ಹೊರಗಿನಿಂದ 1,400 ಜನರ ಆಗಮನ


Team Udayavani, May 21, 2020, 5:08 AM IST

horagininda

ಮಂಡ್ಯ: ಹೊರ ರಾಜ್ಯಗಳಿಂದ ಇದುವರೆಗೆ 1400 ಜನರು ಜಿಲ್ಲೆಗೆ ಆಗಮಿಸಿದ್ದಾರೆ. ಬಂದವರನ್ನೆಲ್ಲಾ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಿದ್ದು, ಇವರಲ್ಲೇ ಸೋಂಕಿತರೂ ಇದ್ದಾರೆ. ಅವರಿಂದ ಸ್ಥಳೀಯರಿಗೆ ಸೋಂಕು ಹರಡುವ ಸಾಧ್ಯತೆಗಳಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಮಂಡ್ಯ ಜಿಲ್ಲೆಯ ಅಧಿಕಾರಿಗಳ ಜತೆ ಕೋವಿಡ್‌-19 ಸಂಬಂಧ ಸಭೆ ನಡೆಸಿ  ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿರುವುದು ನಿಜ. ಆದರೆ, ಸೋಂಕಿತರೆಲ್ಲ ಹೊರ ರಾಜ್ಯಗಳಿಂದ ಬಂದು ಕ್ವಾರಂಟೈನ್‌ ಆಗಿರುವವರು. ಅವರಿಂದ ಜಿಲ್ಲೆಯ ಜನರಿಗೆ ಹರಡಲು  ಅವಕಾಶವಿಲ್ಲ ಎಂದು ತಿಳಿಸಿದರು.

ಅಗತ್ಯ ಸೌಲಭ್ಯ ಕಲ್ಪಿಸಿ: ಕ್ವಾರಂಟೈನ್‌ ಆಗಿರುವವರಿಗೆ ಗುಣಮಟ್ಟದ ಊಟ-ತಿಂಡಿ ನೀಡಬೇಕು. ಅಗತ್ಯ ಎಲ್ಲ ಸೌಲಭ್ಯ ಕಡ್ಡಾಯವಾಗಿ ನೀಡಬೇಕು. ಜಿಲ್ಲೆಗೆ ಆಗಮಿಸಲು ಇರುವ ಎಲ್ಲ ಮಾರ್ಗಗಳನ್ನ ಬಂದ್‌ ಮಾಡಲಾಗಿದೆ. ಈ  ಹಿಂದೆ  ನೀಡಿದ್ದ ಪಾಸ್‌ ಅಥವಾ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಬಂದವರನ್ನ ಕಡ್ಡಾಯ ಕ್ವಾರಂಟೈನ್‌ ಮಾಡಲಾಗುತ್ತಿದೆ ಎಂದು ಹೇಳಿದರು.

ಆರೋಗ್ಯ ಸೇತು ಆ್ಯಪ್‌: ಕೋವಿಡ್‌ -19 ಪತ್ತೆ ಹಚ್ಚಲು ಪರೀಕ್ಷಾ ಸಾಧನ ಕೊರತೆ ಇದ್ದರೆ, ಕ್ವಾರಂಟೈನ್‌ಗೆ ಸ್ಥಳಾವಕಾಶದ ಕೊರತೆ ಇದ್ದರೆ, ಅನುದಾನದ ಅಗತ್ಯ ಇದ್ದರೆ ಕೂಡಲೇ ಗಮನಕ್ಕೆ ತರಬೇಕು. ಆರೋಗ್ಯ ಸೇತು ಆ್ಯಪ್‌ನ್ನು  ಸಾರ್ವಜನಿಕರು ಅಳವಡಿಸಿಕೊಳ್ಳಲು ಮಾಹಿತಿ ನೀಡಬೇಕು ಎಂದು ವಿಡಿಯೊ ಕಾನ್ಫರೆನ್ಸ್‌ನಲ್ಲಿ ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ: ಅಲ್ಲದೆ ಜಿಲ್ಲೆಯಲ್ಲಿ ಈಗಾಗಲೇ ಕ್ವಾರಂಟೈನಲ್ಲಿರುವವರ ಪೈಕಿ 500 ಕ್ಕೂ ಹೆಚ್ಚು ಜನರ ಟೆಸ್ಟ್‌ ರಿಪೋರ್ಟ್‌ ಬರಬೇಕಿದೆ. ಇವರಲ್ಲಿ ಪಾಸಿಟೀವ್‌ ಬಂದವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ  ಸೂಚಿಸಲಾಗಿದೆ. ಜನ ಭಯಭೀತರಾಗುವುದು ಬೇಡ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.