
Road Mishap: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ್ಯು
Team Udayavani, Sep 27, 2023, 10:49 AM IST

ಮಂಡ್ಯ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿರುವ ಭೀಕರ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನ ಬೆಂಗಳೂರು – ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ವಂಶಿಕೃಷ್ಣ ಧಾರವಾಡದ ರಘುನಾಥ್ ಭಜಂತ್ರಿ ಮೃತಪಟ್ಟ ದುರ್ದೈವಿಗಳು.
ಹಾಸನ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಬೆಳ್ಳೂರು ಕ್ರಾಸ್ ಬಳಿ ಬರುತ್ತಿದ್ದಂತೆ ಮುಂದೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸದಿಂದ ಕಾರು ನಜ್ಜು-ಗುಜ್ಜಾಗಿದ್ದು, ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಬೆಳ್ಳೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Cauvery Issue: ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISIS ನಂಟಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ: ಯತ್ನಾಳ್ ಆರೋಪ

RSS ವಿರುದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪ: ಸ್ಪಷ್ಟನೆ ನೀಡಿದ ಸಂಘ

BSY: ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡದು: ಬಿಎಸ್ ವೈ

Elephants: 60 ವರ್ಷ ಮೀರಿದ ಆನೆಗಳನ್ನು ಕಾರ್ಯಾಚರಣೆಗೆ ಬಳಸಬೇಡಿ

Elephnat Arjuna: ಅರ್ಜುನ ಆನೆ ಮುಂದೆ ಕಾವಾಡಿಗರ ಕಣ್ಣೀರು