ಸುಮಲತಾರ ಗೆಲ್ಲಿಸಿ ಅಂಬಿ ಮೇಲಿನ ಪ್ರೀತಿ ಉಳಿಸಿಕೊಳ್ಳಿ

Team Udayavani, Apr 4, 2019, 3:00 AM IST

sumala-gell

ಪಾಂಡವಪುರ: ಜಿಲ್ಲೆಯ ಜನ ಪ್ರಬುದ್ಧರು ಹಾಗೂ ಹೃದಯವಂತರು. ಅಂಬರೀಶ್‌ ಅಣ್ಣ ಜಿಲ್ಲೆಯ ಜನರ ಮೇಲಿಟ್ಟಿರುವ ಪ್ರೀತಿ ವಿಶ್ವಾಸ ಉಳಿಸಿಕೊಳ್ಳಲು ಸುಮಲತಾ ಅಂಬರೀಶ್‌ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಅವರನ್ನು ಗೆಲ್ಲಿಸುವುದು ನಮ್ಮ ಧರ್ಮ ಎಂದು ನಟ ಯಶ್‌ ಮನವಿ ಮಾಡಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಪರ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿ ಮತ ಪ್ರಚಾರದಲ್ಲಿ ಮಾತನಾಡಿದ ಅವರು, ಸುಮಲತಾ ಅವರು ಅಂಬರೀಶ್‌ ಅಣ್ಣನವರ ಧರ್ಮಪತ್ನಿ. ಜಿಲ್ಲೆಯ ಸೊಸೆ.

ಜಿಲ್ಲೆಯ ಜನತೆ ಸುಮಲತಾ ಅವರನ್ನು ಗೆಲ್ಲಿಸುವುದು ಅಂಬರೀಶ್‌ ಅಣ್ಣನ್ನ ಗೆಲ್ಲಿಸಿದಂತೆ. ಜಿಲ್ಲೆಯ ಜನರ ಸೇವೆ ಮಾಡಲು ಜನತೆ ಸುಮಲತಾ ಅವರಿಗೊಂದು ಅವಕಾಶ ಮಾಡಿಕೊಡಬೇಕು. ಮಂಡ್ಯದ ಹೆಣ್ಣು ಮಗಳ ಶಕ್ತಿ ಇಂಡಿಯಾದಲ್ಲಿ ಪ್ರದರ್ಶನವಾಗಬೇಕು. ಅದನ್ನು ಜಿಲ್ಲೆಯ ಜನತೆ ತೋರಿಸಬೇಕು ಎಂದು ಮನವಿ ಮಾಡಿದರು.

ಜನರಲ್ಲಿ ಗೊಂದಲ ಸೃಷ್ಟಿಸುವುದಕ್ಕಾಗಿ ಸುಮಲತಾ ಅವರೊಂದಿಗೆ ಇನ್ನೂ ಮೂರು ಜನ ಸುಮಲತಾ ಎಂಬ ಹೆಸರಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಜಿಲ್ಲೆಯ ಜನರು ಬುದ್ದಿವಂತರು ಎನ್ನುವುದು ಅವರಿಗೆ ಗೊತ್ತಿಲ್ಲ. ಎಷ್ಟೇ ಜನ ಸುಮಲತಾ ಅವರನ್ನು ನಿಲ್ಲಿಸಿದರೂ ಜಿಲ್ಲೆಯ ಜನತೆ ಸುಮಲತಾ ಅಂಬರೀಶ್‌ ಅವರಿಗೆಯೇ ಮತ ಹಾಕಲಿದ್ದಾರೆ.

ಚುನಾವಣೆಯ ಇವಿಎಂ ಯಂತ್ರದಲ್ಲಿ ಕ್ರಮ ಸಂಖ್ಯೆ 20ರ ಕಹಳೆ ಊದುತ್ತಿರುವ ರೈತನ ಗುರುತಿಗೆ ಮತ ನೀಡಬೇಕು ಎಂದು ಕೋರಿದರು. ರೈತನಾಯಕಿ ಸುನೀತಾಪುಟ್ಟಣ್ಣಯ್ಯ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರು ರೈತಸಂಘದ ಕಾರ್ಯಕರ್ತರನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ ಎಂದು ಸುದ್ದಿಗೋಷ್ಠಿಯಲ್ಲಿ ನನಗೆ ಸಲಹೆ ನೀಡಿದ್ದಾರೆ.

ಚುನಾವಣೆಯಲ್ಲಿ ಕಾರ್ಯಕರ್ತರು ಯಾರ ಮಾತನ್ನೂ ಕೇಳ್ಳೋದಿಲ್ಲ, ಫೇಸ್‌ಬುಕ್‌, ವ್ಯಾಟ್ಸಾಪ್‌ಗ್ಳಲ್ಲಿ ಎಲ್ಲಾ ಪಕ್ಷದ ಕಾರ್ಯಕರ್ತರು ಟೀಕೆಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಕಾರ್ಯಕರ್ತರನ್ನು ನಿಯಂತ್ರಣ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಸಾಧ್ಯವಾದರೆ ಸಚಿವ ಪುಟ್ಟರಾಜು ಅವರೇ ನಿಯಂತ್ರಣ ಮಾಡಲಿ ಎಂದರು.

ಬಳಿಕ ತಿಮ್ಮನಕೊಪ್ಪಲು, ಚಿಕ್ಕಬ್ಯಾಡರಹಳ್ಳಿ, ತಾಳಶಾಸನ, ಕನಗನಮರಡಿ, ನುಗ್ಗಹಳ್ಳಿ, ಚಿಕ್ಕಮರಳಿ, ಪಟ್ಟಸೋಮನಹಳ್ಳಿ, ಚಿಕ್ಕಾಡೆ, ದೇವೇಗೌಡನಕೊಪ್ಪಲು, ಪಾಂಡವಪುರ ಟೌನ್‌, ಹರಳಹಳ್ಳಿ, ಕೆನ್ನಾಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಯಶ್‌ ಸುಮಲತಾ ಪರಪ್ರಚಾರ ನಡೆಸಿದರು. ರೈತನಾಯಕಿ ಸುನೀತಾ, ತಾಲೂಕು ಬಿಜೆಪಿ ಅಧ್ಯಕ್ಷ ಪ.ಮಾ.ರಮೇಶ್‌, ರೈತ ಮುಖಂಡರಾದ ಕೆಂಪೂಗೌಡ, ಗೋವಿಂದೇಗೌಡ, ಕ್ಯಾತನಹಳ್ಳಿ ದಯಾನಂದ ಮತ್ತಿತತರರಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.