ಮೈಷುಗರ್‌ ಕಬ್ಬು ಗದ್ದೆಯಲ್ಲೇ ಅನಾಥ

Team Udayavani, Aug 25, 2019, 12:47 PM IST

ಮಂಡ್ಯ: ಮೈಸೂರು ಸಕ್ಕರೆ ಕಂಪನಿ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆ ಕಬ್ಬು ಗದ್ದೆಯಲ್ಲೇ ಅನಾಥವಾಗಿ ಉಳಿದಿದ್ದು, ಬೆಳೆದು ನಿಂತಿರುವ ಕಬ್ಬನ್ನು ಆದಷ್ಟು ಬೇಗ ಬೇರೆ ಕಾರ್ಖಾನೆಗಳಿಗೆ ಸಾಗಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡುವಂತೆ ರೈತ ಮುಖಂಡರು ಹಾಗೂ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಒತ್ತಾಯಿಸಲಾಯಿತು.

ಶನಿವಾರ ನಗರದ ಪ್ರವಾಸಿಮಂದಿರದಲ್ಲಿ ನಡೆದ ರೈತಮುಖಂಡರು, ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರ ಸಭೆಯಲ್ಲಿ ಮೈಷುಗರ್‌ ಮತ್ತು ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಬೆಳೆದು ನಿಂತ ಕಬ್ಬನ್ನು ತಕ್ಷಣವೇ ನೆರೆ ಜಿಲ್ಲೆ ಅಥವಾ ನೆರೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಬೇಕು. ಎರಡೂ ಕಾರ್ಖಾನೆಗಳನ್ನು ಸಮಗ್ರವಾಗಿ ಪುನಶ್ಚೇತನಗೊಳಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಮೈಷುಗರ್‌ಗೆ ಕಳೆದ ಬಜೆಟ್‌ನಲ್ಲಿ 100 ಕೋಟಿ ಅನುದಾನ ನೀಡಿದ್ದು, ಸದ್ಯ 17 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ಉಳಿದ 83 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲು ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.

ಕಾವೇರಿ ಹೋರಾಟಕ್ಕೇ ಸೀಮಿತ ಬೇಡ: ರೈತ ಹಿತರಕ್ಷಣಾ ಸಮಿತಿ ಕೇವಲ ಕಾವೇರಿ ನೀರಿಗಾಗಿ ಮಾತ್ರ ಹೋರಾಟ ಮಾಡುವ ವೇದಿಕೆಯಾಗಿ ರೂಪುಗೊಂಡಿದೆ. ಇದು ಸರಿಯಲ್ಲ, ರೈತರ ಪ್ರತಿಯೊಂದು ಸಮಸ್ಯೆ, ವಿಚಾರದಲ್ಲೂ ರೈತ ಹಿತರಕ್ಷಣಾ ಸಮಿತಿ ನಿರ್ಧಾರ ಕೈಗೊಳ್ಳಬೇಕು. ಮಾಜಿ ಸಂಸದ ಜಿ. ಮಾದೇಗೌಡರ ಅಧ್ಯಕ್ಷತೆಯಲ್ಲಿರುವ ಸಮಿತಿಯನ್ನು ಅವರ ಅಧ್ಯಕ್ಷತೆಯಲ್ಲೇ ಪುನಾರಚನೆ ಮಾಡಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.

ಪ್ರತಿ ತಿಂಗಳ ಎರಡನೇ ಶನಿವಾರ ಸಭೆ: ರೈತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತೀ ತಿಂಗಳ ಎರಡನೇ ಶನಿವಾರ ಸರ್ವಪಕ್ಷಗಳ ಮುಖಂಡರ ಸಭೆ ನಡೆಸಿ, ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕಾಲ ಕಾಲಕ್ಕೆ ಚರ್ಚೆ, ಅಧ್ಯಯನ ನಡೆಸಬೇಕು. ಆ ಮೂಲಕ ರೈತರ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗಸೂಚಿ ಕಂಡುಕೊಳ್ಳಬೇಕು. ಪಕ್ಷಾತೀತವಾಗಿ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂಬ ನಿರ್ಧಾರವನ್ನು ಕೈಗೊಳ್ಳಲಾಯಿತು.

ರೈತ ನಾಯಕಿ ಸುನಂದಾ ಜಯರಾಂ ಮಾತನಾಡಿ, ಮೈಷುರ್‌ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡಲು ಇರುವಂತಹ ಅನುಕೂಲ ಮತ್ತು ಅನಾಕೂಲಗಳ ಕುರಿತಂತೆ ಚರ್ಚೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದರು.

ಈ ಹಿಂದೆ ಮುಖ್ಯಮಂತ್ರಿಗಳೊಟ್ಟಿಗೆ ನಡೆದ ಸಭೆಯಲ್ಲಿ ಮೈಷುಗರ್‌ ತಕ್ಷಣ 69 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದೆವು. ಆದರೆ, ಸರ್ಕಾರ ಬಿಡುಗಡೆ ಮಾಡಲಿಲ್ಲ. ಜೊತೆಗೆ ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ತಿಳಿಸಿದರು.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣ ಮಾತನಾಡಿ, ಮೈಷುಗರ್‌ ಹಾಗೂ ಪಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಜೊತೆಗೆ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವುದು ಅಗತ್ಯ ಎಂದರು.

ಮೈಷುಗರ್‌ ಮಾಜಿ ಅಧ್ಯಕ್ಷ ಹಾಲಹಳ್ಳಿ ರಾಮಲಿಂಗಯ್ಯ ಮಾತನಾಡಿ, ಕಾರ್ಖಾನೆ ಪ್ರಾರಂಭವಾಗುವರೆವಿಗೂ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬನ್ನು ಬೇರೆ ಕಾರ್ಖಾನೆಗಳಿಗೆ ಸಾಗಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿದರು.

ಮಾಜಿ ಸಚಿವ ಎಂ.ಎಸ್‌. ಆತ್ಮಾನಂದ ಮಾತನಾಡಿ, ಈಗಾಗಲೇ ತಡ ಆಗಿದೆ. ಮತ್ತೆ ತಡ ಮಾಡುವುದು ಬೇಡ, ರೈತರ ಹಿತ ಕಾಯಬೇಕಾದದ್ದು ಸರ್ಕಾರ ಮತ್ತು ಜಿಲ್ಲಾಡಳಿತದ ಕರ್ತವ್ಯ ಆಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಬೇರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಲು ಮನವಿ ಮಾಡಬೇಕು ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ರೈತ ಮುಖಂಡರಾದ ಚಂದ್ರಶೇಖರ್‌, ಸುಧೀರ್‌, ದೇಶಹಳ್ಳಿ ಮೋಹನ್‌ಕುಮಾರ್‌, ಮೈಷುಗರ್‌ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಪಾಂಡವಪುರ: ಟೊಮೆಟೋ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದ ಕಂಪನಿ ನಿಗದಿತ ಸಮಯಕ್ಕೆ ಖರೀದಿಸಲಿಲ್ಲವೆಂಬ ಕಾರಣಕ್ಕೆ ಕೆರೆಗೆ ಟೊಮೆಟೋ ಸುರಿದು ರೈತನೊಬ್ಬ ಆಕ್ರೋಶ...

  • ಮಂಡ್ಯ: ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸೇರಿದಂತೆ ಇತರೆಡೆ ಬೆಳೆದಿರುವ ದ್ರಾಕ್ಷಿ ಬೆಳೆ ಕಟಾವು ಮಾಡಿ, ಮಾರಾಟ ಮಾಡಲು...

  • ಮಂಡ್ಯ: ಜಿಲ್ಲೆಯಲ್ಲಿ 9 ಕಡೆ ಜ್ವರ ತಪಾಸಣೆ ಕೇಂದ್ರಗಳನ್ನು ಗುರುತಿಸಲಾಗಿದ್ದು, ಜ್ವರಕ್ಕೆ ಸಂಬಂಧಿಸಿದಂತೆ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ...

  • ಮಂಡ್ಯ: ರಾಜ್ಯದಲ್ಲಿ ಕೋವಿಡ್ 19 ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ನಗರದೊಳಗೆ...

  • ನಾಗಮಂಗಲ: ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ತೀವ್ರವಾಗಿ ಹರಡುತ್ತಾ ಜನರನ್ನು ಆತಂಕ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 144 ನೇ ಸೆಕ್ಷನ್‌...

ಹೊಸ ಸೇರ್ಪಡೆ