ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ

29 ರಂದು 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ • ತರಾತುರಿ ನಿರ್ಧಾರಕ್ಕೆ ಅಸಮಾಧಾನ

Team Udayavani, Jul 28, 2019, 2:12 PM IST

mandya-tdy-1

ನಾಗಮಂಗಲದ ಮಿನಿವಿಧಾನಸೌಧದ ತಹಶೀಲ್ದಾರ್‌ ಕಚೇರಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.

ನಾಗಮಂಗಲ: 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಚರಿಸಲು ತಾಲೂಕು ಆಡಳಿತ ಮತ್ತು ತಾಲೂಕು ಕಸಾಪ ತಹಶೀಲ್ದಾರ್‌ ಎಂ.ವಿ.ರೂಪರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಸಿದ್ಧತೆಗಳ ಬಗ್ಗೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳ ಮುಖಂಡರ ಸಲಹೆ ಸಹಾಕಾರಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ಜುಲೈ.29 ರಂದು ಸಮ್ಮೇಳನ ಆಚರಿಸಲು ನಿಗದಿ ಮಾಡಲಾಗಿದ್ದು ಸಮ್ಮೇಳನವನ್ನು ಪಟ್ಟಣದ ಎಂ.ಆರ್‌.ಪಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

ಸಮ್ಮೇಳನದ ಅಧ್ಯಕ್ಷರಾಗಿ ಇಜ್ಜಲಘಟ್ಟ ಗ್ರಾಮದ ಸಾಹಿತಿ, ನಿರ್ದೇಶಕ ಡಾ.ವಿ.ನಾಗೇಂದ್ರಪ್ರಸಾದ್‌ ಅವರನ್ನು ಆಯ್ಕೆಮಾಡಲಾಗಿದೆ. ಜು.29 ರ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಪಟ್ಟಣದ ಶ್ರೀಸೌಮ್ಯಕೇಶವಸ್ವಾಮಿ ದೇವಸ್ಥಾನದಿಂದ ಟಿ.ಬಿ. ವೃತ್ತದ ಮಾರ್ಗವಾಗಿ ವಿವಿಧ ಜಾನಪದ ಕಲಾತಂಡಗಳಾದ ವೀರಗಾಸೆ ಕುಣಿತ, ಡೊಳ್ಳು ಕುಣಿತ, ಕೋಲಾಟ, ಪೂರ್ಣಕುಂಭ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಸಮ್ಮೇಳನದಲ್ಲಿ ಕಸಾಪ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ವಸಹಾಯ ಸಂಘಗಳು, ಸೇರಿದಂತೆ ಹೆಚ್ಚು ಸಾಹಿತ್ಯಾಸಕ್ತರನ್ನು ಕಾರ್ಯಕ್ರಮಕ್ಕೆ ಕರೆತರುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ತಹಶೀಲ್ದಾರ್‌ ಎಂ.ವಿ.ರೂಪ ಮಾತನಾಡಿ, ನಮ್ಮ ಕನ್ನಡ ಭಾಷೆ ಮತ್ತು ನೆಲ, ಜಲ ಉಳಿಯಬೇಕಾದರೆ ಕನ್ನಡ ಸಾಹಿತ್ಯ ಸಮ್ಮೇಳನಗಳು ವರ್ಷವಿಡೀ ಮತ್ತು ಅರ್ಥಪೂರ್ಣವಾಗಿ ನಡೆಯಬೇಕು ಎಂದರು. ತಾಲೂಕು ಕಸಾಪ ಅಧ್ಯಕ್ಷ ಬಸವೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ.ಕುಮಾರ್‌, ಬಿ.ಇ.ಒ ನಾಗೇಶ್‌, ಎಪಿಎಂಸಿ ಅಧ್ಯಕ್ಷ ಚನ್ನಪ್ಪ, ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ರಾಮೇಗೌಡ, ಸಿಪಿಐ ನಂಜಪ್ಪ ಇತರರಿದ್ದರು.

ಸ್ಥಳೀಯ ಸಾಹಿತಿಗಳ ನಿರ್ಲಕ್ಷ್ಯ: ನಾಗರಿಕರ ಆರೋಪ

ಬಹುತೇಕ ಸಾಹಿತಿಗಳು ತಾಲೂಕಿನಲ್ಲಿಯೇ ನೆಲೆಸಿದ್ದಾರೆ. ತಾಲೂಕಿನ ಇತಿಹಾಸ ಮತ್ತು ಸಾಹಿತ್ಯಕ್ಕೆ ಅಗಾಧವಾದ ಕೊಡುಗೆ ನೀಡುತ್ತಿದ್ದು ಮತ್ತು ತಾಲೂಕಿನ ಸಾಹಿತ್ಯ ಬೆಳವಣಿಗೆಗಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತಾಲೂಕಿನ ಸಾಹಿತ್ಯಲೋಕದ ಮೆರುಗನ್ನು ರಾಜ್ಯವ್ಯಾಪಿ ಪಸರಿಸಿದ್ದಾರೆ. ಈ ರೀತಿಯಲ್ಲಿ ಸ್ಥಳೀಯವಾಗಿ ಸಾಹಿತ್ಯ ಲೋಕವನ್ನು ಪೋಷಿಸುತ್ತಿರುವ ಅನೇಕ ಹಿರಿಯ ಸಾಹಿತಿಗಳನ್ನು ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡದೆ, ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡುವ ಜೊತೆಗೆ ಸಮ್ಮೇಳನ ಕುರಿತಾಗಿ ಮತ್ತು ಅಧ್ಯಕ್ಷರ ಆಯ್ಕೆಯಲ್ಲಿ ಸ್ಥಳೀಯ ಸಾಹಿತಿಗಳು ಮತ್ತು ತಾಲೂಕು ಕಸಾಪ ಸದಸ್ಯರ ಅಭಿಪ್ರಾಯ ಸಂಗ್ರಹಿಸದೆ ಸಮ್ಮೇಳನದ ಅಧ್ಯಕ್ಷರನ್ನು ಆಯ್ಕೆ ಮಾಡಿರುವ ವಿಧಾನಕ್ಕೆ ತಾಲೂಕು ಕಸಾಪ ಸದಸ್ಯರುಗಳು, ಹಿರಿಯ ಸಾಹಿತಿಗಳು ಮತ್ತು ತಾಲೂಕಿನ ಸಾಹಿತ್ಯಾಸಕ್ತರಲ್ಲಿ ವಿರೋಧ ವ್ಯಕ್ತವಾಗುತ್ತಿದೆ.

ದಿಢೀರ್‌ ನಿಗದಿ ಹಿಂದಿನ ಮರ್ಮವೇನು…? :ಈ ಬಾರಿಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ 2 ದಿನಗಳ ಕಾಲ ಆಚರಿಸಲಾಗುವುದು ಎಂದು ಕಳೆದ ತಿಂಗಳು ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಸುರೇಶ್‌ಗೌಡ ತಿಳಿಸಿದ್ದರು. ಆದರೆ ಇತ್ತೀಚಿನ ರಾಜಕೀಯ ಬದಲಾವಣೆಗಳ ನಡುವೆಯಲ್ಲಿಯೇ ಸಾಹಿತ್ಯ ಸಮ್ಮೇಳನವನ್ನು ನಿಗದಿ ಮಾಡಲಾಗಿದೆ. ಶಾಸಕರ ಮಾತಿನಂತೆ ಈ ಬಾರಿಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಚರಣೆ ಮಾಡುವ ಉತ್ಸಾಹದಲ್ಲಿದ್ದ ಅನೇಕ ಸಾಹಿತ್ಯಾಸಕ್ತರು ಮತ್ತು ಕನ್ನಡ ಅಭಿಮಾನಿಗಳಿಗೆ ಸಮ್ಮೇಳನದ ದಿನಾಂಕ ದಿಢೀರ್‌ ಎಂದು ನಿಗದಿಯಾಗಿರುವುದು ಅಚ್ಚರಿ ಮೂಡಿಸಿದೆ. ಕಾರಣ ಸದಸ್ಯರುಗಳ ಮತ್ತು ಸಾಹಿತಿಗಳನ್ನೊಳಗೊಂಡಂತೆ ತಾಲೂಕು ಕಸಾಪ ಯಾವುದೇ ಸಭೆ ನಡೆಸದೆ ಏಕಪಕ್ಷೀಯವಾಗಿ ನಿರ್ಧಾರ ಮಾಡುವ ಮೂಲಕ ಎಲ್ಲಾ ಸಾಹಿತ್ಯಾಸಕ್ತರ ಉತ್ಸಾಹಕ್ಕೆ ತಣ್ಣೀರೆರಚಿದೆ.

ಚರ್ಚೆಗೆ ಗ್ರಾಸವಾದ ಸಮ್ಮೇಳನ: ಅಧ್ಯಕ್ಷರ ಆಯ್ಕೆ, ದಿಢೀರ್‌ ನಿಗದಿಯಾದ ದಿನಾಂಕ, ಸಮ್ಮೇಳನದ ರೂಪು ರೇಷೆಗಳು, ಕೇವಲ ಒಂದು ವಾರದಲ್ಲಿ ಸಮ್ಮೇಳನವನ್ನು ನಡೆಸಲು ತರಾತುರಿ ನಿರ್ಧಾರ ಮತ್ತು ಸಮ್ಮೇಳನ ಕುರಿತಾದ ಪ್ರಚಾರದ ಕೊರತೆ ಇನ್ನೂ ಮುಂತಾದ ತಾಲೂಕು ಕಸಾಪದ ನಡವಳಿಕೆಗಳು ತಾಲೂಕಿನಾದ್ಯಂತ ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರಲ್ಲಿ ಅತ್ಯಂತ ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.