ಯುವಕರಿಗೆ ಸರ್‌ ಎಂ. ವಿಶ್ವೇಶ್ವರಯ್ಯ ಪ್ರೇರಣೆ

Team Udayavani, Sep 16, 2019, 3:14 PM IST

mandya-tdy-1

ಮಂಡ್ಯದ ಕಾವೇರಿ ವನದಲ್ಲಿರುವ ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಪುಷ್ಪಮಾಲೆ ಹಾಕಿ ಜಿಲ್ಲಾ ಬ್ರಾಹ್ಮಣ ಸಭಾ ಹಾಗೂ ಎಂಜಿನಿಯರ್ ಅಸೋಸಿಯೇಷನ್‌ನಿಂದ ಸರ್‌ ಎಂ.ವಿಶ್ವೇಶ್ವರಯ್ಯ ದಿನಾಚರಣೆ ಆಚರಿಸಲಾಯಿತು.

ಮಂಡ್ಯ: ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ಸಕ್ಕರೆ ಜಿಲ್ಲೆ ಅವುಗಳಿಂದ ಮುಕ್ತಿ ಪಡೆಯಲು ಸರ್‌ ಎಂ.ವಿಶ್ವೇಶ್ವರಯ್ಯನವರ ದೂರದೃಷ್ಟಿ ಯೋಜನೆಗಳನ್ನು ಇಂದಿನವರು ಪ್ರೇರಣೆಯಾಗಿಸಿಕೊಳ್ಳಬೇಕು ಎಂದು ಪತ್ರಕರ್ತ ಡಿ.ಎನ್‌. ಶ್ರೀಪಾದು ಬಣ್ಣಿಸಿದರು.

ಮಂಡ್ಯ ಜಿಲ್ಲಾ ಬ್ರಾಹ್ಮಣ ಸಭಾ ಹಾಗೂ ಎಂಜಿನಿಯರ್ ಅಸೋಸಿಯೇಷನ್‌ ವತಿಯಿಂದ ನಡೆದ ಸರ್‌ ಎಂ.ವಿಶ್ವೇಶ್ವರಯ್ಯನವರ 158ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ ನಾಡಿ, ನಾಲ್ವಡಿ ಹಾಗೂ ವಿಶ್ವೇಶ್ವರಯ್ಯವರ ಶ್ರಮದ ಫಲವಾಗಿ ಬರಡಾಗಿದ್ದ ನಾಡು ಬಂಗಾರವಾಯಿತು. ಆದರೆ, ಇಂದು ಹಲವಾರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದೆ. ಅದರಿಂದ ಮುಕ್ತರಾಗಲು ವಿಶ್ವೇಶ್ವರಯ್ಯ ನವರ ಕಾರ್ಯ ದಕ್ಷತೆಯನ್ನು ಪ್ರೇರಣೆಯಾಗಿಸಿ ಕೊಳ್ಳಬೇಕು ಎಂದು ಹೇಳಿದರು.

ಮಂಡ್ಯ ಜಿಲ್ಲೆಯನ್ನು ಇಡೀ ಜಗತ್ತಿಗೆ ಪರಿಚಯ ಮಾಡಿಕೊಟ್ಟರು. ವಿಶ್ವೇಶ್ವರಯ್ಯನವರು ಪ್ರತಿ ನಿಮಿಷ, ಪ್ರತಿ ವಸ್ತುವಿಗೂ ಅಪಾರ ಬೆಲೆ ನೀಡುತ್ತಿದ್ದರು. ಅವರ ಆದರ್ಶಗಳಲ್ಲಿ ಕೆಲವನ್ನಾದರೂ ನಾವು ಪಾಲಿಸಬೇಕು. ಸರ್‌ ಎಂ.ವಿ. ಜಗತ್ತಿಗೆ ಮಾದರಿಯಾಗಿ 102 ವರ್ಷ ತುಂಬು ಜೀವನ ನಡೆಸಿದರು. ಪ್ರಸ್ತುತ ಅವರ 158ನೇ ವರ್ಷದ ಜನ್ಮದಿನೋತ್ಸವವನ್ನು ಆಚರಿಸುತ್ತಿದ್ದೇವೆ. ವಿಶ್ವೇಶ್ವರಯ್ಯನವರು ವಿಶ್ವವ್ಯಾಪ್ತಿಯಾದವರು. ಲಂಡನ್‌ನಲ್ಲಿ ಅವರ ಹೆಸರಿನಲ್ಲಿ ಎಂಜಿನಿಯರ್ ಡೇ ಆರಂಭಿಸಿ, ಇಡೀ ವಿಶ್ವದಲ್ಲಿ ಅವರ ಜನ್ಮದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಮಾಜಿ ಶಾಸಕ ಜಿ.ಬಿ.ಶಿವಕುಮಾರ್‌ ಮಾತನಾಡಿ, ಸರ್‌ ಎಂ. ವಿಶ್ವೇಶ್ವರಯ್ಯನವರು ಜಿಲ್ಲೆಯ ಅನ್ನದಾತರು. ಅವರ ದೂರದೃಷ್ಟಿ ದೂರಾಲೋಚನೆ, ಸಮಯಪ್ರಜ್ಞೆ, ಶಿಸ್ತು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿವೆ. ಜಿಲ್ಲೆಯ ಜನತೆ ಉತ್ತಮ ಜೀವನ ನಡೆಸಲು ವಿಶ್ವೇಶ್ವರಯ್ಯನವರ ದೂರದೃಷ್ಟಿ ಕಾರಣ. ಅನೇಕ ಕಾರ್ಖಾನೆಗಳು, ಬ್ಯಾಂಕ್‌ಗಳನ್ನು ಸ್ಥಾಪಿಸಿದ ಕೀರ್ತಿ ಅವರದು. ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟೆ ನಿರ್ಮಿಸಿದರು. ಅವರ ಕೀರ್ತಿ ವಿಶ್ವದಾದ್ಯಂತ ಪಸರಿಸಿದೆ. ಮುಂದಿನ ಪೀಳಿಗೆಗೆ ಅವರ ದೂರದೃಷ್ಟಿ, ದೂರಾಲೋಚನೆ, ಶಿಸ್ತು, ಸಮಯಪಾಲನೆ ಮಾರ್ಗದರ್ಶನವಾಗಬೇಕು. ಅವರಂತೆ ರಾಜ್ಯಕ್ಕೆ ಕೊಡುಗೆಯಾಗಬೇಕು ಎಂದು ಹೇಳಿದರು.

ಬ್ರಾಹ್ಮಣಸಭಾದಿಂದ ಸರ್‌ ಎಂ.ವಿ. ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬ್ರಾಹ್ಮಣ ಸಭಾ ಜಿಲ್ಲಾಧ್ಯಕ್ಷ ಬೆಳ್ಳೂರು ಶಿವರಾಂ, ಉಪಾಧ್ಯಕ್ಷ ಬಿ.ಆರ್‌.ಸೀತಾರಾಮಯ್ಯ, ಕಾರ್ಯದರ್ಶಿ ಶಂಕರ ನಾರಾಯಣಶಾಸ್ತ್ರ, ಖಜಾಂಚಿ ಮಮತಾ ರಮೇಶ್‌, ಇಂಜಿನಿಯರ್ ಅಸೋಸಿಯೇಷನ್‌ ಬೋರೇಗೌಡ, ಕೆ.ಎಂ.ನಾಗರಾಜು, ಹರ್ಷ, ಕೆಂಪೇಗೌಡ, ಬಿ.ಸಿ.ಸುರೇಶ್‌, ಹೆಚ್.ಎಸ್‌.ನಾಗರಾಜು, ಎಂ.ಕೆ.ತಮ್ಮಣ್ಣ, ಗೋಪನಹಳ್ಳಿ ಕೆಂಪರಾಜು, ಜಯರಾಮು ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.