14ಕ್ಕೆ ವಿಜೃಂಭಣೆಯ ವೈರಮುಡಿ ಉತ್ಸವ: ಪುಟ್ಟರಾಜು

Team Udayavani, Mar 5, 2022, 1:31 PM IST

14ಕ್ಕೆ ವಿಜೃಂಭಣೆಯ ವೈರಮುಡಿ ಉತ್ಸವ: ಪುಟ್ಟರಾಜು

ಪಾಂಡವಪುರ: ಪ್ರಸಿದ್ಧ ಬೇಬಿಬೆಟ್ಟದ ಜಾತ್ರೆ, ವೈರ ಮುಡಿ ಬ್ರಹ್ಮೋತ್ಸವ ನಡೆಸಲು ಅವಕಾಶ ನೀಡುವಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕೊರೊನಾದಿಂದ ತಮ್ಮಲ್ಲಿದ್ದ ಆತಂಕ ದೂರ ಮಾಡಿದರು ಎಂದು ಮಾಜಿ ಸಚಿವ, ಶಾಸಕ ಸಿ.ಎಸ್‌.ಪುಟ್ಟ ರಾಜು ಹೇಳಿದರು.

ತಾಲೂಕಿನ ಬೇಬಿಬೆಟ್ಟದ ಜಾತ್ರೆ ಪ್ರಯುಕ್ತ ನಡೆದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿ, ಮಾ.14ರಂದು ವೈರಮುಡಿ ಬ್ರಹ್ಮೋತ್ಸವಕ್ಕೆ ಖುದ್ದು ತಾವೇ ಆಗಮಿಸಿ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಹಾಗಾಗಿ, ಈ ಬಾರಿಯ ವೈರಮುಡಿ ಉತ್ಸವ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಹೇಳಿದರು.

155 ಜೋಡಿ ಸರಳ ವಿವಾಹ: 2004ರಲ್ಲಿ ಶಾಸಕನಾದ ಬಳಿಕ 2006ರಲ್ಲಿ ಬೇಬಿಬೆಟ್ಟದ ಜಾತ್ರೆ ಆರಂಭಿಸಿ, ಮೊದಲ ಜಾತ್ರೆಯಲ್ಲಿ ಸರಳ ಸಾಮೂಹಿಕ ವಿವಾಹ ಆರಂಭಿಸಿದ್ದೆವು. ಆಗ ನನ್ನ ಮಗಳು, ನನ್ನ ಕುಟುಂಬದ 12 ಮಂದಿಯ ಜೊತೆಗೆ 155 ಜೋಡಿ ಸರಳ ವಿವಾಹವನ್ನು ನಡೆಸಿದ್ದೆವು. ಅಲ್ಲಿಂದ ಜಾತ್ರೆ ಯಲ್ಲಿ ಸರಳ ವಿವಾಹ ನಡೆಸಲಾಗುತ್ತಿದೆ. ಈ ಬಾರಿ6 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿವೆ ಎಂದು ತಿಳಿಸಿದರು.

10 ಕೋಟಿ ರೂ. ಅನುದಾನ: ಬೇಬಿಬೆಟ್ಟದ ಅಭಿವೃದ್ಧಿಗೆ ಈಗಾಗಲೇ 10 ಕೋಟಿ ರೂ. ಅನುದಾನ ಬಿಡುಗಡೆ ಆಗಿದೆ. ಟೆಂಡರ್‌ ಪ್ರಕ್ರಿಯೆಯು ಮುಗಿದಿದೆ. ಜಾತ್ರೆ ಮುಗಿದ ಎರಡ್ಮೂರು ದಿನಗಳಲ್ಲಿ ಜಾತ್ರಾ ಮಾಳದ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು. ಜಾತ್ರಾ ಮೈದಾನದಲ್ಲಿರುವ ಎಲ್ಲಾ ಆಲದ ಮರ ಗಳಿಗೂ ಹನಿನೀರಾವರಿ ಮೂಲಕ ನೀರುಣಿಸಲಾಗು ವುದು. ಜಾತ್ರೆ ಮೈದಾನದಲ್ಲಿ ಬೃಹತ್‌ ಶಿವಲಿಂಗ, ಶಿವನಮೂರ್ತಿ ಸ್ಥಾಪನೆ, ಮಹದೇಶ್ವರಸ್ವಾಮಿದೇವಸ್ಥಾನ ಜೀರ್ಣೋದ್ಧಾರಗೊಳಿಸಲಾಗುವುದು ಎಂದು ಭವರಸೆ ನೀಡಿದರು.

ಜಾತ್ರಾ ಸಮಿತಿಯಿಂದ 55 ಜೊತೆ ಎತ್ತುಗಳಿಗೆ ಚಿನ್ನದ ಬಹುಮಾನ ನೀಡಲಾಗುತ್ತಿದೆ. ರಾಸುಗಳ ಬಹು ಮಾನ ಆಯ್ಕೆ ಪ್ರಕ್ರಿಯೆಯೂ ಪಾರದರ್ಶಕವಾಗಿರಲಿದೆ ಎಂದು ತಿಳಿಸಿದರು. ಡಾ.ತ್ರಿನೇತ್ರ ಮಹಂತಶಿವಯೋಗಿಸ್ವಾಮೀಜಿಮಾತನಾಡಿದರು. ನವ ಜೋಡಿಗಳಿಗೆ ಶಾಸಕ ಸಿ.ಎಸ್‌.ಪುಟ್ಟರಾಜು, ಪತ್ನಿ ನಾಗಮ್ಮ, ಡಾ.ತ್ರಿನೇತ್ರ ಮಹಂತಸ್ವಾಮೀಜಿ, ಶಿವಬಸವಸ್ವಾಮೀಜಿ, ಅವ್ವೆರ ಹಳ್ಳಿ ಸ್ವಾಮಿಜಿ ಮಾಂಗಲ್ಯ ವಿತರಣೆ ಮಾಡಿದರು. ಜಿಪಂ ಮಾಜಿ ಸದಸ್ಯ ಸಿ.ಅಶೋಕ್‌, ಮನ್ಮುಲ್‌ಅಧ್ಯಕ್ಷ ಬಿ.ಆರ್‌.ರಾಮಚಂದ್ರು, ಪಿಕಾರ್ಡ್‌ಬ್ಯಾಂಕ್‌ ಅಧ್ಯಕ್ಷ ಎಂ.ಸಿ.ಯಶವಂತ್‌ಕುಮಾರ್‌,ಟಿಎಪಿಸಿಎಂಎಸ್‌ ಅಧ್ಯಕ್ಷ ಡಿ.ಶ್ರೀನಿವಾಸ್‌, ಪುರಸಭೆ ಅಧ್ಯಕ್ಷೆ ಅರ್ಚನಾಚಂದ್ರು, ಉಪಾಧ್ಯಕ್ಷೆ ಶ್ವೇತಾಉಮೇಶ್‌, ಗುಮ್ಮನಹಳ್ಳಿ ಗ್ರಾಪಂ ಅಧ್ಯಕ್ಷರಾದಭವಾನಿ ಸುನೀಲ್‌, ಉಪಾಧ್ಯಕ್ಷ ವರದರಾಜು, ಡಿಂಕಾ ಗ್ರಾಪಂ ಅಧ್ಯಕ್ಷೆ ರತಿಪಾಲಾಕ್ಷ, ಟಿ.ಎಸ್‌.ಛತ್ರ ಗ್ರಾಪಂ ಅಧ್ಯಕ್ಷೆ ಪೂಜಾ, ಚಿನಕುರಳಿ ಗ್ರಾಪಂ ಅಧ್ಯಕ್ಷ ಮಹಮದ್‌ ಇಮಿ¤ಯಾಜ್‌ ಪಾಷ, ನಾರಾಯಣಪುರ ಗ್ರಾಪಂ ಅಧ್ಯಕ್ಷ ನವೀನ್‌, ಎ.ಸಿ. ಶಿವಾನಂದ ಮೂರ್ತಿ, ತಹಶೀಲ್ದಾರ್‌ ಪ್ರಮೋದ್‌ ಎಲ್‌.ಪಾಟೀಲ್‌, ತಾಪಂ ಇಒ ಆರ್‌.ಪಿ.ಮಹೇಶ್‌, ಜಾತ್ರಾ ಸಮಿತಿ ಅಧ್ಯಕ್ಷ ನಾಗಣ್ಣ, ಅಮರಾವತಿ ಚಂದ್ರಶೇಖರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.