ಶಾಸಕ ಪುಟ್ಟ ರಾಜು ಗೃಹ ಕಚೇರಿಗೆ ಕಲ್ಲು

ಕಿಡಿಗೇಡಿಗಳ ದುಷ್ಕೃತ್ಯ „ ಕಿಟಕಿ ಗಾಜು ಜಖಂ „ ಬೈಕ್‌ ಶೋ ರೂಂ, ಪೆಟ್ರೋಲ್‌ ಬಂಕ್‌ಗೆ ಕಲ್ಲು ಹೊಡೆದ ದುಷರ್ಮಿಗಳು

Team Udayavani, Oct 9, 2021, 4:30 PM IST

ಶಾಸಕ ಪುಟ್ಟ

ಪಾಂಡವಪುರ: ಮದ್ಯದ ಅಮಲಿನಲ್ಲಿದ್ದ ಕೆಲವು ಕಿಡಿಗೇಡಿ ಯುವಕರು, ಪಟ್ಟಣದ ಕೃಷ್ಣನಗರ ಮೊದಲನೇ ಹಂತದಲ್ಲಿರುವ ಶಾಸಕ ಸಿ.ಎಸ್‌.ಪುಟ್ಟರಾಜು ಅವರ ಗಾಜು ಹಾಗೂ ಸ್ಕೂಟರ್‌ ಶೋ ರೂಂ, ಪೆಟ್ರೋಲ್‌ ಬಂಕ್‌, ಪೊಲೀಸ್‌ ಠಾಣೆ ಮುಂದೆ ನಿಲ್ಲಿಸಲಾಗಿದ್ದ ವಾಹನಗಳ ಗ್ಲಾಸ್‌ಗಳಿಗೆ ಕಲ್ಲು ತೂರಿ ಜಖಂಗೊಳಿಸಿದ್ದು, ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಅಳವಡಿಸಿದ್ದ ಫ್ಲೆಕ್ಸ್‌ಗಳನ್ನು ಹರಿದು ಹಾಕಿರುವ ಘಟನೆ ಗುರುವಾರ ರಾತ್ರಿ 11ರ ಸಮಯದಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗಿದೆ.

ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ: ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್‌ವೊಂದರಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ತಿರುಗುವ ಇಬ್ಬರು ದುಷ್ಕರ್ಮಿಗಳು ರಸ್ತೆ ಬದಿಯಲ್ಲಿ ನಿಂತಿರುವ ಕಾರು ಹಾಗೂ ಬಸ್‌ನ ಕಿಟಕಿ ಗಾಜಿಗೆ ಕಲ್ಲು ಎಸೆದು ಪುಡಿ ಮಾಡಿದ್ದಾರೆ. ಅಲ್ಲಿಂದ ಮುಂದೆ ಸಾಗಿ ಬೈಕ್‌ ಶೋ ರೂಂ ಕಟ್ಟಡದ ಕಿಟಕಿ, ರಿಲಯನ್ಸ್‌ ಪೆಟ್ರೋಲ್‌ ಬಂಕ್‌ಗಳಿಗೆ ಕಲ್ಲು ಎಸೆದು ಹಾನಿ ಮಾಡಿದ್ದಾರೆ. ಶಾಸಕ ಸಿ.ಎಸ್‌.ಪುಟ್ಟರಾಜು ಅವರ ಗೃಹ ಕಚೇರಿ ಮೇಲೂ ಕಲ್ಲು ತೂರಾಟ ನಡೆಸಿದ್ದು, ಮೊದಲ ಅಂತಸ್ತಿನ ಕಿಟಕಿ ಗಾಜು ಪುಡಿಯಾಗಿದೆ.

ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು: ಪಟ್ಟಣದ ತಾಲೂಕು  ಕಚೇರಿ ಹಾಗೂ ಐದು ದೀಪ ವೃತ್ತದ ಬಳಿ ಶಾಸಕ ಪುಟ್ಟರಾಜು ಅವರ ಹುಟ್ಟು ಹಬ್ಬದ ಪ್ರಯುಕ್ತಅಳವಡಿಸಲಾಗಿದ್ದ ಫ್ಲೆಕ್ಸ್‌ಗಳನ್ನು ಸಂಪೂರ್ಣ ಹರಿದುಬಿಸಾಡಲಾಗಿದ್ದು, ವಿಚಾರ ತಿಳಿದ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರು ಶಾಸಕರ ಕಚೇರಿಗೆ ತೆರಳಿ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಪೊಲೀಸರು ಶಾಸಕ ಸಿ.ಎಸ್‌.ಪುಟ್ಟರಾಜು ಅವರ ಗೃಹ ಕಚೇರಿಗೆ ತೆರಳಿ ಮಾಹಿತಿ ಕಲೆಹಾಕಿದ್ದಾರೆ. ಸಿಸಿಟಿವಿ ಕ್ಯಾಮೆರಾ ಮೂಲಕ ಕಿಡಿಗೇಡಿಗಳ ಚಹರೆ ಪತ್ತೆ ಹಚ್ಚಲಾಗಿದ್ದು, ಆರೋಪಿಗಳ ಪಾಲಕರಾದ ರಾಮಲಿಂಗ ಹಾಗೂ ನಾಗರಾಜು ಅವರನ್ನು ಠಾಣೆಗೆ ಕರೆತಂದು ವಿಚಾರಿಸಲಾಗುತ್ತಿದೆ.ಆರೋಪಿಗಳಾದ ವೆಂಕಟೇಶ್‌ ಮತ್ತು ದುಷ್ಯಂತ್‌ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:- ಶೀಘ್ರವೇ ಸರ್ಕಾರಿ ನೌಕರಿಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಪ್ರಮೋದ್ ಸಾವಂತ್

ಪೊಲೀಸರು ಕ್ರಮ ಕೈಗೊಳ್ಳುತ್ತಾರೆ: ಪುಟ್ಟ ರಾಜು ಘಟನೆ ಕುರಿತಂತೆ ಶಾಸಕ ಸಿ.ಎಸ್‌.ಪುಟ್ಟರಾಜು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಯಾರೋ ಕಿಡಿಗೇಡಿಗಳು ಬಸ್‌, ಕಾರು, ಮೊಬೈಲ್‌ ಅಂಗಡಿ ಸೇರಿದಂತೆ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನಮ್ಮ ಮನೆ ಮೇಲೂ ಕಲ್ಲು ತೂರಿದ್ದಾರೆ. ಇದು ರಾಜಕೀಯ ಪ್ರೇರಿತವಲ್ಲ. ಕಿಡಿಗೇಡಿಗಳು ಎಲ್ಲಾ ಕಡೆ ಗಲಾಟೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಆತಂಕಕ್ಕೊಳಗಾಗದೇ ಶಾಂತಿ ಕಾಪಾಡುವಂತೆ ಮನವ ಮಾಡಿದ್ದಾರೆ.

ರಾಜಕೀಯ ಪ್ರೇರಿತವಲ್ಲ: ಅಶೋಕ್‌ ಘಟನೆ ಸಂಬಂಧ ಶಾಸಕ ಪುಟ್ಟರಾಜು ಅವರ ಅಣ್ಣನ ಮಗ ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ಅಶೋಕ್‌, ಕಾರ್ಯಕರ್ತರನ್ನು ಸಮಾಧಾನಪಡಿಸಿ ಮಾತನಾಡಿದ ಅವರು, ಈ ಘಟನೆ ರಾಜಕೀಯ ಪ್ರೇರಿತವಾಗಿಲ್ಲ. ಕಿಡಿಗೇಡಿಗಳು ಕುಡಿದ ಅಮಲಿನಲ್ಲಿ ಮಾಡಿರುವ ಕೃತ್ಯವಾಗಿದೆ. ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಬಾರದು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.