ಎಂಎಲ್‌ಸಿ ಸಮರ ತ್ರಿಕೋನ ಅಖಾಡಕ್ಕೆ ವೇದಿಕೆ

ಕಾರಣ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಚುನಾವಣೆ „ ಜಿಲ್ಲಾದ್ಯಂತ 4036 ಮತದಾರರು „ ಗೆಲುವಿಗಾಗಿ ಕೈ, ದಳ, ಕಮಲ ಪೈಪೋಟಿ

Team Udayavani, Nov 10, 2021, 12:51 PM IST

ಚುನಾವಣೆ

Representative Image used

ಮಂಡ್ಯ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸದಸ್ಯರಾಗಿರುವ ಜೆಡಿಎಸ್‌ ಪಕ್ಷದ ಎನ್‌.ಅಪ್ಪಾಜಿಗೌಡ ಅವರ ಅವ ಧಿ 2022ರ ಜನವರಿ 5ರಂದು ಮುಕ್ತಾಯಗೊಳ್ಳುವುದ ರಿಂದ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಿಸಿದ್ದು, ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಜೆಡಿಎಸ್‌ ವಶದಲ್ಲಿರುವ ಸ್ಥಾನ ವನ್ನು ಕಾಂಗ್ರೆಸ್‌, ಬಿಜೆಪಿ ಪಕ್ಷಗಳು ತಮ್ಮ ವಶಕ್ಕೆ ಪಡೆಯಲು ಇನ್ನಿಲ್ಲದ ಕಸರತ್ತು ಆರಂಭಿಸಿದ್ದರೆ, ಜೆಡಿಎಸ್‌ ಸ್ಥಾನ ಉಳಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ಮೂರು ಪಕ್ಷಗಳು ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿವೆ.

ಜೆಡಿಎಸ್‌ ಭದ್ರಕೋಟೆ: ಗ್ರಾಮ ಪಂಚಾಯಿತಿ ಸದಸ್ಯರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಜಿಲ್ಲೆಯ ಶಾಸಕರು, ಸಂಸದರು ಮತದಾನ ಮಾಡುವ ಹಕ್ಕು ಹೊಂದಿದ್ದಾರೆ. ಜಿಲ್ಲೆ ಜೆಡಿಎಸ್‌ ಭದ್ರಕೋಟೆಯಾಗಿದ್ದು, ಮೂವರು ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ 9 ಮಂದಿ ಶಾಸಕರಿದ್ದಾರೆ. ಅಲ್ಲದೆ, ಗ್ರಾಪಂ, ನಗರಸಭೆ, ಪುರಸಭೆಗಳಲ್ಲಿ ತನ್ನದೇ ಆದ ಸದಸ್ಯರ ಸಂಖ್ಯೆ ಹೊಂದಿದೆ.

4036 ಮತದಾರರು: ಜಿಲ್ಲೆಯಾದ್ಯಂತ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾ ಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಂದ ಒಟ್ಟು 4036 ಸದಸ್ಯರಿದ್ದಾರೆ. ಆದರೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಸದಸ್ಯರ ಅವ ಧಿ ಮುಗಿದಿದ್ದು, ಚುನಾವಣೆ ನಡೆಯದ ಪರಿಣಾಮ ಮತದಾನ ಮಾಡಲು ಅವಕಾಶವಿಲ್ಲ. 3,839 ಗ್ರಾಪಂ ಸದಸ್ಯರು: ಜಿಲ್ಲೆಯಲ್ಲಿ ಒಟ್ಟು 233 ಗ್ರಾಮ ಪಂಚಾಯಿತಿಗಳಿದ್ದು, 3,839 ಸದಸ್ಯರಿದ್ದಾರೆ. ಮಂಡ್ಯ 713, ಮದ್ದೂರು 686, ಮಳವಳ್ಳಿ 630, ಪಾಂಡವಪುರ 421, ಶ್ರೀರಂಗಪಟ್ಟಣ 398, ಕೆ.ಆರ್‌. ಪೇಟೆ 602 ಹಾಗೂ ನಾಗಮಂಗಲ 389 ಸದಸ್ಯರಿದ್ದು, ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.

ಟಿಕೆಟ್‌ ಆಕಾಂಕ್ಷಿಗಳ ದಂಡು: ಪ್ರಸ್ತುತ ಹಾಲಿ ಇರುವ ಜೆಡಿಎಸ್‌ ಸದಸ್ಯ ಎನ್‌.ಅಪ್ಪಾಜಿಗೌಡ ಮತ್ತೆ ಸ್ಪರ್ಧೆ ಬಯಸಿದ್ದಾರೆ. ಇದರ ನಡುವೆ ಜೆಡಿಎಸ್‌ ಟಿಕೆಟ್‌ಗಾಗಿ ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು ರೇಸ್‌ ನಲ್ಲಿದ್ದಾರೆ. ಬಿಜೆಪಿಯಿಂದ ನಾಲ್ವರು ಆಕಾಂಕ್ಷಿತರಿದ್ದಾರೆ. ಬಿಜೆಪಿ ತಾಲೂಕು ಅಧ್ಯಕ್ಷ ಬೂಕಹಳ್ಳಿ ಮಂಜುನಾಥ್‌, ಎಲೆಚಾಕನಹಳ್ಳಿ ಬಸವರಾಜು, ಶೀಳನೆರೆ ಅಂಬರೀಶ್‌, ಉಮೇಶ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಅತ್ತ ಕಾಂಗ್ರೆಸ್‌ನಿಂದ ಬಿ.ರಾಮಕೃಷ್ಣ ಟಿಕೆಟ್‌ ಆಕಾಂಕ್ಷಿ ಯಾಗಿದ್ದು, ರವಿಕುಮಾರ್‌ ಗಣಿಗ ಸೇರಿದಂತೆ ಇನ್ನಿಬ್ಬರ ಹೆಸರೂ ಕೇಳಿ ಬರುತ್ತಿದೆ.

 ಕೈ-ದಳ ನಡುವೆ ಜಿದ್ದಾ ಜಿದ್ದಿ

ಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರ ನಡುವೆ ರಾಜಕೀಯ ಜಿದ್ದಾಜಿದ್ದಿ ನಡೆಯುತ್ತಿದೆ. ಯಾವುದೇ ವಿಚಾರ ಬಂದರೂ ಕೈ ಹಾಗೂ ದಳ ನಾಯಕರ ನಡುವೆ ಮಾತಿನ ಸಮರ, ತಿರುಗೇಟು, ವೈಯಕ್ತಿಕ ಟೀಕೆಗಳು ವ್ಯಕ್ತವಾಗುತ್ತವೆ. ಅದು ಈ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ:- ವಿಜಯಪುರ: ಮೊಮ್ಮಗನ ಆಸ್ಪತ್ರೆಗೆ ನೇತ್ರದಾನ ಮಾಡಿದ ಅಜ್ಜಿ

ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿ ಎನ್‌.ಅಪ್ಪಾಜಿಗೌಡ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎಲ್‌.ಆರ್‌.ಶಿವರಾಮೇಗೌಡ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು. ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಒಬ್ಬ ಶಾಸಕರಿಲ್ಲ. ಅಲ್ಲದೆ, ನಗರಸಭೆ, ಪುರಸಭೆಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ವಿಫಲವಾಗಿದೆ. ಗ್ರಾಪಂ ಸದಸ್ಯರ ಮೇಲೆಯೇ ಕಾಂಗ್ರೆಸ್‌ ಅವಲಂಬಿತವಾಗಿದ್ದು, ಜೆಡಿಎಸ್‌ನಿಂದ ಸ್ಥಾನ ಕಸಿದುಕೊಳ್ಳಲಿದೆಯೇ ಕಾದು ನೋಡಬೇಕು.

 ತ್ರಿಕೋನ ಸ್ಪರ್ಧೆ ಸಾಧ್ಯತೆ-

ಜಿಲ್ಲೆಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಇದೆ. ಆದರೆ ಈ ಬಾರಿ ಬಿಜೆಪಿಯು ಪ್ರಬಲ ಟಕ್ಕರ್‌ ಕೊಡಲು ಸಜಾjಗಿದೆ. ಈಗಾಗಲೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಬೆಂಬಲಿತ ಸದಸ್ಯರನ್ನು ಗೆಲ್ಲಿಸಿದ್ದು, ಕೆಲವು ಕಡೆ ಅ ಧಿಕಾರದ ಚುಕ್ಕಾಣಿ ಹಿಡಿದಿದೆ. ಅಲ್ಲದೆ, ಕೆ.ಆರ್‌.ಪೇಟೆ ಪುರಸಭೆಯ ಆಡಳಿತ ಮಂಡಳಿಯು ಕಮಲದ ವಶವಾಗಿದೆ. ಇದರಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಿಗೆ ಪೈಪೋಟಿ ನೀಡಲು ಸಿದ್ಧತೆ ನಡೆಸಿದೆ. ಆ ಮೂಲಕ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

“ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಚುನಾವಣೆಗೆ ಈ ಬಾರಿಯೂ ಸ್ಪರ್ಧಿಸಲು ಮುಂದಾಗಿದ್ದೇನೆ. ಜೆಡಿಎಸ್‌ ವರಿಷ್ಠರು ಟಿಕೆಟ್‌ ನೀಡಿದರೆ ಚುನಾವಣೆಯಲ್ಲಿ ಸ್ಪ ರ್ಧಿಸುತ್ತೇನೆ. ಎಲ್ಲವೂ ವರಿಷ್ಠರ ತೀರ್ಮಾನ.” – ಎನ್‌.ಅಪ್ಪಾಜಿಗೌಡ, ಹಾಲಿ ವಿಧಾನ ಪರಿಷತ್‌ ಸದಸ್ಯ.

“ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ನಾಯಕರು ಟಿಕೆಟ್‌ ನೀಡಿದರೆ ಸ್ಪರ್ಧಿಸಲಿದ್ದೇನೆ. ಆದರೆ ಇದುವರೆಗೂ ಟಿಕೆಟ್‌ ಫೈನಲ್‌ ಆಗಿಲ್ಲ. ಹೈಕಮಾಂಡ್‌ ಯಾರಿಗೆ ಟಿಕೆಟ್‌ ನೀಡಲಿದೆ ಎಂಬುದು ಗೊತ್ತಿಲ್ಲ.” – ಬಿ.ರಾಮಕೃಷ್ಣ, ವಿಧಾನ ಪರಿಷತ್‌ ಮಾಜಿ ಸದಸ್ಯ.

“ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ವರಿಷ್ಠರು ಈ ಬಾರಿ ನನಗೆ ಟಿಕೆಟ್‌ ನೀಡುವ ವಿಶ್ವಾಸವಿದ್ದು, ಜಿಲ್ಲೆಯಲ್ಲಿ ಮತ್ತೂಂದು ಕಮಲ ಅರಳಿಸಲು ಮುಂದಾಗಿದ್ದೇನೆ.” – ಬೂಕಹಳ್ಳಿ ಮಂಜುನಾಥ್‌, ಬಿಜೆಪಿ ಟಿಕೆಟ್‌ ಆಕಾಂಕ್ಷಿ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.