ಜಮೀನು ಅಳತೆಗೆ ರಾಜಕಾರಣಿಗಳೇ ಅಡ್ಡಗಾಲು

Team Udayavani, Oct 23, 2020, 4:49 PM IST

MANDYA-TDY-2

ಪಾಂಡವಪುರ: ತಮ್ಮ ಜಮೀನು ಅಳತೆ ಮಾಡಿ ಹದ್ದುಬಸ್ತು ಮಾಡಿಕೊಡಲು ರಾಜಕಾರಣಿಗಳೇ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ತಾಲೂಕಿನ ಕೆಂಚನಹಳ್ಳಿ ಗ್ರಾಮದ ರೈತ ಕುಳ್ಳೇಗೌಡ ಅಳಲು ವ್ಯಕ್ತಪಡಿಸಿದ್ದಾರೆ.

ಕೆಂಚನಹಳ್ಳಿ ಗ್ರಾಮದ ಸರ್ವೆ ನಂಬರ್‌ 9/14ರಲ್ಲಿ 3 ಕುಂಟೆ ಮತ್ತು 9/2ರಲ್ಲಿ 3 ಕುಂಟೆ ಜಮೀನನ್ನು ಕುಳ್ಳೇಗೌಡ ಅವರ ತಂದೆ ಮರಿಬೆಟ್ಟೇಗೌಡ ಅವರು 1953ರಲ್ಲಿ ಖರೀದಿ ಮಾಡಿದ್ದು, ಇಂದಿಗೂ ಸದರಿ ಜಮೀನಿನ ಆರ್‌ಟಿಸಿ ಕುಳೇಗೌಡರ ಹೆಸರಲ್ಲಿದೆ. ಆದಾಗ್ಯೂ ಜಮೀನು ಪಕ್ಕದವರಾದ ಬೋರೇಗೌಡ ಮತ್ತು ಜವರೇಗೌಡ ಎಂಬವರು ತಮ್ಮ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕುಳ್ಳೇಗೌಡ ದೂರಿದ್ದಾರೆ.

ಅಳತೆ ಕಾರ್ಯ ನಡೆಯುತ್ತಿಲ್ಲ: ಈಗಾಗಲೇ ಹಲವಾರು ಬಾರಿ ಅಳತೆ ಮಾಡಲು ಸರ್ವೆ ಇಲಾಖೆಯಲ್ಲಿ ಹಣ ಕಟ್ಟಿದ್ದು, ಅಳತೆ ಮಾಡಲು ಬಂದಾಗಲೆಲ್ಲ ಅಧಿಕಾರಿಗಳಿಗೆ ರಾಜಕಾರಣಿಗಳು ಬೆದರಿಸಿ ಕಳಿಸಿದ್ದಾರೆ. ಇಂದಿಗೂ ಇದೇ ನಡವಳಿಕೆ ನಡೆಯುತ್ತಿದ್ದು, ಸರ್ವೆ ಮಾಡಲು ಬರುವ ಸರ್ಕಾರಿ ಅಧಿಕಾರಿಗಳಿಗೆ ಧಮಕಿ ಹಾಕುವುದು ಮತ್ತು ಅಳತೆ ಮಾಡಿದರೆ ವಿಷ ಕುಡಿದು ಸಾಯುತ್ತೇವೆ ಎಂದು ಬಾಜುದಾರರು ಬೆದರಿಸುವ ಕಾರಣ ಹತ್ತಾರು ವರ್ಷಗಳಿಂದ ಅಳತೆ ಕಾರ್ಯ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ವೆ ಮಾಡದಂತೆ ಒತ್ತಡ: ಅಕ್ಟೋಬರ್‌ 22ರಂದು ಕೆಂಚನಹಳ್ಳಿ ಗ್ರಾಮದ ಸರ್ವೆ ನಂಬರ್‌, 9/14 ಮತ್ತು 9/2 ರ ಜಮೀನು ಅಳತೆ ಮಾಡಲು ಪೊಲೀಸ್‌ ಬಂದೋಬಸ್ತ್ನಲ್ಲಿ ಬಂದ ಸರ್ವೆ ಅಧಿಕಾರಿಗಳಿಗೆ ಬಾಜುದಾರರು ವಿಷ ಕುಡಿಯುವ ಹುಸಿ ಬೆದರಿಕೆ ಹಾಕಿದ ಕೂಡಲೇ ಸರ್ವೆ ಕಾರ್ಯ ಸ್ಥಗಿತಗೊಳಿಸಲಾಯಿತು. ಜತೆಗೆ ಸರ್ವೆ ಅಧಿಕಾರಿಗಳಿಗೆ ಪದೇಪದೇ ಸ್ಥಳೀಯ ರಾಜಕಾರಣಿಗಳು ಫೋನ್‌ ಮಾಡಿ ಸರ್ವೆ ಮಾಡದಂತೆ ಒತ್ತಡ ಹಾಕಿದ ಪರಿಣಾಮದಿಂದಲೂ ಸರ್ವೆ ಕಾರ್ಯ ಸ್ಥಗಿತ ಮಾಡಿದರು ಎಂದು ಆರೋಪಿಸಿದ್ದಾರೆ.

ಅಳತೆ ಮಾಡಲು ಸರ್ವೆ ಅಧಿಕಾರಿಗಳು ಒಪ್ಪಿದ್ದರೂ ಸಹ ಬಾಜುದಾರರು ಕಬ್ಬು ಬೆಳೆದಿದ್ದೇವೆ.ಒಳಗೆ ಅಳತೆ ಮಾಡಲು ಬರಬೇಡಿ ಎಂದಿದ್ದಾರೆ. 2 ತಿಂಗಳ ಸಸಿ ಅಳತೆ ಅಡ್ಡಿಯಾಗುವುದಿಲ್ಲ ಎಂದುಸರ್ವೆ ಅಧಿಕಾರಿಗಳು ಹೇಳಿದರೂ, ಅವರ ಮಾತಿಗೆ ಬಾಜುದಾರರು ಬೆಲೆ ಕೊಡದೆ ಸರ್ವೆ ಕಾರ್ಯ ಸ್ಥಗಿತಗೊಳಿಸಿದ್ದಾರೆ. ತಾಲೂಕು ಆಡಳಿತ ಇಂತಹ ಸಣ್ಣ ಪುಟ್ಟ ಕಾರ್ಯಗಳಿಗೂ ತೊಡ ಕುಂಟು ಮಾಡಿದರೆ ಬಡ ರೈತರ ಪಾಡೇನು ಎಂದು ಪ್ರಶ್ನಿಸಿದ ಅವರು, ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಕೂಡಲೇ ನಮ್ಮ ಜಮೀನು ಹದ್ದುಬಸ್ತು ಮಾಡಿಕೊಡುವಂತೆ ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.