ರಮ್ಯಾ ನಿವಾಸಕ್ಕೆ ಪೊಲೀಸ್ ಭದ್ರತೆ
Team Udayavani, Nov 29, 2018, 6:35 AM IST
ಮಂಡ್ಯ: ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಸಂಸದೆ ರಮ್ಯಾ ಅವರ ಮಂಡ್ಯ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಇಲ್ಲಿನ ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿರುವ ರಮ್ಯಾ ನಿವಾಸಕ್ಕೆ ಪೊಲೀಸ್ ಕಾವಲು ಹಾಕಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಂಬರೀಶ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳದ ರಮ್ಯಾ ವಿರುದ್ಧ ಅಂಬರೀಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲೂ “ರಮ್ಯಾ ಮಂಡ್ಯ ಪಾಲಿಗೆ ಸತ್ತಂತೆ’ ಎಂಬ ಅಡಿಬರಹ ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದ ಫೋಟೋಗಳು ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ರಮ್ಯಾ ಬಾಡಿಗೆ ಪಡೆದಿರುವ ಮಂಡ್ಯದ ನಿವಾಸಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇಬ್ಬರು ಪೊಲೀಸ್ ಪೇದೆಗಳು ಮನೆಯ ಆವರಣದಲ್ಲಿ ಗಸ್ತು ತಿರುಗುತ್ತಿದ್ದಾರೆ.
ಈ ಬಗ್ಗೆ ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ಮಾತನಾಡಿ, “ರಮ್ಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನಲಾದ ಫೋಟೋವನ್ನು ಟ್ವೀಟರ್‌ನಲ್ಲಿ ಹಾಕಿದ್ದರೂ ಅಭಿಮಾನಿಗಳು ಅದನ್ನು ನಂಬುತ್ತಿಲ್ಲ. ಸದಾ ಸುಳ್ಳು ಹೇಳಿಕೊಂಡೇ ಬರುತ್ತಿರುವ ರಮ್ಯಾ, ಎಳಸು ರಾಜಕಾರಣಿ. ರಾಜಕೀಯದ ಗಂಧ-ಗಾಳಿ ಗೊತ್ತಿಲ್ಲ. ಕನ್ನಡದ ಚಿತ್ರರಂಗದ ದಿಗ್ಗಜನ ಅಂತಿಮ ದರ್ಶನಕ್ಕೆ ಬಾರದೆ ದುರಹಂಕಾರದ ವರ್ತನೆ ಪ್ರದರ್ಶಿಸಿದ್ದಾರೆ. ಅದಕ್ಕಾಗಿಯೇ ಅವರಿಗೆ ಮಂಡ್ಯದ ಜನರು ತಕ್ಕ ಪಾಠ ಕಲಿಸಿದ್ದಾರೆ’ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶುಭ ಕೋರುತ್ತೇನೆ : ಇಡಿ ಹೊಸ ಚಾರ್ಜ್ ಶೀಟ್ ಗೆ ಡಿಕೆಶಿ ವ್ಯಂಗ್ಯವಾಗಿ ಆಕ್ರೋಶ
ಪರಮೇಶ್ವರ್ ರನ್ನು ಸೋಲಿಸಲು ಸಿದ್ದರಾಮಯ್ಯ ಜೊತೆ ಡಿಕೆಶಿ ಕೈಜೋಡಿಸಲಿದ್ದಾರೆ: ಬಿಜೆಪಿ
ಡಿಕೆಶಿ ವಿರುದ್ಧ ಚಾರ್ಜ್ ಶೀಟ್: ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ ಎಂದ ಡಿ.ಕೆ ಸುರೇಶ್
ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ