Udayavni Special

ಕಾವೇರಿ ನೀರಾವರಿ ನಿಗಮಕ್ಕೆ ಮುತ್ತಿಗೆ

Team Udayavani, Jul 24, 2019, 2:34 PM IST

mandya-tdy-2

ಮಳವಳ್ಳಿ: ವಿಶ್ವೇಶ್ವರಯ್ಯ ನಾಲೆಯ ಕೊನೆಯ ಭಾಗದ ಬೆಳೆಗಳಿಗೆ ನೀರು ಹರಿಸಿ ಬೆಳೆಗಳನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ತಾಲೂಕಿನ ಕಾಗೇಪುರ ಕಾವೇರಿ ನೀರಾವರಿ ನಿಗಮದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಮಾದು ಮಾತನಾಡಿ, ಕೆಆರ್‌ಎಸ್‌ ನೀರು 2 ತಾಲೂಕಿಗೆ ಸೀಮಿತವಾಗಿದೆ. ಕಾಲುವೆಗಳಿಗೆ ನೀರು ಬಿಟ್ಟರೂ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ಕಟ್ಟು ನೀರಿನ ಪದ್ಧತಿ ನೀರು ಕೊಡುತ್ತೇವೆಂದು ಹೇಳಿದರೂ ಸಮರ್ಪಕವಾಗಿ ನೀರು ಬಿಡದ ಕಾರಣ ಬೆಳೆದಿದ್ದ ಬೆಳೆಗಳು ಒಣಗುತ್ತಿವೆ. ಕಾಲುವೆಗಳಲ್ಲಿ ಹೂಳು ತುಂಬಿರುವ ಪರಿಣಾಮ ಕೊನೆಯ ಭಾಗಕ್ಕೆ ನೀರು ತಲುಪದಿ ದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಜಿದ್ದಿನ ರಾಜಕೀಯ: ಇತ್ತೀಚಿನ ದಿನಗಳಲ್ಲಿ ರಾಜಕೀಯದ ಜಿದ್ದಿನಿಂದಾಗಿ ರೈತರನ್ನೇ ನಾಶ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಚುನಾಯಿತ ಜನಪ್ರತಿನಿಧಿಗಳು ರೈತರ ಹೆಸರನ್ನು ಹೇಳಿಕೊಂಡು ಅಧಿಕಾರ ಹಿಡಿಯುತ್ತಾರೆ. ಆದರೆ ರೈತರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ, ಇಲ್ಲಿನ ರೈತರ ಕೃಷಿಗೆ ನೀರು ಇಲ್ಲದಿದ್ದರೂ ಬೆಂಗಳೂರು ಜನತೆಗೆ ಕುಡಿಯುವ ನೀರನ್ನು ಕೊಡಬೇಕೆಂದು ಹೇಳುತ್ತಾರೆ, ಬೆಂಗಳೂರಿನಲ್ಲಿ ನೀರನ್ನು ವ್ಯಯ ಮಾಡುತ್ತಿದ್ದು, ಬಳಸಿದ ನೀರನ್ನು ಮರುಬಳಕೆ ಮಾಡುವುದರ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು.

ಕೆಲಸ ಕೊಟ್ಟು ವಲಸೆ ತಪ್ಪಿಸಿ: ಮುಂದಿನ ದಿನಗಳಲ್ಲಿ ಕೊನೆ ಭಾಗದ ಅಚ್ಚುಕಟ್ಟು ಪ್ರದೇಶದಿಂದ ನೀರು ಹರಿಸಲು ಪ್ರಾರಂಭಿಸ ಬೇಕು, ಮೂರು ತಿಂಗಳಲ್ಲಿ ಒಣಗಿರುವ ಬೆಳೆಗಳಿಗೆ ಪರಿಹಾರ ನೀಡಬೇಕು, ರಾಜಕೀಯ ಪ್ರವೇಶಕ್ಕೆ ಅವಕಾಶ ಕೊಡದೇ ರೈತ ಕೂಲಿಕಾರರನ್ನು ರಕ್ಷಿಸುವ ದೃಷ್ಟಿಯಿಂದ ನೀರು ನೀಡಬೇಕು, ಪಿಕಪ್‌ ನಾಲೆಗಳು, ಉಪ ಕಾಲುವೆಗಳು, ನೀರಕ್ಕಲುಗಳು ತೋಳ್ಗಾಲುವೆ ಗಳಲ್ಲಿ ಬೆಳೆದಿರುವ ಗಿಡಗಳನ್ನು ಮತ್ತು ತುಂಬಿರುವ ಮಣ್ಣನ್ನು ಉದ್ಯೋಗ ಖಾತ್ರಿ ಕಾಯ್ದೆಯಡಿ ತೆಗೆಸುವುದರ ಮೂಲ ಉದ್ಯೋಗ ಕಲ್ಪಿಸಿ ವಲಸೆ ತಪ್ಪಿಸಬೇಕೆಂದು ಒತ್ತಾಯಿಸಿದರು.

ನೀರು ಅನಿವಾರ್ಯ: ಸಿಐಟಿಯೂ ಮುಖಂಡ ಟಿ.ಎಲ್ ಕೃಷ್ಣೇಗೌಡ ಮಾತನಾಡಿ, ದಿವಂಗತ ಕೆ.ನಾಗೇಗೌಡರು ನೀರಾವರಿ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೈಪ್‌ ಮೂಲಕ ಕೊನೆಯ ಭಾಗಕ್ಕೆ ಹರಿಸುವ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದ್ದರು. ಆಯೋಜನೆ ಕಾರ್ಯರೂಪಕ್ಕೆ ಬರುವಂತೆ ಅಧಿಕಾರಿಗಳು ಗಮನಹರಿಸಬೇಕು. ಮಳವಳ್ಳಿ, ಮದ್ದೂರು ತಾಲೂಕಿಗೆ ನೀರು ತಲುಪುವಷ್ಟರಲ್ಲಿ ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ ತಾಲೂಕಿನ ರೈತರು ಮೂರು ಸಲ ನೀರನ್ನು ಹಾಯಿಸಿಕೊಂಡಿರುತ್ತಾರೆ. ಇಲ್ಲಿನ ಜನರು ಎಚ್ಚೆತ್ತುಕೊಂಡು ಪ್ರತಿಭಟನೆಯ ಮೂಲಕ ನೀರನ್ನು ಪಡೆಯುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ನಾಗರಾಜು, ಬಸವರಾಜು, ಶಿವಮಲ್ಲಯ್ಯ, ಹನುಮೇಶ್‌, ಪಾಪಣ್ಣ, ಪ್ರಸನ್ನ, ದೊಡ್ಡಮರೀ ಗೌಡ, ಆನಂದ್‌ ಇತರರು ಉಪಸ್ಥಿತರಿದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

pub-g

ಭಾರತದಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಿದ ಪಬ್ ಜಿ

ನೆರೆ-ಪ್ರವಾಹ ಪರಿಹಾರ ನೀಡಿಕೆಯಲ್ಲಿ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ-ಯತ್ನಾಳ

ನೆರೆ-ಪ್ರವಾಹ ಪರಿಹಾರ ನೀಡಿಕೆಯಲ್ಲಿ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ-ಯತ್ನಾಳ

ಲೋಕಲ್‌ ರೈಲುಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಆ್ಯಪ್‌, ಕಲರ್‌ ಕೋಡಿಂಗ್‌:  ಸರಕಾರ ಚಿಂತನೆ

ಲೋಕಲ್‌ ರೈಲುಗಳಲ್ಲಿ ಜನ ದಟ್ಟಣೆ ನಿಯಂತ್ರಣಕ್ಕೆ ಆ್ಯಪ್‌, ಕಲರ್‌ ಕೋಡಿಂಗ್‌:  ಸರಕಾರ ಚಿಂತನೆ

.01

ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಬರ್ಬರ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

.01

ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಬರ್ಬರ ಹತ್ಯೆ

mandya-tdy-1

ವಲಸಿಗರ ಕೈಹಿಡಿದ ನರೇಗಾ

ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ

ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ

ಮಂಡ್ಯ: ಮತದಾರರ ಸೆಳೆಯಲು ಭಾರೀ ಕಸರತು! ನಗದು, ಚಿನ್ನ, ಬೆಳ್ಳಿಯ ವಸ್ತುಗಳ ಉಡುಗೊರೆ?

ಮಂಡ್ಯ: ಮತದಾರರ ಸೆಳೆಯಲು ಭಾರೀ ಕಸರತು! ನಗದು, ಚಿನ್ನ, ಬೆಳ್ಳಿಯ ವಸ್ತುಗಳ ಉಡುಗೊರೆ?

ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

MUST WATCH

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

ಹೊಸ ಸೇರ್ಪಡೆ

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

pub-g

ಭಾರತದಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಿದ ಪಬ್ ಜಿ

ನೆರೆ-ಪ್ರವಾಹ ಪರಿಹಾರ ನೀಡಿಕೆಯಲ್ಲಿ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ-ಯತ್ನಾಳ

ನೆರೆ-ಪ್ರವಾಹ ಪರಿಹಾರ ನೀಡಿಕೆಯಲ್ಲಿ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ-ಯತ್ನಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.