ವಿಷ ಮಿಶ್ರಿತ ನೀರು ಕುಡಿದು ಶಾಲಾ ಮಕ್ಕಳು ಅಸ್ವಸ್ಥ

ನೀರಿನ ಟ್ಯಾಂಕ್‌ಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು • ಅದೃಷ್ಟವಶಾತ್‌ ಅಪಾಯದಿಂದ ಮಕ್ಕಳು ಪಾರು

Team Udayavani, Jul 16, 2019, 12:53 PM IST

MANDYA-TDY-1..

ಮಂಡ್ಯದ ಎ.ಹುಲ್ಲುಕೆರೆ ಗ್ರಾಮದಲ್ಲಿ ಕ್ರಿಮಿನಾಶಕ ಬೆರೆಸಿದ್ದ ನೀರು ಕುಡಿದು ಅಸ್ವಸ್ಥಗೊಂಡಿದ್ದ ಮಕ್ಕಳಿಗೆ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

ಮಂಡ್ಯ: ವಿಷ ಮಿಶ್ರಿತ ನೀರು ಕುಡಿದು 11 ಮಂದಿ ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಎ.ಹುಲ್ಲುಕೆರೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ಸರ್ಕಾರಿ ಪ್ರೌಢಶಾಲಾ ಮಕ್ಕಳಾದ ಪ್ರಜ್ವಲ್, ಚಂದ್ರ, ಧನುಷ್‌, ನಿಶಾ, ಮಯೂರಗೌಡ, ತೇಜು, ವಿನಯ್‌, ಶಿವಲಿಂಗ, ಯಶವಂತ್‌, ಸೋಮಶೇಖರ್‌ ಸೇರಿದಂತೆ ಮತ್ತಿತರೆ 11 ಮಕ್ಕಳು ಅಸ್ವಸ್ಥರಾಗಿದ್ದಾರೆ.

ಎ.ಹುಲ್ಲುಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ಗೆ ಭಾನುವಾರ ರಾತ್ರಿಯೇ ದುಷ್ಕರ್ಮಿಗಳು ಕ್ರಿಮಿನಾಶಕ ಮಿಶ್ರಣ ಮಾಡಿದ್ದಾರೆ. ಬೆಳಗ್ಗೆ ಹಾಲು ಸೇವಿಸುವ ಮುನ್ನ ಲೋಟ ತೊಳೆಯಲು ತೆರಳಿದ ವೇಳೆ ಕೆಲವು ವಿದ್ಯಾರ್ಥಿಗಳು ನೀರು ಕುಡಿದಿದ್ದಾರೆ. ಕೆಟ್ಟ ವಾಸನೆ ಬಂದದ್ದರಿಂದ ಮಕ್ಕಳು ಬಾಯಲ್ಲಿದ್ದ ನೀರನ್ನು ಹೊರಹಾಕಿ ಶಿಕ್ಷಕರಿಗೆ ಮಾಹಿತಿ ನೀಡಿದರು. ಅಷ್ಟರಲ್ಲಾಗಲೇ ಹಲವು ವಿದ್ಯಾರ್ಥಿಗಳು ನೀರು ಅದೇ ನೀರು ಕುಡಿದಿದ್ದರು. ನಂತರ ನೀರು ಸೇವಿಸದಂತೆ ಉಳಿದ ಮಕ್ಕಳಿಗೆ ಸೂಚಿಸಲಾಯಿತು.

ಮಿಮ್ಸ್‌ ಆಸ್ಪತ್ರೆಗೆ ದಾಖಲೆ: ವಿಷಮಿಶ್ರಿತ ನೀರು ಸೇವಿಸಿದ ಕೆಲವೇ ನಿಮಿಷದಲ್ಲೇ ಮಕ್ಕಳಿಗೆ ಹೊಟ್ಟೆನೋವು, ವಾಂತಿ, ತಲೆ ಸುತ್ತು ಕಾಣಿಸಿಕೊಂಡು ಅಸ್ವಸ್ಥರಾದರು. ನಂತರ ಶಿಕ್ಷಕರು ಸ್ಥಳೀಯರ ಸಹಕಾರದಿಂದ ಸಮೀಪದ ಕೊತ್ತತ್ತಿ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಮಂಡ್ಯದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಿದರು.

ಜಿಲ್ಲಾ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಎಲ್ಲ ಮಕ್ಕಳನ್ನು ದಾಖಲಿಸಿದ್ದು, ಮಕ್ಕಳ ತಜ್ಞರು ಎಲ್ಲ ಮಕ್ಕಳನ್ನು ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿದರು. ಮಿಮ್ಸ್‌ನ ವೈದ್ಯಕೀಯ ಅಧೀಕ್ಷಕ ಡಾ. ಹರೀಶ್‌ ನೇತೃತ್ವದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಸ್ವಾಮಿ, ಸದಸ್ಯ ತೂಬಿನಕೆರೆ ರಾಮಲಿಂಗಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಡಿಡಿಪಿಐ ರಘುನಂದನ್‌, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಯ್ಯ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಲರಾಮೇಗೌಡ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತು. ಶ್ವಾನ ದಳ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಗದ್ದೆಗಳಿಗೆ ಇಲಿ ಇತರೆ ಕೀಟಗಳಿಂದ ಬೆಳೆ ರಕ್ಷಣೆಗೆ ಬಳಸುವ ಕ್ರಿಮಿನಾಶಕದ ಒಂದು ಕೆ.ಜಿ. ತೂಕದ ಪ್ಯಾಕೆಟ್ನ್ನು ವಾಟರ್‌ ಟ್ಯಾಂಕ್‌ಗೆ ದುಷ್ಕರ್ಮಿಗಳು ಹಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಗಲು ನಮ್ಮ ಬಳಿ ಕೈಕಟ್ಟಿ ನಿಂತಿದ್ದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

CM ಆಗಲು ನಮ್ಮ ಬಳಿ ಕೈಕಟ್ಟಿ ನಿಂತಿದ್ದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Mandya; ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

Lok Sabha Election; ಸುಮಲತಾ ನಡೆ ಬಗ್ಗೆ ಕುತೂಹಲ

Lok Sabha Election; ಸುಮಲತಾ ನಡೆ ಬಗ್ಗೆ ಕುತೂಹಲ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.