ಜನ ಸಂಪರ್ಕ ಸಭೆಗೆ ಬಾರದ ಜನ!

Team Udayavani, Dec 21, 2019, 3:30 PM IST

mandya-tdy-1

ನಾಗಮಂಗಲ: ಜನಸಾಮಾನ್ಯರ ಸಮಸ್ಯೆಗಳನ್ನು ಮನೆಬಾಗಿಲಲ್ಲೇ ಬಗೆಹರಿಸುವುದು, ಕಚೇರಿಗಳಿಗೆ ಅಲೆದಾಟ ತಪ್ಪಿಸುವುದು, ಮುಖ್ಯವಾಗಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಕೆಲಸ ಕಾರ್ಯಗಳನ್ನು ಶೀಘ್ರ ಮಾಡಿಕೊಡುವ ಉದ್ದೇಶದಿಂದ ಸರ್ಕಾರ “ಜನ ಸಂಪರ್ಕ ಸಭೆ’ಗಳನ್ನು ಆಯೋಜಿಸುತ್ತಿದೆ. ಆದರೆ, ಇಂತಹ ಸಭೆಗಳಿಗೆ ಜನಸಾಮಾನ್ಯರೇ ಬರಲ್ಲವೆಂದರೆ ಅಧಿಕಾರಿಗಳೇನು ಮಾಡಬೇಕು?

ಹೀಗೆಂದು ಜಿಲ್ಲಾ ಸೆಸ್ಕ್ ಅಧೀಕ್ಷಕ ಅಭಿಯಂತರ ಶ್ರೀನಿವಾಸಮೂರ್ತಿ ಪ್ರಶ್ನಿಸಿದರು. ಪಟ್ಟಣದಲ್ಲಿ ಶುಕ್ರವಾರ ಸೆಸ್ಕ್ ಗ್ರಾಹಕರಿಗಾಗಿ ಕುಂದು ಕೊರತೆಗಳ ಅಹವಾಲು ಸ್ವೀಕಾರಕ್ಕಾಗಿ ಆಯೋಜಿಸಿದ್ದ ಜನ ಸಂಪರ್ಕ ಸಭೆಗೆ ಇಡೀ ತಾಲೂಕಿನ ಕೇವಲ ಒಬ್ಬೇ ಒಬ್ಬ ರೈತ ಆಗಮಿಸದ್ದನ್ನು ಕಂಡು ಸೆಸ್ಕ್ ಅಧೀಕ್ಷರು ಸ್ಥಳೀಯ ಸೆಸ್ಕ್ ಕಚೇರಿ ಅಧಿಕಾರಿ, ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ಟಿಬಿ ಬಡಾವಣೆಯ ಸೆಸ್ಕ್ ಕಚೇರಿಯಲ್ಲಿ ಆಯೋಜಿಸಿದ್ದ ಸೆಸ್ಕ್ ತಾಲೂಕು ಮಟ್ಟದ ಜನ ಸಂಪರ್ಕ ಸಭೆಗೆ ಜನರಿಲ್ಲದ ಕಾರಣ ಅಧಿಕಾರಿ ಆಕ್ರೋಶಕ್ಕೆ ಕಾರಣವಾಯಿತು.

ವಿದ್ಯುತ್‌ ಸ್ಪರ್ಶಕ್ಕೆ ಬೆಳೆ ಭಸ್ಮ: ಜನಸಂಪರ್ಕ ಸಭೆಗೆ ತಾಲೂಕಿನ ಶ್ರೀರಘುರಾಂಪುರ ಗ್ರಾಮದ ಕೇವಲ ಒಬ್ಬೇ ರೈತ ಜವರೇಗೌಡ ಆಗಮಿಸಿ ಕಳೆದ 10 ತಿಂಗಳ ಹಿಂದೆ ತನ್ನ ಜಮೀನಿನ ಮೇಲೆ ಹಾದುಹೋಗಿದ್ದ ವಿದ್ಯುತ್‌ ತಂತಿಯಲ್ಲಿ ಬೆಂಕಿ ಉಂಟಾಗಿ ಎರಡು ಎಕರೆಯಲ್ಲಿ ಬೆಳೆದಿದ್ದ ಬಾಳೆ ಹಾಗೂ ತೆಂಗು ಸುಟ್ಟು ಸುಟ್ಟು ಭಸ್ಮವಾಗಿದೆ. ಇದರಿಂದ ಸುಮಾರು 10 ಲಕ್ಷ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಇದುವರೆಗೂ ಯಾರೂ ಅತ್ತ ಸುಳಿದಿಲ್ಲ. ಯಾವ ಪರಿಹಾರ ಕೊಟ್ಟಿಲ್ಲ. ನಾನು ಮತ್ತೆ ಸಾಲ ಮಾಡಿ ಬೆಳೆ ಬೆಳೆದು ಇದೇ ರೀತಿ ಸುಟ್ಟರೆ ಏನು ಮಾಡಬೇಕೆಂದು ಅಧೀಕ್ಷಕ ಅಭಿಯಂತರರ ಬಳಿ ತಮ್ಮ ಅಳಲು ತೋಡಿಕೊಂಡರು.

ಪರಿಹಾರ ನೀಡಲು ಸೂಚನೆ: ರೈತ ಜವರೇಗೌಡನ ಅಳಲಿಗೆ ಸ್ಪಂದಿಸಿದ ಅಧೀಕ್ಷಕರು ಕೂಡಲೇ ದೂರವಾಣಿ ಮೂಲಕ ಮಂಡ್ಯ ಕಚೇರಿಯ ಅಧಿಕಾರಿಯೊಂದಿಗೆ ಮಾತನಾಡಿ, ಪರಿಹಾರ ನೀಡುವಂತೆ ಸೂಚಿಸಿದರು. ಅಷ್ಟಲ್ಲದೆ ಸಭೆಯಲ್ಲಿದ್ದ ಆ ವಿಭಾಗದ ಎಂಜಿನಿಯರ್‌ರಿಂದ ಕಡತ ತರಿಸಿಕೊಂಡು ಪರಿಶೀಲಿಸಿ ಎಂಜಿನಿಯರ್‌ ಜೊತೆಯಲ್ಲೇ ರೈತ ಜವರೇಗೌಡರನ್ನು ಮಂಡ್ಯ ಕಚೇರಿಗೆ ಕಳುಹಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ಎಇಇ ಮರಿಸ್ವಾಮಿ, ಎಇ ಕುಮಾರ್‌, ಪ್ರಭಾರ ಇಇ ಸೋಮರಾಜ್‌, ಎಇಇ ಜಗದೀಶ್‌ ಮತ್ತಿತರರು ಹಾಜರಿದ್ದರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.