ಕಳಪೆ ಕಾಂಕ್ರೀಟ್ ರಸ್ತೆ ಮಧ್ಯೆ ವಿದ್ಯುತ್‌ ಕಂಬ

ವಾಹನಗಳ ಸಂಚಾರಕ್ಕೆ ತೊಂದರೆ, ಕಳಪೆ ಕಾಮಗಾರಿಯಿಂದ ಸಾರ್ವಜನಿಕರ ಓಡಾಟಕ್ಕೂ ತೊಡಕು

Team Udayavani, Jul 9, 2019, 1:17 PM IST

mandya-tdy-2..

ಕೆ.ಆರ್‌.ಪೇಟೆ ತಾಲೂಕಿನ ಮಾರುತಿನಗರ ಗ್ರಾಮದಲ್ಲಿ ನಿರ್ಮಾಣವಾದ ಕೇಲವೇ ತಿಂಗಳಲ್ಲಿ ಕಾಂಕ್ರೀಟ್ ರಸ್ತೆ ಕಿತ್ತುಬಂದು ಜಲ್ಲಿ ರಸ್ತೆಯಾಗಿರುವುದು.

ಕೆ.ಆರ್‌.ಪೇಟೆ: ಸರ್ಕಾರ ಜನರಿಗೆ ಸೌಲಭ್ಯ ಒದಗಿಸಲು ರಸ್ತೆ, ಚರಂಡಿ, ನೀರು ವ್ಯವಸ್ಥೆ ಮಾಡುತ್ತಾರೆ. ಆದರೆ ತಾಲೂಕಿನ ಮಾರುತಿ ನಗರದಲ್ಲಿ ಮಂಡ್ಯ ಜಿಪಂ ವತಿಯಿಂದ ನಿರ್ಮಿಸಿದ ರಸ್ತೆಯೇ ವಾಹನಗಳ ಸಂಚಾರಕ್ಕೆ ತೊಡಕಾಗಿದೆ. ರಸ್ತೆ ಮಧ್ಯೇ ವಿದ್ಯುತ್‌ ಕಂಬ ಬಿಟ್ಟು, ಕಳಪೆ ಕಾಂಕ್ರೀಟ್ ರಸ್ತೆ ನಿರ್ಮಿಸಿ ಒಡಾಟಕ್ಕೆ ತೊಂದರೆ ಮಾಡಲಾಗಿದೆ.

ತಾಲೂಕಿನ ಮೇಲುಕೋಟೆ ರಸ್ತೆಯಲ್ಲಿರುವ ಮಾರುತಿನಗರ ಗ್ರಾಮದಲ್ಲಿ ಜಿಪಂ ಎಂಜಿನಿಯರಿಂಗ್‌ ವತಿಯಿಂದ ರಸ್ತೆಗೆ ಕಾಂಕ್ರೀಟ್ ಹಾಕಿದ್ದಾರೆ. ಈಗ ರಸ್ತೆ ಅಭಿವೃದ್ಧಿ ಮಾಡಿರುವುದರಿಂದಲೇ ವಾಹನಗಳು ರಸ್ತೆಯಲ್ಲಿ ಸಂಚಾರ ಮಾಡದಂತಾಗಿದೆ. ಏಕೆಂದರೆ ಈ ಹಿಂದೆ ಇದ್ದ ಮಣ್ಣಿನ ರಸ್ತೆಯಲ್ಲಿ ಸಾರ್ವಜನಿಕರು ಸರಾಗವಾಗಿ ಓಡಾಡಿಕೊಂಡಿದ್ದರು. ಆದರೆ ರಸ್ತೆಯನ್ನು ಅಭಿವೃದ್ಧಿ ಮಾಡುವುದಾಗಿ ಎರಡೂ ಕಡೆಗಳಲ್ಲಿ ಗುಂಡಿ ತೆಗೆದು ರಸ್ತೆ ಪಕ್ಕದಲ್ಲಿದ್ದಂತಹ ವಿದ್ಯುತ್‌ ಕಂಬಗಳನ್ನು ರಸ್ತೆಯ ಮಧ್ಯಭಾಗಕ್ಕೆ ಬರುವಂತೆಮಾಡಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿರುವುದರಿಂದ ಈಗ ಎತ್ತಿನಗಾಡಿಗಳು, ಕಾರ್‌, ಟ್ರಾಕ್ಟರ್‌ ಮತ್ತಿತರ ವಾಹನಗಳು ರಸ್ತೆಯಲ್ಲಿ ಓಡಾಡದಂತಾಗಿದೆ. ಗ್ರಾಮಸ್ಥರು ಈ ಬಗ್ಗೆ ಜಿಪಂ ಎಂಜಿನಿಯರ್‌ಗಳಿಗೆ ಮಾಹಿತಿ ನೀಡಿ ಕಂಬವನ್ನು ರಸ್ತೆ ಪಕಕ್ಕೆ ಅಳವಡಿಸಿ ಎಂದು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಮುಳ್ಳಿನ ರಸ್ತೆ:ರಸ್ತೆ ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ಹಾಳಾಗಿದ್ದು ಜಲ್ಲಿಕಲ್ಲುಗಳು ಕಿತ್ತು ಬಂದಿದ್ದು ಕಾಂಕ್ರೀಟ್ ರಸ್ತೆ ಈಗ ಮುಳ್ಳಿನ ರಸ್ತೆಯಾಗಿ ನಿರ್ಮಾಣವಾಗಿದೆ. ಜನರು ಕಾಲಿಗೆ ಚಪ್ಪಲಿ ಹಾಕಿಕೊಳ್ಳದೆ ರಸ್ತೆಯಲ್ಲಿ ಓಡಾಡಲು ಅಸಾಧ್ಯ. ಆದರೆ ಈ ಹಿಂದೆ ಮಣ್ಣಿನ ರಸ್ತೆಯಲ್ಲಿಯೇ ಸರಿಯಾಗಿತ್ತು ಎನ್ನುವ ಸ್ಥಿತಿಗೆ ಸ್ಥಳೀಯರು ತಲುಪಿದ್ದಾರೆ. ರಸ್ತೆಯನ್ನು ನಿರ್ಮಾಣ ಮಾಡಿದ್ದ ಕೆಲವೇ ತಿಂಗಳಲ್ಲಿ ಕಿತ್ತು ಬಂದಿರುವ ಬಗ್ಗೆ ಕಾರ್ಯನಿರ್ವಹಿಸಿದ್ದ ಎಂಜಿನಿಯರ್‌ ಲೊಕೇಶ್‌ ರವರನ್ನು ಪ್ರಶ್ನಿಸಿದರೆ ನಾವು ರಸ್ತೆ ನಿರ್ಮಾಣ ಮಾಡಿ ಬಹಳ ದಿನವಾಗಿದೆ ಹಾಗಾಗಿ ಕಿತ್ತು ಬಂದಿದೆ ಇದರ ಜೊತೆಗೆ ನಾವು ಎಂ ಸ್ಯಾಂಡ್‌ನ‌ಲ್ಲಿ ರಸ್ತೆ ನಿರ್ಮಾಣ ಮಾಡಿರುವುದರಿಂದ ಮೇಲಿನ ಕೆನೆ ಮಾತ್ರ ಕಿತ್ತು ಬಂದಿದೆ ಆದರೆ ಜಲ್ಲಿಗಳೇನು ಕಿತ್ತುಬಂದಿಲ್ಲ ಎಂದು ಹಾರಿಕೆಯ ಉತ್ತರ ನೀಡುತ್ತಾರೆ. ಕಳಪೆ ಮತ್ತು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ರಸ್ತೆಗೆ ಸರ್ಕಾರದಿಂದ ಎಷ್ಟು ಹಣ ಬಿಡುಗಡೆ ಮಾಡಿಕೊಂಡಿರಿ ಎಂದರೆ ಮಾತ್ರ ಅದಕ್ಕೆ ಉತ್ತರ ನೀಡುವುದಿಲ್ಲ.

ರಸ್ತೆ ನಿರ್ಮಾಣವೇ ಆಗಿಲ್ಲ: ತಾಲೂಕಿನಲ್ಲಿ ಜಿಪಂ ಎಂಜಿನಿಯರಿಂಗ್‌ ಇಲಾಖೆಯಿಂದ ಯಾವುದೆ ಕೆಲಸವನ್ನು ನಿರ್ವಹಿಸಲು ಅನುಮೋದನೆ ಪಡೆಯಲು, ಕಾಮಗಾರಿ ಆರಂಭಿಸಲು ಮತ್ತು ಕಾಮಗಾರಿ ಮುಗಿದ ನಂತರ ಹಣ ಬಿಡುಗಡೆಮಾಡಲು ಸಹಿ ಮಾಡುವ ಜಿಪಂ ಸಹಾಯಕ ಕಾರ್ಯಪಾಲ ಎಂಜಿನಿಯರ್‌ ರವರನ್ನು ಮಾರುತಿ ನಗರದಲ್ಲಿ ಅವೈಜ್ಷಾನಿಕ ಮತ್ತು ಕಳಪೆ ಕಾಮಗಾರಿ ಮಾಡಿರುವ ಬಗ್ಗೆ ಪ್ರಶ್ನೆಮಾಡಿದರೆ ನಮ್ಮ ಇಲಾಖೆಯಿಂದ ಮಾರುತಿ ನಗರದಲ್ಲಿ ಯಾವುದೆ ರಸ್ತೆ ನಿರ್ಮಾಣ ಮಾಡಿಲ್ಲ ಕುತೂಹಲ ಕರ ಮಾಹಿತಿ ನೀಡಿದ್ದಾರೆ.

•ಎಚ್.ಬಿ.ಮಂಜುನಾಥ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.