ಬಿಡುಗಡೆಯಾದ ಅನುದಾನ ದುರ್ಬಳಕೆ!

Team Udayavani, Jun 12, 2023, 3:58 PM IST

ಬಿಡುಗಡೆಯಾದ ಅನುದಾನ ದುರ್ಬಳಕೆ!

ಮಂಡ್ಯ: ಮೈಷುಗರ್‌ ಕಾರ್ಖಾನೆಗೆ ಇದುವರೆಗೂ ಬಂದ ಸರ್ಕಾರಗಳು ಅನುದಾನ ಬಿಡುಗಡೆ ಮಾಡಿವೆ. ಆದರೆ, ಅನುದಾನ ಸದ್ಬಳಕೆಗಿಂತ ದುರ್ಬಳಕೆಯಾಗಿದ್ದೇ ಹೆಚ್ಚಾಗಿದ್ದು, ಸಾಕಷ್ಟು ಅನುದಾನ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಆದರೆ, ಈ ಬಾರಿಯ ಅನುದಾನ ಸಮರ್ಪಕ ಸದ್ಬಳಕೆಯಾಗಲಿ ಎಂಬುದು ರೈತರ ಒತ್ತಾಯವಾಗಿದೆ.

ಸರ್ಕಾರಗಳಿಂದ ಬಿಡುಗಡೆಯಾದ ಅನುದಾನ ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ಯಾವುದೇ ರೂಪುರೇಷೆ ಇಲ್ಲದಂತಾಗಿದೆ. ಅಲ್ಲದೆ, ಬಂದ ಹಣ ಯಾವ ರೀತಿ ವಿನಿಯೋಗಿಸಲಾಗುತ್ತಿದೆ. ಕಾರ್ಖಾನೆಯಲ್ಲಿನ ಯಾವ ಯಾವ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ ಎಂಬುದರ ಬಗ್ಗೆ ಮಾಹಿತಿಯೇ ಸಿಗುವುದಿಲ್ಲ.

600 ಕೋಟಿ ರೂ. ಬಿಡುಗಡೆ: ಕಾರ್ಖಾನೆಗೆ ಇದುವರೆಗೂ ಸುಮಾರು 600 ಕೋಟಿ ರೂ. ಹೆಚ್ಚು ಅನುದಾನ ನೀಡಲಾಗಿದೆ. 2020ರಲ್ಲಿ ಸರ್ಕಾರ ಹೊರಡಿಸಿದ ಪತ್ರದಲ್ಲಿ ಕಾರ್ಖಾನೆ ಸುಮಾರು 522 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು ಎಂದು ಹೇಳಿದ್ದರು. ಕಳೆದ ವರ್ಷ ಬಿಜೆಪಿ ಸರ್ಕಾರ 50 ಕೋಟಿ ರೂ. ಘೋಷಣೆ ಮಾಡಿ, 32.50 ಕೋಟಿ ರೂ. ಬಿಡುಗಡೆ ಮಾಡಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರ 50 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಆದರೆ, 522 ಕೋಟಿ ರೂ. ಸರಿಯಾಗಿ ಸದ್ಬಳಕೆಯಾಗದೆ ವ್ಯಾಪಕ ಭ್ರಷ್ಟಾಚಾರದಿಂದ ಎಲ್ಲಿಗೆ ಹೋಯಿತು ಎಂಬುದು ಮಾಹಿತಿ ಇಲ್ಲ. ರೈತ ಮುಖಂಡರು ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಕ್ಯಾರೆ ಎನ್ನುತ್ತಿಲ್ಲ.

ಕಳೆದ ವರ್ಷ 32.50 ಕೋಟಿ ರೂ. ಖರ್ಚು: ಕಳೆದ ವರ್ಷ ಕಾರ್ಖಾನೆಯನ್ನು ಆರಂಭಿಸುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ 50 ಕೋಟಿ ರೂ. ಘೋಷಣೆ ಮಾಡಿತ್ತು. ಅದರಲ್ಲಿ 32.50 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಇದು ಯಂತ್ರಗಳ ದುರಸ್ತಿ, ಸ್ವತ್ಛತೆ, ಬಗಾಸ್‌ ಖರೀದಿ, ಪೈಪ್‌ಲೈನ್‌ ಅಳವಡಿಕೆ, ಕಬ್ಬಿನ ಬಾಕಿ, ಕಂಪನಿಗೆ ಗುತ್ತಿಗೆ ಹಣ, ಸಿಬ್ಬಂದಿಗಳ ವೇತನ ಸೇರಿದಂತೆ ವಿವಿಧ ಉದ್ದೇಶಗಳಿಗೆ ಬಳಸಲಾಗಿದೆ ಎಂದು ಕಾರ್ಖಾನೆ ಅಧಿಕಾರಿಗಳು ಹೇಳುತ್ತಾರೆ. ಆದರೆ, ಕಾರ್ಖಾನೆ ಮಾತ್ರ ಸಮರ್ಪಕವಾಗಿ ಕಬ್ಬು ಅರೆಯಲೇ ಇಲ್ಲ. ಅನುದಾನ ಬಳಕೆಯ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲದಂತಾಗಿದೆ.

50 ಕೋಟಿ ರೂ. ಬಿಡುಗಡೆಗೆ ಅನುಮೋದನೆ: ಪ್ರಸ್ತುತ ಕಾಂಗ್ರೆಸ್‌ ಸರ್ಕಾರ 50 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಪ್ರತೀ ಬಾರಿಯೂ ಅನುದಾನವೂ ಯಂತ್ರಗಳ ದುರಸ್ತಿ ಸೇರಿ ದಂತೆ ವಿವಿಧ ಲೆಕ್ಕಪತ್ರಗಳ ಮೂಲಕ ತೋರಿಸ ಲಾಗುತ್ತಿದೆ. ಆದರೆ, ಪ್ರತೀ ವರ್ಷ ಸರಿಯಾಗಿ ಲೆಕ್ಕಪರಿಶೋಧನೆಯನ್ನೂ ಮಾಡುತ್ತಿಲ್ಲ. ಇದರಿಂದ ಅನು ದಾನದ ಲೆಕ್ಕವೂ ಸರಿಯಾಗಿ ಸಿಗುತ್ತಿಲ್ಲ. ಆದರೆ, ಈ ಬಾರಿ ಅನುದಾನ ಸಮರ್ಪಕವಾಗಿ ಸದ್ಬಳಕೆ ಯಾಗಲಿ ಎಂಬುದು ರೈತರ ಒತ್ತಾಯವಾಗಿದೆ.

ಅನುದಾನ ಸದ್ಬಳಕೆಗೆ ಕ್ರಮ ಅಗತ್ಯ : ಬರುವ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಲು ಕಾರ್ಖಾನೆ ಮುಂದಾಗಬೇಕು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಾಗಿದೆ. ಅನುದಾನ ದುರುಪಯೋಗವಾಗದಂತೆ ಸರ್ಕಾರ ಹಾಗೂ ಜಿಲ್ಲಾಡಳಿತ ರೂಪುರೇಷೆ ಸಿದ್ಧಪಡಿಸಿ, ಕ್ರಮ ವಹಿಸಬೇಕಾಗಿದೆ. ಈಗಾಗಲೇ ಸೆಸ್ಕಾಂಗೆ 41 ಕೋಟಿ ರೂ. ಬಾಕಿ ಇದೆ. ಅಲ್ಲದೆ, 19 ಕೋಟಿ ರೂ. ಆಹಾರ ಸರಬರಾಜು ಇಲಾಖೆಗೆ ನೀಡಬೇಕಾಗಿದೆ. ಆದ್ದರಿಂದ ಬಿಡುಗಡೆಯಾಗುವ 50 ಕೋಟಿ ರೂ. ಕಾರ್ಖಾನೆಯನ್ನು ಸಂಪೂರ್ಣವಾಗಿ ಪುನಶ್ಚೇತನಗೊಳಿಸಿ ಲಾಭದಾಯಕದತ್ತ ಕೊಂಡೊಯ್ಯುವ ಕೆಲಸ ಆಗಬೇಕಾಗಿದೆ.

ಕಾರ್ಖಾನೆಗೆ ದುಡಿಯುವ ಬಂಡವಾಳ ಅಗತ್ಯವಾಗಿದೆ. ಆದ್ದರಿಂದ ಇರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಅಗತ್ಯವಿದೆ. ಅನುದಾನ ಬಳಕೆಯ ಬಗ್ಗೆಯೂ ಅಧಿಕಾರಿಗಳು ನಿಗಾವಹಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕಾರ್ಖಾನೆ ಸುಗಮ ಆರಂಭಕ್ಕೆ ಕ್ರಮ ವಹಿಸಬೇಕಾಗಿದೆ ಎಂದು ರೈತರು ಆಗ್ರಹಿಸಿದ್ದಾರೆ.

-ಎಚ್‌.ಶಿವರಾಜು

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.