ನಮಗೆ ಸಮೀಕ್ಷೆಗಿಂತ ಫ‌ಲಿತಾಂಶ ಮುಖ್ಯ: ಸುಮಾ

Team Udayavani, Apr 29, 2019, 10:38 AM IST

madya-sum

ಮಂಡ್ಯ: ಚುನಾವಣೋತ್ತರ ಸಮೀಕ್ಷೆಗಳನ್ನು ನಾನು ಗಂಭೀರವಾಗಿ ಪರಿಗಣಿಸಿಲ್ಲ. ಒಂದೊಂದು ಸಮೀಕ್ಷೆ ಒಬ್ಬೊಬ್ಬರ ಪರವಾಗಿವೆ. ಅದ ಕ್ಕಾಗಿ ಮೇ 23ರ ಫ‌ಲಿತಾಂಶವೇ ನನಗೆ ಮುಖ್ಯವಾಗಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಹೇಳಿ ದರು. ನಗರದ ಕನಕ ಭವನದಲ್ಲಿ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಹಾಗಾಗಿ ಅವುಗಳ ಬಗ್ಗೆ ಯೋಚನೆಯನ್ನೂ ಮಾv‌ುವುದಿಲ್ಲ. ತಲೆಕೆಡಿಸಿಕೊಳ್ಳುವುದೂ ಇಲ್ಲ. ಏನೇ ಇದ್ದರೂ ಮೇ 23ರವರೆಗೆ ಕಾದುನೋಡುವೆ. ನನಗೆ ಗೆಲ್ಲುವ ವಿಶ್ವಾಸವಿದೆ. ನಾನು ಯಾವುದೇ ಸರ್ವೆ ಮಾಡಿಸಿಲ್ಲ ಎಂದು ಹೇಳಿದರು.

ವಿಶೇಷ ಅರ್ಥ ಕಲ್ಪಿಸಬೇಕಿಲ್ಲ: ನನ್ನ ಹಾಗೂ ಮಾಜಿ ಸಚಿವರಾದ ಚಲುವರಾಯಸ್ವಾಮಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಇಬ್ಬರೂ ಲೋಕಾಭಿರಾಮವಾಗಿ ಕೆಲಕಾಲ ಚರ್ಚೆ ನಡೆಸಿದೆವು. ರಾಜಕೀಯವಾಗಿ ಏನನ್ನೂ ಮಾತನಾಡಿಲ್ಲ. ಚುನಾವಣೆ ಮುಗಿದಿರುವುದರಿಂದ ಸ್ವಲ್ಪ ರೆಸ್ಟ್‌ ಮಾಡಿ ಎಂದು ಸಲಹೆ ನೀಡಿದ್ದಾರೆಂದು ತಿಳಿಸಿದರು. ರೈತರ ಸಾಲ ಮನ್ನಾ ಮಾಡುವುದು ಬೇಡ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡಿ ಎಂದಿರುವ ನಟ ದರ್ಶನ್‌ ಮಾತಿಗೆ ಬೆಂಬಲ ಸೂಚಿಸಿದ ಸುಮಲತಾ, ದರ್ಶನ್‌ ಬಹಳ ಒಳ್ಳೆಯ ಹೇಳಿಕೆ ನೀಡಿದ್ದಾರೆ. ನನ್ನ ಮನಸ್ಸಿನಲ್ಲಿರುವುದೂ ಅದೇ ವಿಚಾರ. ಅವರ ಹೇಳಿಕೆಯನ್ನು ಪ್ರಶಂಸಿಸಬೇಕು. ಯಾವುದೇ ಸರ್ಕಾರವಿರಲಿ ಅದನ್ನು ಫಾಲೋ ಮಾಡುವುದು ಒಳ್ಳೆಯದು ಎಂದರು. ಇದು ನನಗೆ ವಿಶ್ರಾಂತಿ ಸಮಯ. ರಾಜಕೀಯ ಬಿಟ್ಟು ಬೇರೆ ವಿಚಾರ ಮಾತನಾಡೋಣ. ನಾನು ಎಲ್ಲರಿಗೂ ಇದೇ ಮಾತನ್ನು ಹೇಳಿದ್ದೇನೆ ಎಂದು ನುಡಿದರು.

ಅಭಿಮಾನಿ ಆರೋಗ್ಯ ವಿಚಾರಿಸಿದ ಸುಮಾ
ಮಂಡ್ಯ: ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಹಿಂತಿರುಗುವ ವೇಳೆ ಕ್ಯಾಂಟರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಅಭಿಮಾನಿಯೊಬ್ಬನ ನಿವಾಸಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ತೆರಳಿ ಆತನ ಆರೋಗ್ಯ ವಿಚಾರಿಸಿದರು.

ಭಾನುವಾರ ಮಂಡ್ಯ ತಾಲೂಕಿನ ಊರಮಾರಕಸಲಗೆರೆ ಗ್ರಾಮದ ಕಿರಣ್‌ ಅವರ ನಿವಾಸಕ್ಕೆ ತೆರಳಿದ ಸುಮಲತಾ ಅಂಬರೀಶ್‌, ಆತನ ಯೋಗಕ್ಷೇಮ ವಿಚಾರಿಸಿ ಕುಟುಂಬದವರಿಗೆ ಧೈರ್ಯ ಹೇಳಿದರು. ಮಾ.20ರಂದು ನಡೆದ ಸುಮಲತಾ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಿರಣ್‌ ಸ್ನೇಹಿತರೊಬ್ಬರ ಬೈಕ್‌ನಲ್ಲಿ ಊರಿಗೆ ಹಿಂತಿರುಗುವಾಗ ಕ್ಯಾಂಟರ್‌ ಡಿಕ್ಕಿ ಹೊಡೆದು ಕಿರಣ್‌ ಗಾಯಗೊಂಡಿದ್ದನು.

ತೀವ್ರ ಗಾಯಗೊಂಡಿದ್ದ ಕಿರಣ್‌ನನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಮನೆಗೆ ಬಂದಿವ ಕಿರಣ್‌ ಇನ್ನೂ ಸಂಪೂರ್ಣ ಚೇತರಿಸಿಕೊಂಡಿಲ್ಲ. ಸುಮಲತಾ ಅವರು ಅವರ ಯೋಗಕ್ಷೇಮ ವಿಚಾರಿಸಿ ಅರ್ಧ ತಾಸು ಮನೆಯಲ್ಲೇ ಇದ್ದು ಕುಟುಂಬದ ಪರಿಸ್ಥಿತಿಯನ್ನು ಅರಿತುಕೊಂಡರು.

ಸ್ವಾಗತ: ಊರಮಾರಕಸಲಗೆರೆ ಗ್ರಾಮಕ್ಕೆ ಆಗಮಿಸಿದ ಸುಮಲತಾ ಅಂಬರೀಶ್‌ ಅವರನ್ನು ಮಹಿಳೆಯರು ಹೂ ಮಾಲೆ ಹಾಕಿ ಅಭಿನಂದಿಸಿದರು. ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಮುಗಿಬಿದ್ದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.