ಆಮ್ಲಜನಕ ಪ್ಲ್ಯಾಂಟ್‌ ಹೊಂದಿದ ಜಿಲ್ಲೆ


Team Udayavani, Aug 23, 2021, 8:59 PM IST

Oxygen Plant

ಮಂಡ್ಯ: ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಆಸ್ಪತ್ರೆಗಳ ಪರಿಸ್ಥಿತಿ ಕೊಂಚ ಬದಲಾಗಿದೆ. ಕೊರೊನಾ ಸೋಂಕಿನಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಪ್ಲಾಂಟ್‌ ಹೊಂದಿದ ಜಿಲ್ಲೆಯಾಗಿದೆ  .

ಬೆಡ್‌, ಐಸಿಯು, ವೆಂಟಿಲೇಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆದರೆಇನ್ನೂ ಸಾಕಷ್ಟು ಸಮಸ್ಯೆಗಳಿದ್ದು, ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಬೇಕಿದೆ.ಬೆಡ್‌ಗಳ ಸಂಖ್ಯೆ ಹೆಚ್ಚಳ: ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳಹೆಚ್ಚಿಸಲು ಕ್ರಮ ವಹಿಸಲಾಗಿದೆ. ಮೊದಲು3 ಐಸಿಯು ಬೆಡ್‌ಗಳಿ ದ್ದವು. ಈಗ ಅದನ್ನು10ಕ್ಕೇರಿಸಲು ಕ್ರಮ ವಹಿಸಲಾಗು ತ್ತಿದೆ. ಅಲ್ಲದೆ, ವೆಂಟಿಲೇಟರ್‌ಗಳನ್ನು ಅಳವಡಿಸಲುಕ್ರಮ ವಹಿಸಲಾಗುತ್ತಿದೆ.ಮಿಮ್ಸ್‌ಗೆ 100 ವೆಂಟಿಲೇಟರ್‌ಗಳಿಗೆ ಏರಿಕೆ:ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ 40 ವೆಂಟಿಲೇಟರ್‌ಗಳಿಂದ 100 ವೆಂಟಿಲೇಟರ್‌ಗಳಿಗೆ ಏರಿಕೆ ಮಾಡಲಾಗಿದೆ.

ಅದರ ಜತೆಗೆ 30ಮಕ್ಕಳ ಐಸಿಯು ಬೆಡ್‌ ಅಳವಡಿಸಲಾಗಿದೆ. ಜಿಲ್ಲೆಯಾಸ್ಪತ್ರೆಯಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ 400 ಹಾಸಿಗೆಗಳನ್ನು ಮೀಸಲಿಡಲಾಗಿತ್ತು. ಮತ್ತೆ 150 ಬೆಡ್‌ಗಳ ವಾರ್ಡ್‌ತೆರೆಯಲಾಗಿದೆ.ಸಿಸಿಟಿವಿ ಕ್ಯಾಮೆರಾ ಅಳವಡಿಕೆ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ವಾರ್ಡ್‌ಗಳಲ್ಲಿಕೊರೊನಾ ಸೋಂಕಿತರ ಮೇಲೆ ನಿಗಾ ವಹಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಸೋಂಕಿತರಿಗೆ ಯಾವ ಸಂದರ್ಭದಲ್ಲಿ ಚಿಕಿತ್ಸೆ ನೀಡಬಹುದು.ಅಲ್ಲದೆ, ಸೋಂಕಿತರ ಆರೋಗ್ಯದ ಮೇಲೆ ನಿಗಾ ವಹಿಸಬಹುದಾಗಿದೆ.

ಆಕ್ಸಿಜನ್‌ ಉತ್ಪಾದನಾ ಪ್ಲಾಂಟ್‌ಗಳ ನಿರ್ಮಾಣ: ಮಂಡ್ಯ ಮಿಮ್ಸ್‌ ಸೇರಿದಂತೆಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣ ಮಾಡ ಲಾಗಿದೆ.2ನೇ ಅಲೆಯಲ್ಲಿ ಆಕ್ಸಿಜನ್‌ ಕೊರತೆ ಅನು ಭವಿಸಿದ ಹಿನ್ನೆಲೆಯಲ್ಲಿ ಮುಂದೆ ಯಾವುದೇರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮಿಮ್ಸ್‌ನಲ್ಲಿ 2 ಸೇರಿದಂತೆಎಲ್ಲ ತಾಲೂಕು ಆಸ್ಪತ್ರೆ ಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಿಸಲಾಗಿದೆ.

ವೈದ್ಯಕೀಯ ಹುದ್ದೆಗಳ ಭರ್ತಿ: ಜಿಲ್ಲೆಯಲ್ಲಿ ಖಾಲಿ ಇದ್ದ ಎಲ್ಲ ವೈದ್ಯಕೀಯಹುದ್ದೆಗಳನ್ನು ಭರ್ತಿ ಮಾಡ ಲಾಗಿದೆ. ವೈದ್ಯರು, ದಾದಿಯರು, ಡಿ ಗ್ರೂಪ್‌ ನೌಕ ‌ರರು,ಸಿಬ್ಬಂದಿಗಳು, ಲ್ಯಾಬ್‌ ಟೆಕ್ನಿಷಿಯನ್‌, ಫಾರ್ಮಾಸಿಸ್ಟ್‌ಗಳನ್ನು ಗುತ್ತಿಗೆ ಆಧಾರದ ಮೇಲೆನೇಮಕ ಮಾಡಿಕೊಳ್ಳಲಾಗಿದೆ. ಇದರಿಂದ ವೈದ್ಯಕೀಯ ಸಿಬ್ಬಂದಿಗಳ ಕೊರತೆಇಲ್ಲದಂತಾಗಿದೆ.

ವೈದ್ಯಕೀಯ ಪರಿಕರಗಳ ಸಂಗ್ರಹ: ಚಿಕಿತ್ಸೆಗೆ ಬೇಕಾದ ಎಲ್ಲ ರೀತಿಯ ವೈದ್ಯಕೀಯಪರಿಕರಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಸಾಕಷ್ಟು ಮಂದಿದಾನಿಗಳು, ಸಂಘ-ಸಂಸ್ಥೆಗಳು ಕೊರೊನಾ ಸೋಂಕಿನ ಚಿಕಿತ್ಸೆಗೆ ಬೇಕಾದ ಆಕ್ಸಿಜನ್‌ಕಾನ್ಸೆಂಟ್ರೇಟರ್‌, ಆಕ್ಸಿಜನ್‌ ಸಿಲಿಂಡರ್‌ಗಳು, ಮಾಸ್ಕ್ಗಳು, ಸ್ಯಾನಿಟೈಸರ್‌ ಸೇರಿದಂತೆವಿವಿಧ ಚಿಕಿತ್ಸಾ ಪರಿಕರಗಳನ್ನು ನೀಡಿದ್ದಾರೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.