ಮೇಲುಕೋಟೆಯಲ್ಲಿ ಸರಳ ರಾಜಮುಡಿ ಕಾರ್ಯಕ್ರಮ

Team Udayavani, Nov 18, 2020, 3:31 PM IST

mandya-tdy-2

ಮೇಲುಕೋಟೆ: ನ.24ರಂದು ನಡೆಯ ಬೇಕಾಗಿದ್ದ ಮೇಲುಕೋಟೆ ಶ್ರೀ ಚೆಲುವ ನಾರಾಯಣ ಸ್ವಾಮಿ ಅಷ್ಟ ತೀರ್ಥೋತ್ಸವ ಮತ್ತು ತೊಟ್ಟಿಲಮಡು ಜಾತ್ರಾ ಮಹೋತ್ಸ ವವನ್ನು ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ನಿರ್ಬಂಧಿಸಿ ಆದೇಶಿಸಿದ್ದಾರೆ.

ನ.22ರಂದು ರಾತ್ರಿ ನಡೆಯುವ ರಾಜಮುಡಿ ಕಿರೀಟ ಧಾರಣ ಮಹೋತ್ಸವ ಹಾಗೂ 10 ದಿನಗಳ ಬ್ರಹ್ಮೋತ್ಸವ ಕಾರ್ಯಕ್ರಮಗಳನ್ನು ದೇವಾಲಯದಒಳ ಪ್ರಾಕಾರದಲ್ಲಿ ನಡೆಸಲು ಸೂಚನೆ ನೀಡಿದ್ದಾರೆ. ದೇವಾಲಯದ ಸಿಇಒ ಸಲ್ಲಿಸಿದ ವರದಿಯಾಧರಿಸಿ ಕೊರೊನಾ ಹಿನ್ನೆಲೆಯಲ್ಲಿ ಅಷ್ಟ ತೀರ್ಥೋತ್ಸವವನ್ನು ನಿರ್ಬಂಧಿಸಿ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಭಕ್ತರು ಸಹಕಾರ ನೀಡಿ: ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ರಾಜಮುಡಿ ಬ್ರಹ್ಮೋತ್ಸವ 27ರವರೆಗೆ ನಡೆಯಲಿದ್ದು, ಡೀಸಿ ಆದೇಶದಂತೆ ಎಲ್ಲ ಉತ್ಸವಗಳನ್ನೂ ದೇವಾಲಯದ ಒಳಪ್ರಕಾರದಲ್ಲಿ ನಡೆಸಲಾಗುತ್ತದೆ. ರಾಜಮುಡಿ ಕಿರೀಟವನ್ನು 22ರಂದು ಜಿಲ್ಲಾ ಖಜಾನೆಯಿಂದ ಪೊಲೀಸ್‌ ಭದ್ರತೆಯಲ್ಲಿ ತಂದು ಬ್ರಹ್ಮೋತ್ಸವ ಮುಗಿದ ನಂತರ 28ರಂದು ಜಿಲ್ಲಾ ಖಜಾನೆಗೆ ಮರಳಿಸಲಾಗುತ್ತದೆ. ರಾಜಮುಡಿ ಉತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಗುತ್ತದೆ. ಭಕ್ತರು ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.

ರಾಜಮುಡಿ ಕಾರ್ಯಕ್ರಮಗಳು: ನ.18ರಂದು ರಕ್ಷಾ ಬಂಧನ ಧ್ವಜಪ್ರತಿಷ್ಠೆ, 19ರಂದು 1ನೇ ತಿರುನಾಳ್‌ ಧ್ವಜಾ ರೋಹಣ, ತಿರುಪ್ಪರೈ, 20ರಂದು 2ನೇತಿರುನಾಳ್‌ ಶೇಷವಾಹನ,21ರಂದು3ನೇ ತಿರುನಾಳ್‌ ಚಂದ್ರ ಮಂಡಲ ವಾಹನ, 22 ರಂದು ರಾಜಮುಡಿ ಉತ್ಸವ, 23ರಂದು 5ನೇ ತಿರುನಾಳ್‌ ಗರುಡವಾಹನ, 24 ರಂದು ಆನೆ ವಸಂತ, 25ರಂದು 7ನೇ ತಿರುನಾಳ್‌ ಸಾಂಕೇತಿಕ ರಥೋತ್ಸವ, 26 ರಂದು ಸಂಧಾನ ಸೇವೆ, 27ರಂದು 9ನೇ ತಿರುನಾಳ್‌ ಉತ್ಥಾನದ್ವಾದಶಿ ಪುಷ್ಪ ಬೃಂದಾವನೋತ್ಸವ, 28 ಪುಷ್ಪಯಾಗ ಹನುಮಂತವಾಹನ ನಡೆಯಲಿದೆ. ಎಲ್ಲ ಉತ್ಸವಗಳೂ ದೇವಾಲಯದ ಒಳಪ್ರಾಕಾರದಲ್ಲೇ ‌ನಡೆಯಲಿದೆ ಎಂದು ದೇವಾಲಯದ ಅಧಿಕಾರಿ ಮಂಗಳಮ್ಮ ತಿಳಿಸಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.