ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ 

Team Udayavani, Mar 3, 2019, 7:47 AM IST

bhooswadina.jpg

ಮಂಡ್ಯ: ಕೇಂದ್ರ ಸರ್ಕಾರದ 2013ರ ಭೂ ಸ್ವಾಧೀನ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಮಸೂದೆಯನ್ನು ವಾಪಾಸ್‌ ಪಡೆಯುವಂತೆ ಆಗ್ರಹಿಸಿ ನಗರದಲ್ಲಿ ಶನಿವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸರ್‌.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು, ಕೆಲವೊತ್ತು ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಫ‌ಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ದೇಶಾದ್ಯಂತ ರೈತರು ಮತ್ತು ಜನಪರ ಸಂಘಟನೆಗಳು ಹೋರಾಟ ಮಾಡಿದ ಹಿನ್ನೆಲೆ 1894ರ ಭೂ ಸ್ವಾಧೀನ ಕಾಯ್ದೆಯನ್ನು ರದ್ದುಪಡಿಸಿ 2013ರಲ್ಲಿ ಹೊಸ ಕಾಯ್ದೆ ರೂಪಿಸಲಾಯಿತು. ಇದರಲ್ಲಿ ಒಂದಷ್ಟು ಸಮಾಧಾನಕರವಾದ ಅಂಶ ಒಳಗೊಂಡಿತ್ತು.

ಆದರೆ, ಈ ಅಧಿನಿಯಮದ ಮೂಲ ಉದ್ದೇಶಕ್ಕೆ ವಿರುದ್ಧವಾಗಿ ಕೆಲ ತಿದ್ದುಪಡಿ ತರಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಂದಾದಾಗ ಅದರ ವಿರುದ್ಧವೂ ವಿರೋಧ ವ್ಯಕ್ತವಾಗಿತ್ತು. ಜತೆಗೆ ಎರಡು ಬಾರಿ ಮೇಲ್ಮನೆಯಲ್ಲಿ ಬಿಲ್‌ ಮಂಡನೆಯಾಗದ ಹಿನ್ನೆಲೆ ತಿದ್ದುಪಡಿ ಸಾಧ್ಯವಾಗಲಿಲ್ಲ ಎಂದು ಪ್ರತಿಭಟನಾಕಾರರು ವಿವರಿಸಿದರು.

ಆದರೆ, ಆಯಾ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದ ಹಿನ್ನೆಲೆ ಕರ್ನಾಟಕ 2013ರ ಕಾಯ್ದೆಗೆ ಇತ್ತೀಚಿಗೆ ನಡೆದ ವಿಧಾನಸಭಾ ಅಧಿವೇಶದನದಲ್ಲಿ ತಿದ್ದುಪಡಿ ಬಿಲ್‌ ಮಂಡಿಸಿ ಚರ್ಚೆ ಇಲ್ಲದೇ ಅಂಗೀಕಾರ ಪಡೆದು, ರಾಜ್ಯಪಾಲರ ಸಹಿಗೆ ಕಳುಹಿಸಿದೆ. ಈ ತಿದ್ದುಪಡಿ ಬಿಲ್‌ 2013ರ ಕಾಯ್ದೆಯ ಮೂಲ ಉದ್ದೇಶಕ್ಕೆ ವ್ಯತಿರಿಕ್ತವಾಗಿದೆ.

ಅಲ್ಲದೆ, ಇದು ಬ್ರಿಟಿಷರು ರೂಪಿಸಿದ್ದ ಕಾಯ್ದೆ ಮುಂದುವರೆಸುವ ಭಾಗವಾಗಿದ್ದು, ಬಂಡವಾಳ ಶಾಹಿಗಳ ಪರವಾಗಿದೆ. ಆದ್ದರಿಂದ, ಕೂಡಲೇ ತಿದ್ದುಪಡಿ ಕಾಯ್ದೆ ಆದೇಶ ವಾಪಾಸ್‌ ಪಡೆಯಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ಬಿ.ಬೊಮ್ಮೇಗೌಡ, ಚಂದ್ರು ಶಿವಳ್ಳಿ, ಕೆ.ನಾಗಣ್ಣ, ಶ್ರೀನಿವಾಸ್‌, ಲತಾ ಶಂಕರ್‌ ಇತರರಿದ್ದರು.

ಟಾಪ್ ನ್ಯೂಸ್

SCHOOL TEA-STUDENTS

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ವೃಥಾ ವಿವಾದ ಬೇಡ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

10.25 ಲಕ್ಷ ರೂ.ದಾಖಲೆ ಬೆಲೆಗೆ ಎತ್ತು ಮಾರಾಟ

ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ 

ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ 

ಶ್ರೀರಂಗಪಟ್ಟಣದಲ್ಲಿ ಪ್ರವಾಸಿಗರಿಗೆ ಸೌಲಭ್ಯ ಕೊರತೆ

ಶ್ರೀರಂಗಪಟ್ಟಣದಲ್ಲಿ ಪ್ರವಾಸಿಗರಿಗೆ ಸೌಲಭ್ಯ ಕೊರತೆ

ಕೃಷಿ ಉತ್ಪನ್ನ ಖರೀದಿಸದೇ ಲಂಚಕ್ಕಾಗಿ ಕಿರುಕುಳ

ಕೃಷಿ ಉತ್ಪನ್ನ ಖರೀದಿಸದೇ ಲಂಚಕ್ಕಾಗಿ ಕಿರುಕುಳ

ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ಗೆ ಯುವಕ ಬಲಿ

ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ಗೆ ಯುವಕ ಬಲಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಹಣಕಾಸು ವಂಚನೆ: ಮುಂಬಯಿ ಉದ್ಯಮಿ ವಿಶ್ವನಾಥ್‌ ಶೆಟ್ಟಿ ಬಂಧನ