ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬದ್ಧತೆ ನನಗೂ ಇದೆ: ನಿಖೀಲ್‌

Team Udayavani, Apr 14, 2019, 12:33 PM IST

mikhil

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕುರುಕ್ಷೇತ್ರದೊಳಗೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ನಿಖೀಲ್‌ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಕದನ ಕಲಿಗಳಂತೆ ಗೆಲುವಿಗೆ ಹೋರಾಟ ನಡೆಸುತ್ತಿದ್ದಾರೆ. ಅವರ ರಾಜಕೀಯ ಪ್ರವೇಶದ ಉದ್ದೇಶ, ಗುರಿ, ಪ್ರಚಾರದ ಅನುಭವಗಳನ್ನು ಉದಯವಾಣಿಯೊಂದಿಗೆ ಹಂಚಿಕೊಂಡಿದ್ದಾರೆ.

* ನೀವು ಜಿಲ್ಲೆಯಲ್ಲಿ ಗುರುತಿಸಿರುವ ಸಮಸ್ಯೆಗಳೇನು?
ನಿಖೀಲ್‌: ನಾನೂ ರೈತ ಕುಟುಂಬದಿಂದ ಬಂದವನು. ನನಗೂ ರೈತರು ಹಾಗೂ
ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಅರಿವಿದೆ. ಅದಕ್ಕೆ ಪರಿಹಾರ ಸೂಚಿಸಲು ಶಕ್ತನಾಗಿದ್ದೇನೆ. ಅದಕ್ಕೆ ಅವಕಾಶ ಬೇಕು. ಅದಕ್ಕಾಗಿ ಜನರ ಆಶೀರ್ವಾದ ಬಯಸಿ ಬಂದಿದ್ದೇನೆ. ಜಿಲ್ಲೆಯ ಜನರು ನನ್ನ ತಾತ ಹಾಗೂ ನನ್ನ ತಂದೆಯನ್ನು
ಕೈಬಿಟ್ಟಿಲ್ಲ. ನನ್ನನ್ನೂ ಕೈಬಿಡುವುದಿಲ್ಲವೆಂಬ ನಂಬಿಕೆ ಇದೆ.

* ಕುಟುಂಬ ರಾಜಕಾರಣದ ಟೀಕೆಗೆ ನಿಮ್ಮ ಉತ್ತರವೇನು?
ನಿಖೀಲ್‌: ಕುಟುಂಬ ರಾಜಕಾರಣ ಇಂದು ಯಾವ ಪಕ್ಷದಲ್ಲಿಲ್ಲ. ಜೆಡಿಎಸ್‌ ದೇವೇಗೌಡರು ಹಾಗೂ ಹೆಚ್‌.ಡಿ.ಕುಮಾರಸ್ವಾಮಿ ಅವರು ಕಟ್ಟಿ ಸಮರ್ಥವಾಗಿ ಬೆಳೆಸಿದ್ದಾರೆ. ಅವರಿಗೆ ಶಕ್ತಿ ತುಂಬುವ ಸಲುವಾಗಿ ನಾವು ರಾಜಕೀಯ ಪ್ರವೇಶ ಮಾಡಿದ್ದೇವೆ. ನಾವು ಯಾರನ್ನೂತುಳಿದು ಮೇಲೆ ಬರುತ್ತಿಲ್ಲ. ಹಿಂಬಾಗಿಲ ಪ್ರವೇಶವನ್ನೂ ಪಡೆಯುತ್ತಿಲ್ಲ. ನಮ್ಮಲ್ಲಿರುವ ರಾಜಕೀಯ ಇಚ್ಛಾಶಕ್ತಿ, ಅಭಿವೃದ್ಧಿಯ ಬದ್ಧತೆಯನ್ನು ಗುರುತಿಸಿ ಜನರು ನಮ್ಮನ್ನು ಆಯ್ಕೆ ಮಾಡುವರು ಎಂಬ ವಿಶ್ವಾಸ ನನಗಿದೆ.

* ಅಭಿವೃದ್ಧಿಯನ್ನು ನೀವು ಚುನಾವಣಾ ಅಜೆಂಡಾ ಮಾಡಿಕೊಂಡಿರುವಿರಾ?
ನಿಖೀಲ್‌: ಹೌದು. ಅಭಿವೃದ್ಧಿ ನಮ್ಮ ಪ್ರಮುಖ ಅಜೆಂಡಾವಾಗಿದೆ. ಅದನ್ನೇ ಜನರ ಮುಂದಿಟ್ಟು ಮತ ಕೇಳುತ್ತಿದ್ದೇವೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 8500 ಕೋಟಿ ರೂ.ಗೂ ಹೆಚ್ಚಿನ ಹಣವನ್ನು ಜಿಲ್ಲೆಯ ಅಭಿವೃದ್ಧಿ
ಕಾಮಗಾರಿಗೆ ನೀಡಿದ್ದಾರೆ. ಇದು ಅಭಿವೃದ್ಧಿಯ ಬಗ್ಗೆ ಅವರಿಗಿರುವ ಬದ್ಧತೆಯಲ್ಲವೇ? ವಿರೋಧ ಪಕ್ಷದವರ ವಿರೋಧದ ನಡುವೆಯೂ ಜಿಲ್ಲೆಯ ಇತಿಹಾಸದಲ್ಲಿ ಯಾರೂ ಕೊಡಲಾಗದಷ್ಟು ಅನುದಾನವನ್ನು ಜಿಲ್ಲೆಗೆ ನೀಡಿದ್ದೇವೆ. ಇದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಚುನಾವಣೆಯಲ್ಲಿ ಬೆಂಬಲಿಸುವರೆಂಬ ವಿಶ್ವಾಸವೂ ಇದೆ.

* ರಾಜಕೀಯ ಪ್ರವೇಶದ ಅನುಭವ ಹೇಗಿದೆ?
ನಿಖೀಲ್‌: ರಾಜಕೀಯ ನನಗೆ ಹೊಸದು. ವಯಸ್ಸು ಚಿಕ್ಕದಿರಬಹುದು. ಮೊದಲ ಪ್ರವೇಶದಲ್ಲಿ ಸಾಕಷ್ಟು ಪಾಠ ಕಲಿತಿದ್ದೇನೆ. ಕೆಳಮಟ್ಟಕ್ಕೆ ಇಳಿದು ಜನರ ಪರಿಸ್ಥಿತಿಯನ್ನು ಅರಿಯುವ ಅವಕಾಶ ಇದರಿಂದ ನನಗೆ ಸಿಕ್ಕಿದೆ. ಜನಸಾಮಾನ್ಯರ ಸಮಸ್ಯೆಗಳೇನು, ರೈತರ ಸಮಸ್ಯೆಗಳೇನು ಎಂದು ತಿಳಿಯುವುದಕ್ಕೆ ಸಾಧ್ಯವಾಗಿದೆ. ಇದೊಂದು ವಿಶಿಷ್ಟ ಅನುಭವ. ಒಳ್ಳೆಯ ರಾಜಕಾರಣ ಮಾಡುವ ಮೂಲಕ ಜನರ ಮನಸ್ಸನ್ನು ಗೆಲ್ಲಬೇಕು ಎಂದುಕೊಂಡಿದ್ದೇನೆ. ಜನರ ಹೃದಯದಲ್ಲಿ ಸ್ಥಾನ ಪಡೆಯುವ ಮಹತ್ವಾಕಾಂಕ್ಷೆ ಹೊಂದಿದ್ದು, ಅದಕ್ಕಾಗಿ ಚುನಾವಣೆಯಲ್ಲಿ ಆಶೀರ್ವಾದ ಕೇಳುತ್ತಿದ್ದೇನೆ.

* ಚುನಾವಣೆಯಲ್ಲಿ ಗೆಲುವಿನ ವಿಶ್ವಾಸವಿದೆಯೇ?
ನಿಖೀಲ್‌: ಹಂಡ್ರೆಡ್‌ ಪರ್ಸೆಂಟ್‌ ಇದೆ. ನನ್ನ ಸ್ಪರ್ಧೆಗೆ ಎಲ್ಲರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಶಾಸಕರು ನನ್ನ ಪರವಾಗಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಕರ್ತರು ನನ್ನ ಗೆಲುವಿಗೆ ಪಣ ತೊಟ್ಟಿದ್ದಾರೆ. ನನ್ನ ತಾತ ಹಾಗೂ ತಂದೆಯವರು ಜಿಲ್ಲೆಗೆ ನೀಡಿರುವ ಕೊಡುಗೆಗಳು ನನಗೆ ಬೆನ್ನೆಲುಬಾಗಿದೆ. ಅವರಂತೆಯೇ ನನಗೂ ಜನಸೇವಕನಾಗಬೇಕೆಂಬ ಹಂಬಲವಿದೆ. ಜನರ ಮಧ್ಯದಲ್ಲಿದ್ದು ಕೆಲಸ ಮಾಡುವ ಉತ್ಕಟ ಆಕಾಂಕ್ಷೆ ಹೊಂದಿರುವೆ. ಅದಕ್ಕಾಗಿ ಜನರು ನನ್ನ ಕೈ ಹಿಡಿಯುವರೆಂಬ ಅಚಲವಾದ ವಿಶ್ವಾಸವಿದೆ. ಉತ್ತಮ ರಾಜಕಾರಣಿಯಾಗಲು ಬಂದಿರುವ ನನ್ನನ್ನು ಜನರು ಸ್ವೀಕರಿಸುತ್ತಾರೆಂಬ ನಂಬಿಕೆ ಬಲವಾಗಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.