್ತೆ ಬಳಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪಟ್ಟಣದ ಪುರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ.
ಹೊಸಕೋಟೆ ತಾಲ್ಲೂಕಿನ ನಂದಗುಡಿ ಗ್ರಾಮದ ಇರ್ಫಾನ್(28), ಸೈಯದ್ ಶಬೀರ್(26), ಪೈರೋಜ್(27), ಶಾಮೀರ್ ಅಹಮದ್(27) ಬಂಧಿತ ಆರೋಪಿಗಳು.
ಪಟ್ಟಣದ ಪ್ರವಾಸಿ ಮಂದಿರದ ಬಳಿ ಪುರ ಠಾಣೆಯ ಪಿಐ ಎ.ಕೆ. ರಾಜೇಶ್ ಹಾಗೂ ಸಿಬ್ಬಂದಿಗಳಾದ ಮಾದೇಶ, ಶಿವಕುಮಾರ್ ಗಸ್ತು ತಿರುಗುವ ವೇಳೆ ರಾವಣಿ ರಸ್ತೆಯ ಕ್ರಾಸ್ ಬಳಿ ಕಾರು ನಿಲ್ಲಿಸಿಕೊಂಡು ಮಾರಕಾಸ್ತ್ರಗಳೊಂದಿಗೆ ನಿಂತಿದ್ದ ಆರೋಪಿಗಳು ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿಗಳ ಬೆನ್ನಟ್ಟಿ ಬಂಧಿಸಿದ್ದಾರೆ. ನಂತರ ವಿಚಾರಿಸಿದಾಗ ದರೋಡೆ ಮಾಡುವ ಸಂಚು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಭಾರತೀಯ ಯುವಕನಿಂದ ಲವ್ ಪ್ರಪೋಸ್; ಒಪ್ಪಿಗೆ ನೀಡಿದಳಾ ಆಸೀಸ್ ಯುವತಿ ? ವಿಡಿಯೋ ವೈರಲ್
ಬoಧಿತರಿoದ ಒಂದು ಕಾರು, ಒಂದು ಲಾಂಗ್, ಚಾಕು, ಖಾರದಪುಡಿ, 4 ಮಂಕಿ ಕ್ಯಾಪ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಹೋಗಿದೆ;ದೇಶದ್ರೋಹಿಗಳನ್ನು ಮಟ್ಟ ಹಾಕುವುದು ಖಂಡಿತಾ: CT ರವಿ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ