Udayavni Special

ಸಮೀಕ್ಷಾ ವರದಿ: ಕಂಗೆಟ್ಟ ಸಿಎಂ ಕುಮಾರಸ್ವಾಮಿ


Team Udayavani, Apr 29, 2019, 10:33 AM IST

nikhil-suma

ಮಂಡ್ಯ: ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರವಾಗಿ ಬಿಂಭಿತವಾಗಿದ್ದು, ಜೆಡಿಎಸ್‌ ಮತ್ತು ಪಕ್ಷೇತರ ಅಭ್ಯರ್ಥಿಯ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಯ ನಂತರವೂ ಸುದ್ದಿಯಲ್ಲಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖೀಲ್ ವಿರುದ್ಧ ಸುಮಲತಾ ಅಂಬರೀಶ್‌ ಸ್ಪರ್ಧೆಯಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದ ಮಂಡ್ಯ, ಈಗ ಸೋಲು-ಗೆಲುವಿನ ಲೆಕ್ಕಾಚಾರದಿಂದಾಗಿ ಮತ್ತೂಮ್ಮೆ ಮುನ್ನಲೆಗೆ ಬಂದಿದೆ.

ಚುನಾವಣಾ ನಂತರದ ಪ್ರಾಥಮಿಕ ವರದಿಯಲ್ಲಿ ನಿಖೀಲ್ಕುಮಾರಸ್ವಾಮಿ 40 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆಂಬ ಗುಪ್ತದಳದ ವರದಿಯನ್ನಾಧರಿಸಿ ಜೆಡಿಎಸ್‌ ವಲಯದಲ್ಲಿ ಸಂಭ್ರಮದ ವಾತಾವರಣ ಇತ್ತು. ಆದರೆ, ನಂತರದ ಜನಾಭಿಪ್ರಾಯ ಮತ್ತು ಜೆಡಿಎಸ್‌ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ನಿಖೀಲ್ ಕುಮಾರಸ್ವಾಮಿಗೆ ಹಿನ್ನಡೆಯಾಗುವ ಸಾಧ್ಯತೆಗಳಿವೆ ಎಂಬ ಮಾತು ಕೇಳಿ ಬಂದಿದ್ದು, ಇದು ಜಿಲ್ಲೆಯ ರಾಜಕಾರಣದ ಮೇಲೆ ಗಂಭೀರ ಪ್ರಭಾವ ಬೀರಿದೆ.

ಮುಖ್ಯಮಂತ್ರಿಗಳಿಗೆ ಆಘಾತ: ಪ್ರಸ್ತುತ ಸಮೀಕ್ಷೆಯ ಪ್ರಕಾರ, ಮಂಡ್ಯ, ಮಳವಳ್ಳಿ ಮತ್ತು ಮದ್ದೂರು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಅವರಿಗಿಂತಲೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಮುನ್ನಡೆಯನ್ನು ಸಾಧಿಸಲಿದ್ದಾರೆ ಎಂಬುದು ಸಮೀಕ್ಷೆಯಿಂದ ಹೊರ ಬಂದಿದ್ದು, ಇದು ಜೆಡಿಎಸ್‌ಗೆ ನುಂಗಲಾದರ ತುತ್ತಾದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಆಘಾತವನ್ನುಂಟುಮಾಡಿದೆ ಎನ್ನಲಾಗಿದೆ.

ಮಳವಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲಗೂರು ಹೋಬಳಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಜೆಡಿಎಸ್‌ ಪರವಾದ ವಾತಾವರಣವಿದ್ದರೂ, ಉಳಿದಂತೆ ಕ್ಷೇತ್ರಾದ್ಯಂತ ಸುಮಲತಾ ಪರ ಮತದಾರರು ಹಕ್ಕು ಚಲಾಯಿಸಿದ್ದಾರೆಂಬ ಮಾತುಗಳು ದಟ್ಟವಾಗಿ ಕೇಳಿ ಬರುತ್ತಿದ್ದು, ಇದರಿಂದಾಗಿ ಜೆಡಿಎಸ್‌ ಕಾರ್ಯಕರ್ತರಲ್ಲಿ ಆತಂಕ ಉಂಟಾಗಿದೆ. ಉಳಿದಂತೆ ಶ್ರೀರಂಗಪಟ್ಟಣ, ನಾಗಮಂಗಲ, ಮೇಲುಕೋಟೆ, ಕೆ.ಆರ್‌. ಪೇಟೆ ಮತ್ತು ಕೆ.ಆರ್‌. ನಗರ ವಿಧಾನ ಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಯುತ್ತಿದೆ ಎನ್ನಲಾಗಿದ್ದು, ಈ ವರದಿಯಲ್ಲಿ ಮತದಾನ ಯಾರ ಪರ ಆಗಿದೆ ಎಂಬ ಅಂದಾಜು ಮಾಹಿತಿ ದೊರೆಯಲಿದೆ.

ಸುಮಲತಾ ಪರ: ಸಮೀಕ್ಷೆ ನಡೆಯುತ್ತಿರುವ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಮೇಲುಕೋಟೆ ಮತ್ತು ನಾಗಮಂಗಲದಲ್ಲಿ ಜೆಡಿಎಸ್‌ ಮುನ್ನಡೆ ಸಾಧಿÓಬಹುದೆಂಬ ಭರವಸೆ ಇದೆಯಾದರೂ, ಕೆ.ಆರ್‌.ಪೇಟೆ ಮತ್ತು ಕೆ.ಆರ್‌.ನಗರ ಕ್ಷೇತ್ರಗಳು ಸುಮಲತಾ ಪರ ನಿಲ್ಲಲಿವೆ ಎಂಬ ಅಭಿಪ್ರಾಯಗಳು ಮೇಲ್ನೋಟಕ್ಕೆ ವ್ಯಕ್ತವಾಗುತ್ತಿದೆ.

ಈಗಾಗಲೇ ಸುಮಲತಾ ಅಂಬರೀಶ್‌ ಗೆಲುವಿನ ಭರವಸೆಯಲ್ಲಿದ್ದು, ಚುನಾವಣೆ ನಡೆದ ಮೂರು ದಿನದ ಬಳಿಕ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಅರ್ಪಿಸುವ ಮೂಲಕ ತಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸಿದ್ದಾರೆ. ಆನಂತರದಲ್ಲಿ ಮೈತ್ರಿ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಕೂಡ ಜೆಡಿಎಸ್‌ ಜಿಲ್ಲಾಧ್ಯಕ್ಷರ ಮನೆಯಲ್ಲೇ ಸುದ್ಧಿಗೋಷ್ಠಿ ನಡೆಸಿ, ಗೆಲುವಿನ ಬಗ್ಗೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ.

ಸಚಿವರ ನಿವೃತ್ತಿ ಘೋಷಣೆ ಚರ್ಚೆ: ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಮೈತ್ರಿ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ. ಒಂದು ವೇಳೆ ನಿಖೀಲ್ ಪರಾಭವಗೊಂಡರೆ ತಾವು ರಾಜಕೀಯವಾಗಿಯೇ ನಿವೃತ್ತಿ ಘೋಷಿಸುವುದಾಗಿ ಸವಾಲು ಹಾಕಿರುವುದು ಕೂಡ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಅಧಿಕಾರ ಬಲವನ್ನು ಸಮರ್ಥವಾಗಿ ಬಳಸಿ, ಪುತ್ರ ನಿಖೀಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲೇಬೇಕೆಂಬ ಉತ್ಕಟತೆಯನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಯ ನಂತರವೂ ಬೂತ್‌ವಾರು ವರದಿಯನ್ನು ಸಂಗ್ರಹಿಸುತ್ತಾ, ಗೆಲುವಿಗೆ ಪೂರಕವಾದ ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ.

ಹಿನ್ನಡೆ ಕ್ಷೇತ್ರಗಳ ಶಾಸಕರಿಗೆ ಮುಖ್ಯಮಂತ್ರಿ ತರಾಟೆ

ಜೆಡಿಎಸ್‌ನ ಆಂತರಿಕ ಸಮೀಕ್ಷೆಯಲ್ಲಿ ನಿಖೀಲ್ ಕುಮಾರಸ್ವಾಮಿಯವರಿಗೆ ಹಿನ್ನಡೆಯಾಗಿರುವ ಕ್ಷೇತ್ರದ ಶಾಸಕರಾದ ಡಾ.ಕೆ.ಆನ್ನದಾನಿ, ಎಂ.ಶ್ರೀನಿವಾಸ್‌ ಮತ್ತು ಸಚಿವ ಡಿ.ಸಿ.ತಮ್ಮಣ್ಣ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಸ್ಥಳೀಯವಾಗಿ ಕಾಂಗ್ರೆಸ್‌ ನಾಯಕರೊಡನೆ ಸಾಮರಸ್ಯ ಸಾಧಿಸುವಲ್ಲಿ ವಿಫಲರಾಗಿದ್ದೀರಿ ಎಂಬ ಆರೋಪವನ್ನು ಕೂಡ ಜೆಡಿಎಸ್‌ ಶಾಸಕರ ಮೇಲೆ ಹೊರಿಸಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣೆಯ ಆರಂಭಿಕ ಹಂತದಿಂದ ಕ್ಷೇತ್ರದ ಚುನಾವಣಾ ನಾಯಕತ್ವವನ್ನು ಆಯಾ ಶಾಸಕರಿಗೆ ನೀಡಲಾಗಿತ್ತು. ಆದರೆ, ನಂತರದ ಬೆಳವಣಿಗೆಯಲ್ಲಿ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಜಿಲ್ಲೆಯಲ್ಲಿ ಠಿಕಾಣಿ ಹೂಡಿ ಚುನಾವಣಾ ಸಾರಥ್ಯವನ್ನು ವಹಿಸಿಕೊಂಡರು. ಅಲ್ಲದೆ, ಸ್ವಾಭಿಮಾನವನ್ನು ಬಿಟ್ಟು ಬೆನ್ನಿಗೆ ಚೂರಿ ಹಾಕುವ ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗುವುದಿಲ್ಲವೆಂಬ ಖಡಕ್‌ ಸಂದೇಶ ವನ್ನು ರವಾನಿಸಿದ್ದರು.

ಚುನಾವಣೆಯ ಯಾವುದೇ ಸಂದರ್ಭದಲ್ಲೂ ಪರಾಜಿತ ಕಾಂಗ್ರೆಸ್‌ ಶಾಸಕರ ಮನೆ ಬಾಗಿಲಿಗೆ ಹೋಗುವ ಕನಿಷ್ಠ ಪ್ರಯತ್ನವನ್ನೂ ಮಾಡದ ಮುಖ್ಯಮಂತ್ರಿ ಕುಮಾರಸ್ವಾಮಿ, ಹಳೆಯ ಕಾಂಗ್ರೆಸ್ಸಿಗರೆಲ್ಲರೂ ನಮ್ಮ ಜತೆಯೇ ಇದ್ದಾರೆಂದು ಹೇಳಿಕೊಳ್ಳುವ ಮೂಲಕ ರೆಬಲ್ ಕಾಂಗ್ರೆಸ್ಸಿಗರಿಗೆ ಟಾಂಗ್‌ ಕೊಡುವ ಪ್ರಯತ್ನ ನಡೆಸಿದ್ದರು. ಹೀಗೆ ಇಡೀ ಚುನಾವಣೆಯ ಉಸ್ತುವಾರಿಯನ್ನು ಸ್ವತಃ ಮುಖ್ಯಮಂತ್ರಿಯವರೇ ನಿರ್ವಹಿಸಿ, ಈಗ ಜೆಡಿಎಸ್‌ ಹಿನ್ನಡೆಗೆ ಶಾಸಕರನ್ನು ಗುರಿ ಮಾಡುತ್ತಿರುವುದು ಎಷ್ಟು ಸರಿ ಎಂಬುದು ಪ್ರಶ್ನೆಯಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ತನ್ನ ವೇತನವನ್ನೇ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡಿದ ಸಚಿವ ಪ್ರಭು ಚವ್ಹಾಣ್

ತನ್ನ ವೇತನವನ್ನೇ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡಿದ ಸಚಿವ ಪ್ರಭು ಚವ್ಹಾಣ್

ಕೊಯ್ನಾ ಜಲಾಶಯದ ಬಳಿ ಭೂಕಂಪನ: ಆತಂಕದಲ್ಲಿ ನದಿ ತೀರದ ಜನತೆ

ಕೊಯ್ನಾ ಜಲಾಶಯದ ಬಳಿ ಭೂಕಂಪನ: ಆತಂಕದಲ್ಲಿ ನದಿ ತೀರದ ಜನತೆ

ಬೇಟೆಯಾಡಲೆಂದು ಹೋದವನು ಜೊತೆಯಲ್ಲಿದ್ದವನ ಗುಂಡೇಟಿಗೆ ಬಲಿ!

ಬೇಟೆಯಾಡಲೆಂದು ಹೋದವನು ಜೊತೆಯಲ್ಲಿದ್ದವನ ಗುಂಡೇಟಿಗೆ ಬಲಿ!

ಗ್ರಾಮದ ಮುಖ್ಯಸ್ಥನ ಹತ್ಯೆ: ಹಲವಾರು ವಾಹನ, ಪೊಲೀಸ್ ಔಟ್ ಪೋಸ್ಟ್ ಗೆ ಬೆಂಕಿ

ಗ್ರಾಮದ ಮುಖ್ಯಸ್ಥನ ಹತ್ಯೆ: ಹಲವಾರು ವಾಹನ, ಪೊಲೀಸ್ ಔಟ್ ಪೋಸ್ಟ್ ಗೆ ಬೆಂಕಿ

ಎಂ ಎಸ್ ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕು: ಚೆನ್ನೈ ಕೋಚ್ ಮೈಕ್ ಹಸ್ಸಿ

ಎಂ ಎಸ್ ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕು: ಚೆನ್ನೈ ಕೋಚ್ ಮೈಕ್ ಹಸ್ಸಿ

facebook

ಇನ್​ಸ್ಟಾಗ್ರಾಂ ಹಾಗೂ ಮೆಸೆಂಜರ್ ‘Chats’ ವಿಲೀನ ? ಫೇಸ್‍ಬುಕ್‍ ಹೇಳಿದ್ದೇನು ?

ಬ್ರಹ್ಮಗಿರಿ ಬೆಟ್ಟ ದುರಂತ: ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ!

ಬ್ರಹ್ಮಗಿರಿ ಬೆಟ್ಟ ದುರಂತ: ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ!
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆ ಸಮೀಕ್ಷೆ ಗೆ ಅವಕಾಶ

ಬೆಳೆ ಸಮೀಕ್ಷೆ ಗೆ ಅವಕಾಶ

ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿ

ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿ

ಮಂಡ್ಯಕ್ಕೆ ಎ ಗ್ರೇಡ್‌ ಶ್ರೇಣಿಯಲ್ಲಿ ನಾಲ್ಕನೇ ಸ್ಥಾನ

ಮಂಡ್ಯಕ್ಕೆ ಎ ಗ್ರೇಡ್‌ ಶ್ರೇಣಿಯಲ್ಲಿ ನಾಲ್ಕನೇ ಸ್ಥಾನ

mandya-tdy-1

ಬೆಳೆ ನಷ್ಟ ಸಮೀಕ್ಷೆಗೆ ತಂಡ ರಚನೆ

ನಾಳೆ ಸಕ್ಕರೆ ಕಾರ್ಖಾನೆ ಉದ್ಘಾಟನೆ

ನಾಳೆ ಸಕ್ಕರೆ ಕಾರ್ಖಾನೆ ಉದ್ಘಾಟನೆ

MUST WATCH

udayavani youtube

ಬೆಂಗಳೂರು ಗಲಭೆ: ಹತ್ತಾರು ಪ್ರಶ್ನೆಗಳು !

udayavani youtube

ಕರಂಬಾರು ಭಜನಾ ಮಂದಿರದಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ಮಕ್ಕಳಿಗೆ ಪಾಠ

udayavani youtube

Gendun Gyatso Lama : ನಾನೇಕೆ ಭಾರತಕ್ಕೆ ಓಡಿ ಬಂದೆ? ಸ್ವಾತಂತ್ರ್ಯದ ಓಟ

udayavani youtube

ಅನಂತ ಕುಮಾರ್ ಹೇಳಿಕೆ ವಿರೋಧಿಸಿ BSNL Employees Union ಮಂಗಳೂರು ವತಿಯಿಂದ ಪ್ರತಿಭಟನೆ

udayavani youtube

ವರ್ಷಕ್ಕೊಮ್ಮೆಯಾದರೂ ಭೂಮಿತಾಯಿಯ ಸೇವೆಯನ್ನು ಮಾಡೋಣ ಎಂದು ವಿನಂತಿಸಿದ ಕೃಷಿಕ Rangayya Naikಹೊಸ ಸೇರ್ಪಡೆ

ಬೆಳೆ ಸಮೀಕ್ಷೆಗೆ ಚಾಲನೆ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಬೆಳೆ ಸಮೀಕ್ಷೆಗೆ ಚಾಲನೆ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ತೋಟಗಾರಿಕೆ ಕ್ಷೇತ್ರದಲ್ಲಿ ಉದ್ಯೋಗಾವಕಾಶ

ತೋಟಗಾರಿಕೆ ಕ್ಷೇತ್ರದಲ್ಲಿ ಉದ್ಯೋಗಾವಕಾಶ

ತನ್ನ ವೇತನವನ್ನೇ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡಿದ ಸಚಿವ ಪ್ರಭು ಚವ್ಹಾಣ್

ತನ್ನ ವೇತನವನ್ನೇ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ನೀಡಿದ ಸಚಿವ ಪ್ರಭು ಚವ್ಹಾಣ್

ಬೆಳೆ ಸಮೀಕ್ಷೆ ಯಶಸ್ವಿಗೊಳಿಸಲು ಶ್ರಮಿಸಿ

ಬೆಳೆ ಸಮೀಕ್ಷೆ ಯಶಸ್ವಿಗೊಳಿಸಲು ಶ್ರಮಿಸಿ

ಬೆಳೆ ಸಮೀಕ್ಷೆ ಮೊಬೈಲ್‌ ಆ್ಯಪ್‌ಗೆ ಚಾಲನೆ

ಬೆಳೆ ಸಮೀಕ್ಷೆ ಮೊಬೈಲ್‌ ಆ್ಯಪ್‌ಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.